ಕರ್ನಾಟಕ ಉಪಚುನಾವಣೆ, 2 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ, ಸಿಪಿ ಯೋಗೇಶ್ವರ್ಗೆ ಚನ್ನಪಟ್ಟಣ ಟಿಕೆಟ್
Oct 24, 2024 12:10 AM IST
ಕರ್ನಾಟಕ ಉಪಚುನಾವಣೆ, 2 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ, ಸಿಪಿ ಯೋಗೇಶ್ವರ್ಗೆ ಚನ್ನಪಟ್ಟಣ ಟಿಕೆಟ್
- Karnataka ByElection: ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಸಂಡೂರು ಕ್ಷೇತ್ರಕ್ಕೆ ಅನ್ನಪೂರ್ಣ ತುಕಾರಾಂ, ಚನ್ನಪಟ್ಟಣ ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಿಜೆಪಿ ತೊರೆದು ಕೈ ಹಿಡಿದಿರುವ ಸಿಪಿ ಯೋಗೇಶ್ವರ್ಗೆ ನಿರೀಕ್ಷೆಯಂತೆ ಟಿಕೆಟ್ ನೀಡಲಾಗಿದೆ. ಸಂಡೂರು ಕ್ಷೇತ್ರಕ್ಕೆ ಇ ತುಕರಾಂ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ, ಶಿಂಗ್ಗಾವಿ ಕ್ಷೇತ್ರಕ್ಕೆ ಟಿಕೆಟ್ ಇನ್ನು ಅಂತಿಮಗೊಂಡಿಲ್ಲ. ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಇದೇ ವೇಳೆ ಅಸ್ಸಾಂನ ಬೆಹಾಲಿ ಕ್ಷೇತ್ರಕ್ಕೂ ಅಭ್ಯರ್ಥಿಯನ್ನು ಘೋಷಿಸಲಾಗಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸಿಪಿ ಯೋಗೇಶ್ವರ್ ಸಿದ್ದರಾಗಿದ್ದರು. ಆದರೆ ಜೆಡಿಎಸ್ ಮುಖಂಡ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಈ ಕ್ಷೇತ್ರದ ಟಿಕೆಟ್ ಅನ್ನು ಬಿಜೆಪಿಗೆ ಬಿಟ್ಟುಕೊಟ್ಟಿಲ್ಲ. ಎನ್ಡಿಎ ಅಭ್ಯರ್ಥಿಯಾಗಿ ಜೆಡಿಎಸ್ನಿಂದಲೇ ಕಣಕ್ಕಿಳಿಯುವಂತೆ ಹೆಚ್ಡಿಕೆ, ಸಿಪಿವೈಗೆ ಸೂಚಿಸಿದ್ದರು. ಆದರೆ, ಎರಡೂ ಪಕ್ಷಗಳ ಕಾರ್ಯಕರ್ತರು ಒಪ್ಪಿಗೆ ನೀಡದ ಕಾರಣ ಬಿಜೆಪಿಯಿಂದಲೇ ಸ್ಪರ್ಧಿಸಲು ಪಟ್ಟು ಹಿಡಿದ ಯೋಗೇಶ್ವರ್ಗೆ ಕಮಲ ಪಡೆಯಿಂದ ಟಿಕೆಟ್ ಸಿಗಲಿಲ್ಲ. ಹೀಗಾಗಿ, ಸೈನಿಕ, ಕಾಂಗ್ರೆಸ್ ಕಡೆ ವಾಲಿದರು.
ಕರ್ನಾಟಕ ಉಪಚುನಾವಣೆ
ಚನ್ನಪಟ್ಟಣ - ಸಿಪಿ ಯೋಗೇಶ್ವರ್
ಸಂಡೂರು - ಅನ್ನಪೂರ್ಣ ತುಕಾರಾಂ
ಅಸ್ಸಾಂ ಉಪಚುನಾವಣೆ
ಜಯಂತ ಬೋರಾ