logo
ಕನ್ನಡ ಸುದ್ದಿ  /  ಕರ್ನಾಟಕ  /  Anti Conversion Law In Karnataka: ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ; ಕಾನೂನು ಉಲ್ಲಂಘಿಸಿದ್ರೆ ಶಿಕ್ಷೆ ಖಚಿತ

anti conversion law in karnataka: ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ; ಕಾನೂನು ಉಲ್ಲಂಘಿಸಿದ್ರೆ ಶಿಕ್ಷೆ ಖಚಿತ

HT Kannada Desk HT Kannada

Oct 01, 2022 06:24 AM IST

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅಂಕಿತ ಹಾಕಿದ್ದಾರೆ

  • ವಿಧಾನ ಪರಿಷತ್ ಕಲಾಪದಲ್ಲಿ ಅಂಗೀಕೃತಗೊಂಡಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕಕ್ಕೆ (ಮತಾಂತರ ನಿಷೇಧ ಕಾಯಿದೆ) ರಾಜ್ಯಪಾಲ ತಾವರ್ ಚಂದ್ ಗೆಲ್ಲೋಟ್ ಅಂಕಿತ ಹಾಕಿದ್ದಾರೆ.

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅಂಕಿತ ಹಾಕಿದ್ದಾರೆ
ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅಂಕಿತ ಹಾಕಿದ್ದಾರೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಅಂಗೀಕೃತಗೊಂಡಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕಕ್ಕೆ (ಮತಾಂತರ ನಿಷೇಧ ಕಾಯಿದೆ) ರಾಜ್ಯಪಾಲ ತಾವರ್ ಚಂದ್ ಗೆಲ್ಲೋಟ್ ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಾಯ್ದೆ ಜಾರಿಯಾದಂದಾಗಿದೆ. ರಾಜ್ಯ ಸರ್ಕಾರ ಇಂದು ಈ ಸಂಬಂಧ ರಾಜ್ಯಪತ್ರ ಹೊರಡಿಸಿದೆ.

ಟ್ರೆಂಡಿಂಗ್​ ಸುದ್ದಿ

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

Hassan Scandal : ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ

Wildlife News: ಹುಲಿ ಉಗುರು ಪ್ರಕರಣ, ವನ್ಯಜೀವಿಗಳ ಅಂಗಾಂಗ ಹಸ್ತಾಂತರ ಇನ್ನಷ್ಟು ವಿಳಂಬ ಸಾಧ್ಯತೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ-2022 ಕಾಯ್ದೆಗೆ ಸೆಪ್ಟೆಂಬರ್ 28 ರಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ ಎಂದು ರಾಜ್ಯಪತ್ರದಲ್ಲಿ ತಿಳಿಸಿದೆ.

ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿ ಉಪಬಂಧ ಕಲ್ಪಿಸಲು ಒಂದು ಅಧಿನಿಮಯ ಇದಾಗಿದೆ.

ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.

ರಾಜ್ಯದಲ್ಲಿ ಕಾಯಿದೆ ಜಾರಿಯಿಂದಾಗಿ ಬಲವಂತದ, ವಂಚನೆ, ಒತ್ತಾಯ ಮತ್ತು ಆಮಿಷದ ಮೂಲಕ ಮತಾಂತರಕ್ಕೆ ಕಡಿವಾಣ ಹಾಕಲಾಗಿದೆ. ಮದುವೆಯಾಗುವ ಭರವಸೆಯ ನೀಡಿ ನಡೆಸುವ ಮತಾಂತರಕ್ಕೆ ನಿಷೇಧಿಸಲಾಗಿದೆ. ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳು ಮತಾಂತರದ ಬಗ್ಗೆ ದೂರು ನೀಡಬಹುದಾಗಿದೆ.

ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಗೊಂದಲದ ನಡುವೆ ಸರ್ಕಾರವು ಮತಾಂತರ ನಿಷೇಧ ಕಾಯಿದೆಗೆ ವಿಧಾನಸಭೆಯಲ್ಲಿ ಅನುಮೋದನೆಯನ್ನು ಪಡೆದುಕೊಳ್ಳಲಾಗಿತ್ತು. ಆದರೆ, ವಿಧಾನಪರಿಷತ್‌ನಲ್ಲಿ ಆಡಳಿತರೂಢ ಬಿಜೆಪಿಗೆ ಸಂಖ್ಯಾಬಲ ಕೊರತೆ ಇದ್ದ ಕಾರಣ ಅಲ್ಲಿ ಮಂಡಿಸಲಿಲ್ಲ.

ನಂತರ ಸಚಿವ ಸಂಪುಟ ಸಭೆಯ ಅನುಮೋದನೆ ಪಡೆದುಕೊಂಡು ರಾಜ್ಯಪಾಲರಿಂದ ಸುಗ್ರೀವಾಜ್ಞೆ ಹೊರಡಿಲಾಗಿತ್ತು. ಇತ್ತೀಚೆಗೆ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಸಂಖ್ಯಾಬಲ ಹೆಚ್ಚಿಸಿಕೊಂಡಿತ್ತು. ಪರಿಷತ್​ನಲ್ಲಿ ಸಂಖ್ಯಾಬಲ ಹೆಚ್ಚಿಸಿಕೊಂಡ ಹಿನ್ನೆಲೆ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ. ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಇದೀಗ ರಾಜ್ಯಪಾಲರು ಕಾಯ್ದೆಗೆ ಅಂಕಿತ ಹಾಕಿದ್ದು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಅಧಿಕೃತವಾಗಿ ಜಾರಿಗೆ ಬಂದಿದೆ.

ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮುಂಚಿತವಾಗಿ ಫಾರ್ಮ್ 1ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು. ಅವರೊಂದಿಗೆ ಮತಾಂತರ ಮಾಡಿಸುವ ವ್ಯಕ್ತಿ ಕೂಡಾ ಕೂಡ ಒಂದು ತಿಂಗಳ ಮೊದಲು ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು.

-ಮತಾಂತರವಾದ ಒಂದು ತಿಂಗಳ ಬಳಿಕ ಘೋಷಣಾಪತ್ರವನ್ನು ಭರ್ತಿ ಮಾಡಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ನೀಡಬೇಕು. ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ತನ್ನ ಗುರುತು ಘೋಷಿಸಬೇಕು. ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೋತ್ತರ ಪ್ರಕ್ರಿಯೆಯ ಸಂಪೂರ್ಣ ಘಟನಾವಳಿಗಳನ್ನು ದಾಖಲಿಸಬೇಕು.

-ಯಾವುದೇ ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸಬೇಕು. ತಕರಾರುಗಳಿದ್ದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಇಲಾಖೆಗಳಿಗೆ ಮಾಹಿತಿ ನೀಡಬೇಕು.

-ಇದಾದ ಬಳಿಕ ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡುತ್ತಾರೆ.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ