logo
ಕನ್ನಡ ಸುದ್ದಿ  /  ಕರ್ನಾಟಕ  /  ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಹೀಗಿದೆ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಹೀಗಿದೆ

Jayaraj HT Kannada

Aug 31, 2024 08:54 AM IST

google News

ಅಲ್ಪಸಂಖ್ಯಾತ ಸಮುದಾಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ ಮೂಲಕ ಅಕ್ಟೋಬರ್‌ 31ರವರೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌, ದಿನಾಂಕ ಇತರ ವಿವರಗಳು ಇಲ್ಲಿವೆ.
ಅಲ್ಪಸಂಖ್ಯಾತ ಸಮುದಾಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ಸಮುದಾಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ (HT)

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು, 2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. 1ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಆನ್‌ಲೈನ್‌ ಮೂಲಕ ವಿದ್ಯಾರ್ಥಿಗಳು ಅಕ್ಟೋಬರ್‌ 31ರ ಒಳಗಾಗಿ ಅಪ್ಲೈ ಮಾಡಬಹುದು. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌, ದಿನಾಂಕ ಹಾಗೂ ಅರ್ಹತಾ ಮಾನದಂಡಗಳ ವಿವರ ಇಲ್ಲಿದೆ.

ಅರ್ಹತೆಗಳೇನು?

1ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್,‌ ಜೈನ್‌, ಬೌದ್ಧ, ಸಿಖ್‌ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ಆದಾಯ, ಅಂದರೆ ವಿದ್ಯಾರ್ಥಿ ಹಾಗೂ ಪೋಷಕರ ವಾರ್ಷಿಕ ಆದಾಯವು 1 ಲಕ್ಷ ರೂಪಾಯಿ ಮೀರಿರಬಾರದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್‌ 29ರಿಂದ ಅವಕಾಶ ನೀಡಲಾಗಿದೆ. ಈಗಾಗಲೇ 2 ದಿನಗಳಾಗಿದ್ದು, ಅಕ್ಟೋಬರ್‌ 31ರ ವರೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಇನ್ನೂ 2 ತಿಂಗಳ ಸುದೀರ್ಘ ಕಾಲಾವಕಾಶ ನೀಡಲಾಗಿದೆ.

ಈ ವರ್ಷ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆದರೆ, ಕಳೆದ ವರ್ಷ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳು ಆಟೋ ರಿನೀವಲ್‌ ಆಗುತ್ತವೆ. ಹೀಗಾಗಿ ಅಂಥಾ ವಿದ್ಯಾರ್ಥಿಗಳು ಈ ಬಾರಿ ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ. ಒಂದು ವೇಳೆ, ಕಳೆದ ವರ್ಷ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಮಂಜೂರಾಗದೆ ಇದ್ದಲ್ಲಿ ಈ ಬಾರಿ ಮತ್ತೆ ಹೊಸದಾಗಿ ಅಪ್ಲೈ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಬ್ಯಾಂಕ್‌ ಖಾತೆಗೆ ಆಧಾರ್ ಸೀಡಿಂಗ್‌ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

ಅರ್ಜಿ ಸಲ್ಲಿಕೆಗೆ ವೆಬ್‌ಸೈಟ್‌ ಲಿಂಕ್:‌ https://ssp.postmatric.karnataka.gov.in/

ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್‌ಗೆ (https://dom.karnataka.gov.in) ಭೇಟಿ ನೀಡಬಹುದು. ಇದೇ ವೇಳೆ ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ