logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Assembly Election: ಸಚಿವ ಸುಧಾಕರ್ ಸಮ್ಮುಖದಲ್ಲಿ ಜೆಡಿಎಸ್, ಎಎಪಿ ಮುುಖಂಡರು ಬಿಜೆಪಿ ಸೇರ್ಪಡೆ

Karnataka Assembly Election: ಸಚಿವ ಸುಧಾಕರ್ ಸಮ್ಮುಖದಲ್ಲಿ ಜೆಡಿಎಸ್, ಎಎಪಿ ಮುುಖಂಡರು ಬಿಜೆಪಿ ಸೇರ್ಪಡೆ

Raghavendra M Y HT Kannada

Apr 11, 2023 03:01 PM IST

ಜೆಡಿಎಸ್ ಹಾಗೂ ಎಎಪಿಯ ಕೆಲ ಮುಖಂಡರು ಮತ್ತವರ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ.

  • ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸಮ್ಮುಖದಲ್ಲಿ ಜೆಡಿಎಸ್ ಹಾಗೂ ಎಎಪಿಯ ಕೆಲವು ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ಹಾಗೂ ಎಎಪಿಯ ಕೆಲ ಮುಖಂಡರು ಮತ್ತವರ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ.
ಜೆಡಿಎಸ್ ಹಾಗೂ ಎಎಪಿಯ ಕೆಲ ಮುಖಂಡರು ಮತ್ತವರ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ (Karnataka Assembly Election 2023) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಜೆಪಿಯಲ್ಲಿ (BJP) ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡದಿರುವುದು ಆ ಪಕ್ಷದ ಆಕಾಂಕ್ಷಿಗಳಲ್ಲಿ ಎದೆ ಬಡಿತ ಹೆಚ್ಚಾಗುವಂತೆ ಮಾಡಿದೆ.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಮತ್ತೊಂದೆಡೆ ಜೆಡಿಎಸ್ (JDS) ಹಾಗೂ ಎಎಪಿಯ(AAP) ಅಭ್ಯರ್ಥಿಗಳನ್ನು ಘೋಷಿಸಿ ಅಖಾಡಕ್ಕೆ ಇಳಿದರುವ ಬೆನ್ನಲ್ಲೇ ಈ ಪಕ್ಷಗಳಿಗೆ ಕೆಲ ಮುಖಂಡರು ಶಾಕ್ ನೀಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಜನತಾ ದಳ (ಜಾತ್ಯತೀತ) ಪಕ್ಷದ ಹಲವು ಪ್ರಮುಖ ನಾಯಕರು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರ ನೇತೃತ್ವದಲ್ಲಿ ನಿನ್ನೆ (ಏ.10) ಬಿಜೆಪಿಗೆ ಸೇರಿದ್ದಾರೆ.

ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಎಎಪಿಯ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹರೆಡ್ಡಿ ಸೇರಿದಂತೆ ವಿವಿಧ ಪಕ್ಷಗಳ ಬೆಂಬಲಿಗರು ಕೇಸರಿ ಪಕ್ಷಕ್ಕೆ ಸೇರ್ಪಡೆಯಾದ ಪ್ರಮುಖರಾಗಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿಯ ಮುಖಂಡರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತಿತರ ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರು ಹಾಗೂ ಕಾರ್ಯಕರ್ತರನ್ನು ಸ್ವಾಗತಿಸಿದ್ದಾರೆ.

ಚುನಾವಣಾ ಪ್ರಚಾರದ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ: ಸಿಎಂ

ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿಯಲ್ಲಿ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ್ಪ ನವರು ಎಲ್ಲಾ ಮೀಟಿಂಗ್ ನಲ್ಲೂ ಸಹ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ ಅಧ್ಯಕ್ಷರನ್ನು ಸಹ ಭೇಟಿಯಾಗಿ ಅವರ ವೈಯಕ್ತಿಕ ಅಭಿಪ್ರಾಯ ನೀಡಿದ್ದಾರೆ. ನಾವು ಸುದೀರ್ಘವಾದ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಹೇಗೆಲ್ಲ ಕಾರ್ಯ ನಿರ್ವಹಿಸಬೇಕು ಅಂತ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂದಮೇಲೆ ಇಂದು ತಡ ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ನಿನ್ನೆ ತಿಳಿಸಿದ್ದಾರೆ.

ಶಿಗ್ಗಾವಿಯಲ್ಲೇ ಸ್ಪರ್ಧೆ

ನಾನು ಶಿಗ್ಗಾವಿದಲ್ಲಿ ಸ್ಪರ್ಧೆ ಮಾಡುತ್ತೇನೆ. ಬೇರೆ ಕ್ಷೇತ್ರಕ್ಕೆ ಹೋಗೋ ಪ್ರಶ್ನೆಯೇ ಇಲ್ಲಾ ಎಂದರು. ಅಲ್ಲದೇ ಹಾಲಿ ಶಾಸಕರಿಗೆ ಕೊಕ್ ನೀಡಲಾಗುತ್ತದೆ ಅನ್ನುವುದು ಉಹಾಪೂಹಾ‌ ಅಷ್ಟೇ. ನಮ್ಮ ಬಿಜೆಪಿಯಲ್ಲಿ ಕೆಲವು ಮಾನದಂಡಗಳಿವೆ. ಅದೇ ಪ್ರಕಾರ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಭ್ರಷ್ಟಾಚಾರ ಆರೋಪಿಗಳಿಗೆ, ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡವರಿಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಕೆಲವು ವಿಷಯಗಳ ಬಗ್ಗೆ ಸ್ಪಷ್ಟತೆ ಇದೆ. ಅದರ ರೀತಿಯಲ್ಲೇ ಟಿಕೆಟ್ ಅಂತಿಮ ಆಗುತ್ತದೆ. ಎಲ್ಲ ಮಾನದಂಡದ ಬಗ್ಗೆ ಚರ್ಚೆ ಆಗಿದೆ, ಈ ಬಗ್ಗೆಯೂ ಚರ್ಚೆ ಆಗಿದೆ ಎಂದು ಸಿಎಂ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಏಕೈಕ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಗೆದ್ದುಕೊಂಡಿತ್ತು.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ವಿಧಾನಸಭೆಯ ಮತ ಎಣಿಕೆ ನಡೆಯಲಿದೆ. ಯಾವ ಪಕ್ಷಕ್ಕೆ ಮತದಾರ ಒಲವು ತೋರಿದ್ದಾನೆ ಎಂಬ ಸ್ಪಷ್ಟ ಚಿತ್ರಣವು ಅಂದು ಹೊರಬೀಳಲಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ