logo
ಕನ್ನಡ ಸುದ್ದಿ  /  ಕರ್ನಾಟಕ  /  Cm Bommai: ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ: ಸಿಎಂ ಬೊಮ್ಮಾಯಿ

CM Bommai: ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ: ಸಿಎಂ ಬೊಮ್ಮಾಯಿ

HT Kannada Desk HT Kannada

Nov 27, 2022 07:42 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    • ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಸರ್ಕಾರ ನಮ್ಮದು. ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು: ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಸರ್ಕಾರ ನಮ್ಮದು. ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾರಾಯಣ ಗುರು ಅವರ ಹೆಸರಿನಲ್ಲಿ ವಸತಿ ಶಾಲೆ, ಎಸ್ಸಿ ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ, 50 ಕನಕದಾಸ ಹಾಸ್ಟೆಲ್ ನಿರ್ಮಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಲಾಗುತ್ತಿದೆ ಎಂದರು.

ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ನಾಡು ಶೃಂಗೇರಿ. ನಾನು ದೇವರ ನಾಡಿಗೆ ಬಂದಿದ್ದೇನೆ ಎಂದ ಮುಖ್ಯಮಂತ್ರಿಗಳು ಜನಸಂಕಲ್ಪ ಯಾತ್ರೆಗೆ ಜನ ಬೆಂಬಲ ಸಿಗುತ್ತಿದೆ. ಮೋದಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತ ನಡೆಸ್ತಿದೆ. ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲದಿಂದ ವಿಜಯ ಸಂಕಲ್ಪ ಯಾತ್ರೆಯಾಗಿ ಯಶಸ್ವಿಯಾಗಿದೆ ಎಂದರು.

ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ 6000 ರಾಷ್ಟ್ರೀಯ ಹೆದ್ದಾರಿ ರಸ್ತೆ, ಬಂದರುಗಳ ನಿರ್ಮಾಣ, ಜಲಜೀವನ ಮಿಷನ್ ಯೋಜನೆಗಳು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿಯಾದ ಕುಡಿಯುವ ನೀರಿನ ಯೋಜನೆಯನ್ನು ಕೇವಲ ಒಂದೇ ವರ್ಷದಲ್ಲಿ 30 ಲಕ್ಷ ಮನೆಗಳಿಗೆ ಪೂರೈಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಅನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮರ್ಥವಾಗಿ ನಿರ್ವಹಿಸಲಾಯಿತು. ಔಷಧಿ, ಆರೋಗ್ಯ ಮೂಲಸೌಕರ್ಯಗಳನ್ನು ಸಪರ್ಪಕವಾಗಿ ನೀಡಲಾಯಿತು. ಪ್ರವಾಹದಲ್ಲಿಯೂ 5 ಲಕ್ಷ ಪರಿಹಾರಗಳನ್ನು ನೀಡಲಾಯಿತು. ಬೆಳೆಹಾನಿ ಪರಿಹಾರವನ್ನು ದುಪ್ಪಟ್ಟುಗೊಳಿಸಿ ರೈತರಿಗೆ ನೀಡಲಾಗುತ್ತಿದೆ. ರೈತರಿಗೆ 5 ಹೆಚ್ ಪಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರೈತಮಕ್ಕಳಿಗೆ ವಿದ್ಯಾನಿಧಿ, 6 ಲಕ್ಷ ರೈತ ಕೂಲಿಕಾರ್ಮಿಕರಿಗೆ ವಿದ್ಯಾನಿಧಿ ನೀಡುತ್ತಿದೆ ಎಂದರು.

5 ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ, ಪ್ರತಿ ಗ್ರಾಮದಲ್ಲಿ ಎರಡು ವಿವೇಕಾನಂದ ಯುವಕ ಸಂಘ ಕ್ಕೆ ಆರ್ಥಿಕ ಸಹಾಯ ನೀಡಿ, ಅವರ ಸ್ವಯಂಉದ್ಯೋಗಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ ಕಂಬಾರ,ಕುಂಬಾರ, ಬಡಿಗೇರ, ಟೇಲರ್ ಗಳಿಗೆ ಅವರ ವೃತ್ತಿ ಕಾಯದ ಆಧಾರದ ಮೇಲೆ ಕಾಯಕ ಯೋಜನೆಯ ಮೂಲಕ ಸಾಲ ನೀಡಲಾಗುತ್ತದೆ ಎಂದರು.

ಸರ್ಕಾರ ಹಾಗು ಜನರು ಶ್ರೀಮಂತ ರಾಗಬೇಕು. ಜನರ ಬಳಿ ಹಣ ಇದ್ದರೆ ಮಾತ್ರ ಸರ್ಕಾರ ಶ್ರೀಮಂತ ಆಗುತ್ತದೆ. ದುಡಿಮೆಯೇ ದೊಡ್ಡಪ್ಪ ಎನ್ನುವ ಕಾಲವಿದು.ಜನರು ಆರ್ಥಿಕವಾಗಿ ಸಬಲರಾಗಬೇಕು ಎಂಬುದು ಸರ್ಕಾರದ ಸಂಕಲ್ಪ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಭೈರತಿ ಬಸವರಾಜ್, ಗೋವಿಂದ ಕಾರಜೋಳ, ಮಾಜಿ ಸಚಿವ ಡಿ.ಎನ್. ಜೀವರಾಜ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶಾಸಕರು ಸೇರಿ ಹಲವರು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ