logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Budget 2023: ಉ.ಕನ್ನಡ ಜಿಲ್ಲೆಗೆ ಸಿಹಿ ಸುದ್ದಿ; ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಯೋಜನೆ ಘೋಷಣೆ

Karnataka Budget 2023: ಉ.ಕನ್ನಡ ಜಿಲ್ಲೆಗೆ ಸಿಹಿ ಸುದ್ದಿ; ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಯೋಜನೆ ಘೋಷಣೆ

HT Kannada Desk HT Kannada

Feb 17, 2023 04:20 PM IST

google News

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ಫೋಟೋ-ಫೈಲ್)

  • ಈ ಬಾರಿಯ ಬಜೆಟ್ ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಣೆ ಮಾಡಲಾಗಿದೆ. ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ಫೋಟೋ-ಫೈಲ್)
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ಫೋಟೋ-ಫೈಲ್)

ಬೆಂಗಳೂರು: ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಾರಿಯ ಆಯವ್ಯಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ.

ಹಲವು ವರ್ಷಗಳ ಬೇಡಿಕೆಯಾಗಿರುವ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಣೆ ಮಾಡಿದ್ದಾರೆ. 'ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಅಷ್ಟೇ ಅಲ್ಲದೇ ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆಯಾಗಿದ್ದು, ಇದಕ್ಕಾಗಿ ಅಲ್ಲಿನ ಜನರು ಹಲವರು ವರ್ಷಗಳಿಂದ ಹೋರಾಟಗಳನ್ನು ಮಾಡುತ್ತಲೇ ಬಂದಿದ್ದಾರೆ.

ಇದೀಗ ಸರ್ಕಾರ ಉತ್ತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕ ಸ್ಪಂದಿಸಿದ್ದು, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಎಲ್ಲರಿಗೂ ಆರೋಗ್ಯ.. ಎಲ್ಲೆಡೆಯೂ ಆರೋಗ್ಯ' ಎನ್ನುವ ಧ್ಯೇಯ ವಾಕ್ಯದೊಂದಿಗೆ ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ 15,151 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ