logo
ಕನ್ನಡ ಸುದ್ದಿ  /  ಕರ್ನಾಟಕ  /  Dr K Sudhakar On Covid: ಸೋಂಕಿತರ ಪರೀಕ್ಷಾ ಮಾದರಿಗಳ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ -ಸಚಿವ ಸುಧಾಕರ್‌

Dr K Sudhakar on Covid: ಸೋಂಕಿತರ ಪರೀಕ್ಷಾ ಮಾದರಿಗಳ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ -ಸಚಿವ ಸುಧಾಕರ್‌

HT Kannada Desk HT Kannada

Dec 21, 2022 04:05 PM IST

google News

ಸಚಿವ ಸುಧಾಕರ್‌

    • ಕೋವಿಡ್‌ ಪಾಸಿಟಿವ್‌ ಬಂದ ಎಲ್ಲಾ ಮಾದರಿಗಳ ಸಂಪೂರ್ಣ ಜೀನೋಮ್ ಸೀಕ್ವೆನ್ಸಿಂಗ್‌ಗೆ ಕ್ರಮ ಕೈಗೊಳ್ಳಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಸುಧಾಕರ್‌ ಪ್ರತಿಕ್ರಿಯೆ ನೀಡದ್ದಾರೆ.
ಸಚಿವ ಸುಧಾಕರ್‌
ಸಚಿವ ಸುಧಾಕರ್‌

ಬೆಳಗಾವಿ: ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್‌ ಹೊಸ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ದೇಶದಲ್ಲಿನ ಕೋವಿಡ್-19 ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ ಈ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಜಪಾನ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಯೊಂದನ್ನು ನೀಡಿದೆ. ಕೋವಿಡ್‌ ಪಾಸಿಟಿವ್‌ ಬಂದ ಎಲ್ಲಾ ಮಾದರಿಗಳ ಸಂಪೂರ್ಣ ಜೀನೋಮ್ ಸೀಕ್ವೆನ್ಸಿಂಗ್‌ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಸುಧಾಕರ್‌ ಪ್ರತಿಕ್ರಿಯೆ ನೀಡದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್‌ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್‌ ಸೀಕ್ವೆನ್ಸ್‌ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ. ಇದಕ್ಕೆ ಈಗಾಗಲೇ ಕ್ರಮ ವಹಿಸಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅತಿ ಹೆಚ್ಚು ಪ್ರಯಾಣಿಕರು ಬರುತ್ತಿದ್ದಾರೆ. ಇಲ್ಲಿಯೂ ನಿಗಾ ಇರಿಸಲು ಆರಂಭಿಸಲಾಗುವುದು. ಎರಡು ಡೋಸ್‌ಗಳಲ್ಲಿ ಶೇ.100ರಷ್ಟು ಸಾಧನೆಯಾಗಿದೆ. ಆದರೆ ಅನೇಕರು ಮೂರನೇ ಡೋಸ್‌ ಪಡೆದಿಲ್ಲ. ಅಂತಹವರು ಮುಂದೆ ಬಂದು ಮೂರನೇ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗದರ್ಶನ ಕೂಡ ಪಡೆದುಕೊಂಡು ಕ್ರಮ ವಹಿಸಲಾಗುವುದು. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗುವುದು. ಹಾಗೆಯೇ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಲಾಗುವುದು ಎಂದರು.

ಇದೇ ವಿಚಾರವಾಗಿ ಟ್ವೀಟ್‌ ಮಾಡಿರುವ ಸಚಿವರು, "ವಿಶ್ವದಾದ್ಯಂತ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಾಗುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆ. ರಾಜ್ಯದಲ್ಲಿ ಈವರೆಗೂ ಕೇವಲ 20% ಜನರು ಮಾತ್ರ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡಿದ್ದು,ಎಲ್ಲರೂ ತಪ್ಪದೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡು ಈ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆ. ಕೋವಿಡ್ ವಿರುದ್ಧ ಹೋರಾಡಲು ಉತ್ತಮ ಮಾರ್ಗವೆಂದರೆ ಕೋವಿಡ್ ಸೋಂಕು ಬರದಂತೆ ತಡೆಯುವುದಾಗಿದೆ. ಇದಕ್ಕಾಗಿ ನಾವು ಕೋವಿಡ್ ವಿರುದ್ಧದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಮರೆಯಬಾರದು." ಎಂದು ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ