ಕನ್ನಡ ಸುದ್ದಿ  /  ಕರ್ನಾಟಕ  /  Shashikala Jolle: 'ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶ ಮತ್ತು ತತ್ವಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸಿ'

Shashikala Jolle: 'ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶ ಮತ್ತು ತತ್ವಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸಿ'

HT Kannada Desk HT Kannada

Feb 10, 2023 10:22 PM IST

ದಿ. ಸಿದ್ದೇಶ್ವರ ಸ್ವಾಮೀಜಿ - ಸಚಿವೆ ಶಶಿಕಲಾ ಜೊಲ್ಲೆ

    • ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶ ಮತ್ತು ತತ್ವಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರು ಮನವಿ ಮಾಡಿದರು.
ದಿ. ಸಿದ್ದೇಶ್ವರ ಸ್ವಾಮೀಜಿ - ಸಚಿವೆ ಶಶಿಕಲಾ ಜೊಲ್ಲೆ
ದಿ. ಸಿದ್ದೇಶ್ವರ ಸ್ವಾಮೀಜಿ - ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶ ಮತ್ತು ತತ್ವಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರು ಮನವಿ ಮಾಡಿದರು.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಕಮಲಾನಗರದ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ, ಒಂದು ವರ್ಷದ ಬಳಿಕ ಸೆರೆ ಸಿಕ್ಕ ಕಳ್ಳ; ಇನ್ನೆರಡು ಅಪರಾಧ ಸುದ್ದಿಗಳು

ಬೆಂಗಳೂರು ಅಪರಾಧ ಸುದ್ದಿ; 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ, 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶ

ಕರ್ನಾಟಕ ಅಣೆಕಟ್ಟೆ ನೀರಿನ ಮಟ್ಟ ಮೇ 15; ರಾಜ್ಯದ 22 ಜಲಾಶಯಗಳ ಪೈಕಿ ಬರಿದಾಗಿವೆ 8 ಡ್ಯಾಮ್‌ಗಳು, ಬಳಕೆಗೆ ಸಿಗುವ ನೀರು ಶೇಕಡ 8.81 ಮಾತ್ರ

ಹಾಸನ ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಕೇಸ್ ಏನಾಯಿತು, ಇದುವರೆಗಿನ 10 ವಿದ್ಯಮಾನ

ಇಂದು ವಿಧಾನಸಭೆಯಲ್ಲಿ ಮಂಡಿಸಲಾದ ಸಂತಾಪ ಸೂಚನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಶಶಿಕಲಾ ಜೊಲ್ಲೆ, ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿಗಳ ಆಶೀರ್ವಾದ ಮತ್ತು ಪ್ರವಚನ ಪಡೆಯುವ ಅವಕಾಶ ದೊರೆತಿದ್ದು ನನ್ನ ಪುಣ್ಯವೇ ಸರಿ. ಜೊಲ್ಲೆ ಕುಟುಂಬದ ಜೊತೆ 2008 ರಿಂದ ಸಿದ್ದೇಶ್ವರ ಸ್ವಾಮೀಜಿಗಳು ಆತ್ಮೀಯ ಸಂಬಂಧ ಹೊಂದಿದ್ದರು ಎಂದರು.

2008 ರಲ್ಲಿ ಮೊದಲ ಸಮಾವೇಶ ಏರ್ಪಡಿಸಲಾಗಿತ್ತು. 2016 ರಲ್ಲಿ ನಿಪ್ಪಾಣಿಯ ಬೇನಾಡಿಯಲ್ಲಿ ಪ್ರವಚನ ಮಾಡಿದಾಗ ನಮ್ಮ ಮನೆಯಲ್ಲಿ ಒಂದು ತಿಂಗಳ ಕಾಲ ವಾಸ್ತವ್ಯ ಹೂಡಿದ್ದರು. ನಿಪ್ಪಾಣಿಯಲ್ಲಿ ಹನುಮ ಮಾಲಾ ಕಾರ್ಯಕ್ರಮ ನಡೆದ ಸಂದರ್ಭದಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾರಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿ ಇಂತಹ ಒಳ್ಳೆಯ ಕಾರ್ಯಕ್ರಮ ರೂಪಿಸಿದ್ದಕ್ಕೆ ಒಳ್ಳೆಯ ಮಾತುಗಳಿಂದ ಹಾರೈಸಿದ್ದರು ಎಂದು ನೆನೆಪಿಸಿಕೊಂಡರು.

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ಸಿದ್ದೇಶ್ವರ ಸ್ವಾಮೀಜಿಗಳ ಜೀವನ, ಆದರ್ಶ ಹಾಗೂ ತತ್ವಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಹಾಗೆಯೇ, ಪಠ್ಯ ಪುಸ್ತಕಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇಂದಿನಿಂದ ರಾಜ್ಯದ ಬಜೆಟ್​ ಅಧಿವೇಶನ ಆರಂಭವಾಗಿದೆ. ಇದು ವರ್ಷದ ಮೊದಲ ಅಧಿವೇಶನವಾಗಿದ್ದು, ಇಂದು ರಾಜ್ಯಪಾಲರ ಭಾಷಣ ಮಾತ್ರ ಇತ್ತು. ರಾಜ್ಯಪಾಲರ ಭಾಷಣದ ಬಳಿಕ ಸಂತಾಪ ಸೂಚನೆ ನಡೆಯಿತು. ಬಳಿಕ ಕಲಾಪವನ್ನು ಸ್ಪೀಕರ್ ಮುಂದೂಡಿದ್ದು, ಸೋಮವಾರದಿಂದ ಕಲಾಪಗಳು ನಡೆಯಲಿವೆ.

ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಬಳಿಕ ನಾಲ್ಕು ದಿನ ಬಜೆಟ್‌ ಮೇಲಿನ ಚರ್ಚೆ ನಡೆಯಲಿದೆ. ತಾವು ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಘೋಷಿಸಿದ್ದಾರೆ. ಹೀಗಾಗಿ, ಬಿಎಸ್‌ ಯಡಿಯೂರಪ್ಪ ಅವರಿಗೆ ಶಾಸಕರಾಗಿ ಭಾಗವಹಿಸುವ ಕೊನೆಯ ಅಧಿವೇಶನ ಇದಾಗಿದೆ.

ಎಲ್ಲರೂ ಕಡ್ಡಾಯವಾಗಿ ಅಧಿವೇಶನಕ್ಕೆ ಹಾಜರಾಗಬೇಕು ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಚುನಾವಣಾ ವರ್ಷವಾಗಿರುವುದರಿಂದ ಕ್ಷೇತ್ರಗಳಲ್ಲಿ ಒತ್ತಡವಿದ್ದರೂ ನಿರ್ಲಕ್ಷಿಸದೆ ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗಿಯಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ, ಖಾಸಗಿ ವಿಶ್ವವಿದ್ಯಾಲಯದ ಆರು ವಿಧೇಯಕಗಳು ಈ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

ಅಧಿವೇಶನದ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ವಿಧಾನಸೌಧದಿಂದ 2 ಕಿಮೀ ಸುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಈ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ, ಪ್ರತಿಭಟನೆ, ಸಭೆಗಳನ್ನು ಆಯೋಜಿಸುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಸೂಚಿಸಿದ್ದಾರೆ. ಫೆಬ್ರವರಿ 24ರಂದೇ ಅಧಿವೇಶನ ಕೊನೆಗೊಳ್ಳುವ ನಿರೀಕ್ಷೆಯಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ