logo
ಕನ್ನಡ ಸುದ್ದಿ  /  ಕರ್ನಾಟಕ  /  Basavaraj Bommai: ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳ್ತಿರೋ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಹೆಚ್ಚು ದಿನ ಉಳಿಯಲ್ಲ: ಮಾಜಿ ಸಿಎಂ ಬೊಮ್ಮಾಯಿ‌

Basavaraj Bommai: ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳ್ತಿರೋ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಹೆಚ್ಚು ದಿನ ಉಳಿಯಲ್ಲ: ಮಾಜಿ ಸಿಎಂ ಬೊಮ್ಮಾಯಿ‌

HT Kannada Desk HT Kannada

Jun 18, 2023 03:39 PM IST

google News

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

  • ಛತ್ತೀಸಗಢದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ಎಲ್ಲಿಂದಾದರೂ ತನ್ನಿ ಬಡ ಜನರಿಗೆ ಒಳ್ಳೆಯದಾದರೆ ಸಾಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆಯಡಿಟಲ್ಲಿ ಪ್ರತಿ ವ್ಯಕ್ತಿಗೆ 10 ಅಕ್ಕಿ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಹೆಚ್ಚುವರಿಂದ ಅಕ್ಕಿ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ.

ಇದೇ ವಿಚಾರವಾಗಿ ಇವತ್ತು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದಿದ್ದಾರೆ.

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಢದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು ಎಂದು ಹೇಳಿದ್ದಾರೆ.

ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ: ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ಎಚ್ಚರಿಕೆ ನೀಡಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನ ಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತೆಗೆದುಕೊಂಡು ಏನು ಮಾಡಬೇಕು ಎಂದಿರುವ ಮಾಜಿ ಸಿಎಂ,‌ ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಕ್ಕಿಯನ್ನು ಉಚಿತವಾಗಿ ಕೇಳಿರಲಿಲ್ಲ; ಕೇಂದ್ರ ಸರ್ಕಾರದ್ದು ಬಡಜನ ವಿರೋಧಿ ಧೋರಣೆ - ಎಂ ಬಿ ಪಾಟೀಲ

ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರಿಗೆ ವಿತರಿಸಲು ಅಗತ್ಯವಾಗಿರುವ ಅಕ್ಕಿಯನ್ನು ನಾವು ಕೇಂದ್ರ ಸರಕಾರದಿಂದ ಖರೀದಿಸಲು ಕೇಳಿದ್ದೆವೇ ವಿನಾಃ ಪುಕ್ಕಟೆಯಾಗಿಯೇನೂ ಕೇಳಿರಲಿಲ್ಲ. ಆದರೆ ಅವರು ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಈ ಮೂಲಕ ಬಿಜೆಪಿ ತನ್ನ ಬಡಜನ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅನ್ನಭಾಗ್ಯ ಯೋಜನೆಯ ಅಗತ್ಯದ ಬಗ್ಗೆ ನಾವು ಈಗಾಗಲೇ ಕೇಂದ್ರ ಸರಕಾರಕ್ಕೆ ಸಾಕಷ್ಟು ಹೇಳಿದ್ದೇವೆ. ಇನ್ನು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ದನಿ ಎತ್ತಬೇಕು. ದೇವರು ಇನ್ನಾದರೂ ಅವರಿಗೆ ಸದ್ಬುದ್ಧಿಯನ್ನು ಕೊಡಲಿ ಅಷ್ಟೆ ಎಂದಿದ್ದಾರೆ.

ಕಾಂಗ್ರೆಸ್ ಸರಕಾರವು ಚುನಾವಣೆಯ ಹೊತ್ತಿನಲ್ಲೇ ಅನ್ನಭಾಗ್ಯ ಸೇರಿದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗ ಇವುಗಳನ್ನು ಒಂದೊಂದಾಗಿ ಜಾರಿಗೆ ತರಲಾಗುತ್ತಿದೆ. ಬಡವರ ಹಸಿವನ್ನು ನೀಗಿಸುವಂತಹ ಅನ್ನಭಾಗ್ಯ ಯೋಜನೆಗೆ ಮೊದಲು ಅಕ್ಕಿ ಕೊಡುವುದಾಗಿ ಹೇಳಿದ ಕೇಂದ್ರದ ಬಿಜೆಪಿ ಸರಕಾರವು ಈಗ ಅದರಿಂದ ಹಿಂದೆ ಸರಿದಿರುವುದು ಅವರ ಸಣ್ಣತನವನ್ನು ತೋರಿಸುತ್ತದೆ ಅಷ್ಟೆ ಎಂದು ಸಚಿವ ಎಂಬಿ ಪಾಟೀಲ್ ಟೀಕಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ