logo
ಕನ್ನಡ ಸುದ್ದಿ  /  ಕರ್ನಾಟಕ  /  Mangaluru Food Poisoning: ವಿಷಾಹಾರ ಸೇವಿಸಿ ಮಂಗಳೂರಿನ 137ಕ್ಕೂ ಹೆಚ್ಚು ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ

Mangaluru Food Poisoning: ವಿಷಾಹಾರ ಸೇವಿಸಿ ಮಂಗಳೂರಿನ 137ಕ್ಕೂ ಹೆಚ್ಚು ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ

HT Kannada Desk HT Kannada

Feb 07, 2023 09:41 AM IST

ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ

    • ವಿಷಾಹಾರ ಸೇವಿಸಿ 137ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದ ಖಾಸಗಿ ಹಾಸ್ಟೆಲ್‌ನಲ್ಲಿ ನಡೆದಿದೆ.
ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ
ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: ವಿಷಾಹಾರ ಸೇವಿಸಿ 137ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದ ಖಾಸಗಿ ಹಾಸ್ಟೆಲ್‌ನಲ್ಲಿ ನಡೆದಿದೆ.

ಟ್ರೆಂಡಿಂಗ್​ ಸುದ್ದಿ

Bangalore News: ಬೆಂಗಳೂರಲ್ಲಿ ನಾಯಿಗಳಿಗೆ ಊಟ ಹಾಕಲು ಸಮಯ ನಿಗದಿಗೆ ಮುಂದಾದ ಪಾಲಿಕೆ, ಸಾರ್ವಜನಿಕರ ಆಕ್ರೋಶ

Bangalore Rain: ಬೆಂಗಳೂರಿಗೆ ತಂಪೆರದ ಮಳೆ; ರಾಜ್ಯದಲ್ಲಿ ಮತ್ತೆರಡು ದಿನ ಮಳೆ ಸಂಭವ, ಮಳೆಗೆ ಕುಣಿದು ಕುಪ್ಪಳಿಸಿದ ಮಕ್ಕಳು

Hassan Scandal: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ನಿಖರವಾದ ಸಾಕ್ಷಿಗಳಿದ್ದರೆ ಎಲ್ಲರನ್ನೂ ಬಂಧಿಸುತ್ತೇವೆ: ಡಾ.ಪರಮೇಶ್ವರ್‌

Forest Tales: ಅಜಯ್‌ ಮಿಶ್ರ ಎಂಬ ಅಧಿಕಾರಿ ರೂಪಿಸಿದ ಅಂಚೆಯೊಳಗಿನ ಅರಣ್ಯ ಲೋಕ, ನೋಡುವ ಆಸಕ್ತಿಯುಂಟೆ

ಇವೆರಲ್ಲರೂ ಖಾಸಗಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರಾಗಿದ್ದು, ನಗರದ ವಿವಿಧ ಆಸ್ಪತ್ರೆಗೆ ತಡರಾತ್ರಿ ಇವರನ್ನು ದಾಖಲಿಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಎಲ್ಲಾ ವಿದ್ಯಾರ್ಥಿನಿಯರನ್ನೂ 6 ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, 12 ವಿದ್ಯಾರ್ಥಿಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಪೋಷಕರು ಗಾಬರಿಯಿಂದ ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಹಾಸ್ಟೆಲ್​​ನಲ್ಲಿ ಊಟ ಮಾಡಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಚಿಕನ್ ಕಬಾಬ್​ ಮತ್ತು ಗೀರೈಸ್​ ತಿಂದ ವಿದ್ಯಾರ್ಥಿನಿಯರಿಗೆ ವಾಂತಿ, ಬೇಧಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ರಾತ್ರಿ ವೇಳೆಗೆ ಇದು ತೀವ್ರವಾಗಿದೆ. ಭಾನುವಾರವೂ ಕೆಲವು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಆದರೆ ಸೋಮವಾರ ಅನೇಕರು ಅಸ್ವಸ್ಥರಾಗಿದ್ದಾರೆ. ಸೋಮವಾರ ಮಧ್ಯಾಹ್ನದ ಬಳಿಕ ನೂರಾರು ವಿದ್ಯಾರ್ಥಿನಿಯರು ಗೈರಾಗಿರುವುದನ್ನು ಗಮನಿಸಿ ವಿಚಾರಿಸದಾಗ ವಿಷಯ ಬೆಳಕಿಗೆ ಬಂದಿದೆ.

ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಕೆ.ಜಗದೀಶ್​, ಶಾಸಕ ವೇದವ್ಯಾಸ ಕಾಮತ್‌ ಹಾಗೂ ಕಾಂಗ್ರೆಸ್‌ ಮುಖಂಡ ಜೆ.ಆರ್‌.ಲೋಬೊ ಅವರು ಸಿಟಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿ, “ರಾತ್ರಿ 9 ಗಂಟೆ ಸುಮಾರಿಗೆ ನಗರದ ಆಸ್ಪತ್ರೆಯ ಮುಂದೆ ಸುಮಾರು 400-500 ಜನರು ಜಮಾಯಿಸಿದ್ದರು. ಅವರಲ್ಲಿ ಅನೇಕರು ವಿದ್ಯಾರ್ಥಿಗಳು ಮತ್ತು ಉಳಿದವರು ಅವರ ಕುಟುಂಬ ಸದಸ್ಯರಾಗಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆಯಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. 137 ವಿದ್ಯಾರ್ಥಿಗಳನ್ನು ನಗರದ 6 ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಹಿಂದಿನ ಕಾರಣವನ್ನು ಶೀಘ್ರದಲ್ಲೇ ಪತ್ತೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದು, ಹಾಸ್ಟೆಲ್​ಗಳಿಗೆ ತೆರಳಿ ವಿದ್ಯಾರ್ಥಿನಿಯರು ಸೇವಿಸಿದ್ದ ಆಹಾರದ ಸ್ಯಾಂಪಲ್​ಗಳನ್ನು ಸಂಗ್ರಹಿಸಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರು ಮತ್ತು ವೈದ್ಯರ ಜೊತೆಗೆ ಸಮಾಲೋಚನೆ ನಡೆಸಿದೆ.

“ಆತಂಕ ಅಥವಾ ಭಯಪಡುವ ಅಗತ್ಯವಿಲ್ಲ, ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಲ್ಲಿ ಸ್ವಲ್ಪ ಮಟ್ಟಿಗೆ ಡಿಹೈಡ್ರೇಶನ್ ಇದೆ. ಬಿಪಿ ಸ್ಥಿರವಾಗಿದೆ. ಹಲವು ವಿದ್ಯಾರ್ಥಿನಿಯರು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Jatropha fruits: ಬಾದಾಮಿ ಎಂದು ಜತ್ರೋಪ ಹಣ್ಣು ತಿಂದು ವಿದ್ಯಾರ್ಥಿಗಳು ಅಸ್ವಸ್ಥ, ಜತ್ರೋಪ ಹಣ್ಣು ಅಪಾಯಕಾರಿಯೇ?

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಜತ್ರೋಪ ಹಣ್ಣ ತಿಂದು ಸುಮಾರು 16 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದ ಸಿಂಧನೂರಿನಲ್ಲಿಯೂ ಇದೇ ರೀತಿ ಜತ್ರೋಪ ತಿಂದು ವಿದ್ಯಾರ್ಥಿಗಳಲ್ಲಿ ವಾಂತಿ, ಭೇದಿ, ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿತ್ತು. ವಿವರ ಓದಿಗೆ ಇಲ್ಲಿ ಕ್ಲಿಕ್​ ಮಾಡಿ

    ಹಂಚಿಕೊಳ್ಳಲು ಲೇಖನಗಳು