logo
ಕನ್ನಡ ಸುದ್ದಿ  /  ಕರ್ನಾಟಕ  /  Annabhagya: ಕಾಂಗ್ರೆಸ್, ಬಿಜೆಪಿ ಅನ್ನಭಾಗ್ಯ ಸಮರ; ಕರ್ನಾಟಕಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರ ಸಿದ್ಧವಿದೆ; ಆಮ್ ಆದ್ಮಿ ಪಾರ್ಟಿ

AnnaBhagya: ಕಾಂಗ್ರೆಸ್, ಬಿಜೆಪಿ ಅನ್ನಭಾಗ್ಯ ಸಮರ; ಕರ್ನಾಟಕಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರ ಸಿದ್ಧವಿದೆ; ಆಮ್ ಆದ್ಮಿ ಪಾರ್ಟಿ

HT Kannada Desk HT Kannada

Jun 20, 2023 10:30 AM IST

ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ನೀಡಲು ಸಿದ್ಧವಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

  • ಆಮ್ ಆದ್ಮಿ ಪಕ್ಷ ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆ ಈಡೇರಿಕೆಗೆ ಹೆಚ್ಚುವರಿ ಅಕ್ಕಿಯನ್ನ ಪಂಜಾಬ್‌ನ ಸಿಎಂ ಭಗವಂತ ಮಾನ್ ನೇತೃತ್ವದ ಸರ್ಕಾರ ಒದಗಿಸಲು ಸಿದ್ಧವಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ನೀಡಲು ಸಿದ್ಧವಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.
ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ನೀಡಲು ಸಿದ್ಧವಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ (Akki) ನೀಡುವ ಅನ್ನಭಾಗ್ಯ ಯೋಜನೆ (AnnaBhagya Scheme) ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ (Congress Govt) ಹಾಗೂ ಕೇಂದ್ರ ಬಿಜೆಪಿ (Union Govt) ಸರ್ಕಾರದ ನಡುವೆ ವಾಕ್ಸಮರ ನಡೆಯುತ್ತಿದೆ. ಇದರ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ (Aam Admi Party) ಎಂಟ್ರಿಯಾಗಿದ್ದು, ರಾಜ್ಯಕ್ಕೆ ಅಗತ್ಯವಿರುವ ಅಕ್ಕಿಯನ್ನು ನೀಡಲು ಪಂಜಾಸ್ ಸರ್ಕಾರ ಸಿದ್ಧವಿದೆ ಎಂದು ಎಎಪಿ (AAP) ಹೇಳಿದೆ.

ಟ್ರೆಂಡಿಂಗ್​ ಸುದ್ದಿ

Raghunandan S Kamath Death: ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ನ್ಯಾಚುರಲ್ ಐಸ್ ಕ್ರೀಂನ ರಘುನಂದನ್ ಕಾಮತ್ ಇನ್ನಿಲ್ಲ

ಬಂಟ್ವಾಳ: 3 ವರ್ಷದ ಮಗುವನ್ನು ರಕ್ಷಿಸಲು ಪ್ರಾಣದ ಹಂಗುತೊರೆದು ಬಾವಿಗಳಿದ ಯುವಕ, ಉಮೇಶ್ ಮಠದಬೆಟ್ಟು ಕಾರ್ಯಕ್ಕೆ ಶ್ಲಾಘನೆ

ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ

ಬೆಂಗಳೂರಿನಲ್ಲಿ ಮೇ 18, 19ಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ -Bengaluru Rain

ಈ ಸಂಬಂಧ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ (Pruthvi Reddy) ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಜನಪರ ಕಾಳಜಿ ಹೊಂದಿರುವ ರಾಷ್ಟ್ರೀಯ ಪಕ್ಷವಾದ ಆಮ್ ಆದ್ಮಿ ಪಕ್ಷ ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆ ಈಡೇರಿಕೆಗೆ ಹೆಚ್ಚುವರಿ ಅಕ್ಕಿಯನ್ನ ಪಂಜಾಬ್‌ನ ಸಿಎಂ ಭಗವಂತ ಮಾನ್ ನೇತೃತ್ವದ ಸರ್ಕಾರ ಒದಗಿಸಲು ಸಿದ್ಧವಿದೆ ಎಂದು ಹೇಳಿದ್ದು, ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ತಲೆದೋರಿರುವ ಅಕ್ಕಿ ಕೊರತೆಯ ಸಮಸ್ಯೆಯನ್ನು ನಿವಾರಿಸಲು ಆಮ್ ಆದ್ಮಿ ಪಕ್ಷದ ಅಧಿಕಾರವಿರುವ ಪಂಜಾಬ್ ರಾಜ್ಯ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಯಾವುದೇ ಪೂರ್ವ ಸಿದ್ಧತೆಗಳಿಲ್ಲದೆ, ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳನ್ನು ಸಂಪೂರ್ಣ ನಕಲು ಮಾಡಿ ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಲವು ತರಾತುರಿ ಗ್ಯಾರಂಟಿಗಳನ್ನು ಘೋಷಿಸಿ ಇಂದು ಅಧಿಕಾರಕ್ಕೆ ಬಂದಿದ್ದಾರೆ.

ಈ ಅರೆ ಬೆಂದ ಗ್ಯಾರಂಟಿಗಳಿಂದಾಗಿ ರಾಜ್ಯದ ಬಡ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಈ ಸಂದರ್ಭದಲ್ಲಿ ನಾವುಗಳು ಯಾವುದೇ ರಾಜಕೀಯ ಕುಹಕಕ್ಕೆ ಕೈ ಹಾಕುವುದಿಲ್ಲ. ಈಗ ತಲೆದೋರಿರುವ ರಾಜ್ಯದ ಬಡ ಜನತೆಯ ಸಂಕಷ್ಟವನ್ನು ನಿವಾರಿಸುವುದು ನಮ್ಮ ಪಕ್ಷದ ಗುರಿ. ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ರವರೊಂದಿಗೆ ನಾನು ನಿನ್ನೆ ನಡೆಸಿದ ಸಂಭಾಷಣೆಯಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ಸಂಪೂರ್ಣ ಸಹಾಯ ಹಸ್ತವನ್ನು ನೀಡಲು ತಾತ್ವಿಕವಾಗಿ ಸಿದ್ದರಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಕೂಡಲೇ ಪಂಜಾಬ್ ಮುಖ್ಯಮಂತ್ರಿಗಳೊಂದಿಗೆ ಮಾತುಕತೆಯನ್ನು ನಡೆಸಲು ಬೇಕಾಗಿರುವ ಸಂಪೂರ್ಣ ತಾಂತ್ರಿಕ ಬೆಂಬಲವನ್ನು ನಾವು ನೀಡಲು ಸಿದ್ದರಿದ್ದೇವೆ ಎಂದು ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ಕೇಂದ್ರದ ಬಿಜೆಪಿ ಸರ್ಕಾರದ ಧೋರಣೆ ಬಡವರ ವಿರೋಧಿ ಹಾಗೂ ದುಃಖದ ಸಂಗತಿ ಎಂದು ಖಂಡಿಸಿದ್ದಾರೆ. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆಯಲಾಗಿದೆ. ಕೊರತೆಯಾಗಿರುವ ಹೆಚ್ಚುವರಿ ಅಕ್ಕಿಯನ್ನು ಪಂಜಾಬ್ ಸರಕಾರದಿಂದ ಪಡೆದುಕೊಂಡು ಸಂಕಷ್ಟವನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕೆಂದು ಪೃಥ್ವಿ ರೆಡ್ಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಬರೆದ ಪತ್ರದ ಸಾರಾಂಶ ಹೀಗಿದೆ

ನಿಮ್ಮ ಸರ್ಕಾರವು ಪ್ರಸ್ತಾಪಿಸಿರುವ ಹೊಸ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಬೇಕಿರುವ ಹೆಚ್ಚುವರಿ ಅಕ್ಕಿಯನ್ನು ನೀಡಲು ಬಿಜೆಪಿ ನೇತೃತ್ವದ ಸರ್ಕಾರ ನಿರಾಕರಿಸಿರುವುದು ಅಶ್ಚರ್ಯ ಮತ್ತು ದುಃಖದ ಸಂಗತಿಯಾಗಿದೆ.

ನಮ್ಮಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಅವುಗಳನ್ನು ಲೆಕ್ಕಿಸದೆ ಎಲ್ಲಾ ಪಕ್ಷಗಳು ನಮ್ಮ ದೇಶದ ಜನರಿಗೆ ಸಹಾಯ ಮಾಡುವ ನೀತಿಗಳನ್ನು ಬೆಂಬಲಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಬಲವಾಗಿ ನಂಬುತ್ತದೆ.

ಅಗತ್ಯವಿರುವ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವುದು, ಬಿಜೆಪಿ ಸರ್ಕಾರದ ಬಡವರ ವಿರೋಧಿ ಧೋರಣೆ ಮಾತ್ರವಲ್ಲದೆ ಬಿಜೆಪಿಯೇತರ ಆಡಳಿತದ ರಾಜ್ಯಗಳ ಮೇಲೆ ಮಲತಾಯಿ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಇಂತಹ ವರ್ತನೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ.

ನಮ್ಮ ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ನಿನ್ನೆ ನಾನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಈ ವಿಷಯದ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಬಿದ್ದರೆ ಪಂಜಾಬ್‌ನಿಂದ ರಾಜ್ಯದಲ್ಲಿನ ಅಕ್ಕಿ ಕೊರತೆಯನ್ನು ಪೂರೈಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ.

ಎಎಪಿ ಕರ್ನಾಟಕವು ನಮ್ಮ ರಾಜ್ಯದ ಜನರ ಆಹಾರ ಭದ್ರತೆಯ ಹಿತದೃಷ್ಟಿಯಿಂದ ತನ್ನ ಪಾತ್ರವನ್ನು ನಿಭಾಯಿಸಲು ಬದ್ಧವಾಗಿದೆ. ಆದ್ದರಿಂದ ದಯವಿಟ್ಟು ಈ ವಿಷಯವನ್ನು ಮುಂದಕ್ಕೆ ಕೊಂಡೊಯ್ಯಲು ನಾನು ವಿನಂತಿಸುತ್ತೇನೆ ಮತ್ತು ಈ ವಿಷಯವನ್ನು ಸುಗಮಗೊಳಿಸಲು ನಿಮಗೆ ಎಎಪಿ ಕರ್ನಾಟಕದಿಂದ ಯಾವುದೇ ಸಹಾಯ ಬೇಕಾದರೆ ನನಗೆ ತಿಳಿಸಿ ಎಂದು ಪೃಥ್ವಿ ರೆಡ್ಡಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ