logo
ಕನ್ನಡ ಸುದ್ದಿ  /  Karnataka  /  Accusation Of Police Blocking Farmers Protest To Fulfillment Of Various Demands Aap Condemned

AAP condemns police action: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರ ಹೋರಾಟಕ್ಕೆ ಪೊಲೀಸರ ತಡೆ ಆರೋಪ; ಎಎಪಿ ಖಂಡನೆ

HT Kannada Desk HT Kannada

Dec 29, 2022 01:35 PM IST

ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

  • ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಕಳೆದ 52 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರ ಸ್ಪಂದಿಸಿರಲಿಲ್ಲ. ಈಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬರುತ್ತಿರುವುದರಿಂದ ಸರ್ಕಾರಕ್ಕೆ ಮುಜುಗರ ಆಗಬಾರದೆಂಬ ಕಾರಣಕ್ಕೆ ಪೊಲೀಸರನ್ನು ಬಳಸಿ ಬಲವಂತವಾಗಿ ಅವರ ಹೋರಾಟವನ್ನು ಹತ್ತಿಕ್ಕಲಾಗಿದೆ ಎಂದು ಎಎಪಿ ಆರೋಪಿಸಿದೆ. 

ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೆಂಗಳೂರು: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಮಂಡ್ಯದಲ್ಲಿ ರೈತರ ನಡೆಸುತ್ತಿದ್ದ ಪ್ರತಿಭಟನೆಯನ್ನು ಬಲವಂತವಾಗಿ ಹತ್ತಿಕ್ಕಿದ ಆರೋಪ ಪೊಲೀಸರ ವಿರುದ್ಧ ಕೇಳಿಬಂದಿದೆ. ಪೊಲೀಸರ ಈ ಕ್ರಮವನ್ನು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಹವಾಮಾನ ಏಪ್ರಿಲ್ 28: ತಗ್ಗಿದ ಮಳೆ, ಮುಂದುವರಿದ ತಾಪಮಾನ; ಕೋಲಾರ, ಚಿಕ್ಕಬಳ್ಳಾಪುರ ಸೇರಿ 15 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ

Sankey Tank Lake: ಮಳೆ ಕೊರತೆ, ತಾಪಮಾನ ಹೆಚ್ಚಳ; ಬತ್ತುವ ಹಂತಕ್ಕೆ ಬಂದಿದೆಯಾ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಕೆರೆ

Uttara Kannada News: ಪ್ರವಾಸೋದ್ಯಮಕ್ಕೆ ರಣ ಬಿಸಿಲಿನ ಹೊಡೆತ; ಉತ್ತರ ಕನ್ನಡ ಬೀಚ್‌ಗಳಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ

ಬೆಂಗಳೂರು ನೀರಿನ ಸಮಸ್ಯೆಗೆ ಝೆರೋದಾ ಸಂಸ್ಥಾಪಕ ನಿತಿನ್ ಕಾಮತ್ ಸಲಹೆ ಎಫೆಕ್ಟ್; ಒಂದೇ ದಿನ ಬಂತು 300 ಫೋನ್ ಕಾಲ್ಸ್

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಕಳೆದ 52 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರ ಸ್ಪಂದಿಸಿರಲಿಲ್ಲ. ಈಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಂದಾಗ ಸರ್ಕಾರಕ್ಕೆ ಮುಜುಗರವಾಗಬಾರದು ಎಂದು ಕಾರಣಕ್ಕೆ ಪೊಲೀಸರನ್ನು ಬಳಸಿಕೊಂಡು ಬಲವಂತವಾಗಿ ಅವರ ಹೋರಾಟವನ್ನು ಹತ್ತಿಕ್ಕಲಾಗಿದೆ. ರೈತರ ಟೆಂಟುಗಳನ್ನು ಕಿತ್ತೆಸೆದು, ಅವರನ್ನು ಬಂಧಿಸುವ ಮೂಲಕ ಪೊಲೀಸರು ರೈತರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಪ್ರತಿಭಟಿಸುವ ಹಕ್ಕನ್ನು ಈ ರೀತಿ ಹತ್ತಿಕ್ಕುವುದು ಖಂಡನೀಯ ಎಂದು ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ರೈತರ ಬಗ್ಗೆ ಸ್ವಲ್ಪವಾದರೂ ಕಾಳಜಿಯಿದ್ದರೆ ಪ್ರತಿಭಟನಾನಿರತ ರೈತ ಮುಖಂಡರ ಜೊತೆ ಮಾತುಕತೆ ನಡೆಸಬೇಕಿತ್ತು. ಆದರೆ ಚುನಾವಣಾ ತಯಾರಿ, ಸಂಪುಟ ವಿಸ್ತರಣೆ ಕಸರತ್ತಿನಲ್ಲೇ ಮಗ್ನವಾಗಿರುವ ಮುಖ್ಯಮಂತ್ರಿಯವರಿಗೆ ರೈತರ ಹಿತರಕ್ಷಣೆ ಬೇಕಾಗಿಲ್ಲ. ಸಿಎಂ ಬೊಮ್ಮಾಯಿಯವರು ಕೇವಲ ಬಿಜೆಪಿ ಹೈಕಮಾಂಡ್‌ ಮೆಚ್ಚಿಸಲು ಅಧಿಕಾರ ನಡೆಸುತ್ತಿದ್ದಾರೆ. ಜನಸಾಮಾನ್ಯರ ಹಿತವನ್ನು ನಿರ್ಲಕ್ಷಿಸುತ್ತಿರುವ ಬಿಜೆಪಿ ಆಡಳಿತಕ್ಕೆ ಅಂತ್ಯ ಹಾಡಲು ನಾಡಿನ ರೈತರು ಒಂದುಗೂಡಬೇಕು ಎಂದು ಬಿ.ಟಿ.ನಾಗಣ್ಣ ಕರೆ ನೀಡಿದ್ದಾರೆ.

ಅಮಿತ್‌ ಶಾ ಬರುತ್ತಾರೆಂಬ ಕಾರಣಕ್ಕೆ ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊದಲೇ ಅಂತ್ಯಗೊಳಿಸಲಾಗುತ್ತಿದೆ. ಡಿಸೆಂಬರ್‌ 30ರ ತನಕ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದ ಸರ್ಕಾರವು 29ಕ್ಕೇ ಕೊನೆಗೊಳಿಸುತ್ತಿದೆ. ಈ ಮೂಲಕ ನಾಡಿನ ಹಿತಕ್ಕಿಂತ ಪಕ್ಷದ ನಾಯಕರೇ ಮುಖ್ಯವೆಂಬ ಕೆಟ್ಟ ಸಂದೇಶವನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಸರಿಯಾದ ಚರ್ಚೆಯನ್ನೇ ನಡೆಸದೇ ಕಲಾಪವನ್ನು ವ್ಯರ್ಥ ಮಾಡಿದ್ದಾರೆ ಎಂದು ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನದ ಗುರಿ

ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಳೆ ಮೈಸೂರು ಭಾಗದ ಮತದಾರರನ್ನು ಸೆಳೆಯಲು ಬಿಜೆಪಿ ಕಸರತ್ತು ಆರಂಭಿಸಿದ್ದು, ಇದಕ್ಕೆ ಪೂರಕವಾಗಿ ಇಂದು ಕೇಂದ್ರ ಸಚಿವ ಅಮಿತ್‌ ಶಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದಿನಿಂದ ಮೂರು ದಿನ ಹಳೆ ಮೈಸೂರು ಭಾಗದಲ್ಲಿ ಅಮಿತ್‌ ಶಾ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಮಂಡ್ಯದಲ್ಲಿ ಬಿಜೆಪಿ ಸಮಾವೇಶ ನಡೆಯಲಿದೆ.

ಅಮಿತ್‌ ಶಾ ಭೇಟಿಯ ಹಿನ್ನಲೆಯಲ್ಲಿ ಮತ್ತು ಇತರೆ ಕಾರಣಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವು ಇಂದೇ ಮುಕ್ತಾಯಗೊಳ್ಳಲಿದೆ. ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರಿಗೆ ಕಾರ್ಯಕ್ರಮಗಳ ಒತ್ತಡದ ಹಿನ್ನಲೆಯಲ್ಲಿ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್‌ 29ರಂದೇ ಕೊನೆಗೊಳಿಸುವುದಾಗಿ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಮಂಡ್ಯಕ್ಕೆ ನಾಳೆ(ಡಿ.30, ಶುಕ್ರವಾರ) ಅಮಿತಾ ಶಾ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ಕೂಡ ಹೊರಡಿಸಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಭಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಬೇಕು ಎಂಬುದು ಸೇರಿ ನಾಯಕರ ಲೆಕ್ಕಾಚಾರವಾಗಿದೆ. ಹೀಗಾಗಿ ಹಳೆ ಮೈಸೂರು ಭಾಗಕ್ಕೆ ಆರಂಭದಿಂದಲೇ ಆದ್ಯತೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

    ಹಂಚಿಕೊಳ್ಳಲು ಲೇಖನಗಳು