logo
ಕನ್ನಡ ಸುದ್ದಿ  /  ಕರ್ನಾಟಕ  /  Bbmp Voter List: ಬೆಂಗಳೂರಿನ ಅಂತಿಮ ಮತದಾರರ ಪಟ್ಟಿ ಪ್ರಕಟ, ಉದ್ಯಾನನಗರಿಯಲ್ಲಿ 81.5 ಲಕ್ಷ ಮತದಾರರು, ಇಲ್ಲಿದೆ ಹೆಚ್ಚಿನ ವಿವರ

BBMP Voter list: ಬೆಂಗಳೂರಿನ ಅಂತಿಮ ಮತದಾರರ ಪಟ್ಟಿ ಪ್ರಕಟ, ಉದ್ಯಾನನಗರಿಯಲ್ಲಿ 81.5 ಲಕ್ಷ ಮತದಾರರು, ಇಲ್ಲಿದೆ ಹೆಚ್ಚಿನ ವಿವರ

HT Kannada Desk HT Kannada

Jan 05, 2023 07:27 PM IST

ಬೆಂಗಳೂರಿನ ಅಂತಿಮ ಮತದಾರರ ಪಟ್ಟಿ ಪ್ರಕಟ, ಉದ್ಯಾನನಗರಿಯಲ್ಲಿ 81.5 ಲಕ್ಷ ಮತದಾರರು

    • BBMP Voter list: ಬೆಂಗಳೂರಿನಲ್ಲಿ, ಒಟ್ಟು 8148989 ಮತದಾರರಿದ್ದಾರೆ. ಅದರಲ್ಲಿ 4226701 ಪುರುಷರು, 3920793 ಮಹಿಳೆಯರು ಹಾಗೂ 1495 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ.
ಬೆಂಗಳೂರಿನ ಅಂತಿಮ ಮತದಾರರ ಪಟ್ಟಿ ಪ್ರಕಟ, ಉದ್ಯಾನನಗರಿಯಲ್ಲಿ 81.5 ಲಕ್ಷ ಮತದಾರರು
ಬೆಂಗಳೂರಿನ ಅಂತಿಮ ಮತದಾರರ ಪಟ್ಟಿ ಪ್ರಕಟ, ಉದ್ಯಾನನಗರಿಯಲ್ಲಿ 81.5 ಲಕ್ಷ ಮತದಾರರು

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದ್ದು, ಅದರಂತೆ 28 ವಿಧಾನಸಭಾ ಕ್ಷೇತ್ರಗಳ ಪೈಕಿ 3 ವಿಧಾನಸಭಾ ಕ್ಷೇತ್ರ (ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ)ಗಳನ್ನು ಹೊರತುಪಡಿಸಿ ಉಳಿದ 25 ವಿಧಾನಸಭಾ ಕ್ಷೇತ್ರಗಳಲ್ಲಿನ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

Hassan Scandal : ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ

Wildlife News: ಹುಲಿ ಉಗುರು ಪ್ರಕರಣ, ವನ್ಯಜೀವಿಗಳ ಅಂಗಾಂಗ ಹಸ್ತಾಂತರ ಇನ್ನಷ್ಟು ವಿಳಂಬ ಸಾಧ್ಯತೆ

Hubli News:ಅಂಜಲಿ ಅಂಬಿಗೇರ ಹತ್ಯೆ, ಹುಬ್ಬಳ್ಳಿ ಐಪಿಎಸ್‌ ಅಧಿಕಾರಿ ರಾಜೀವ್‌ ಸಸ್ಪೆಂಡ್‌, ಪೊಲೀಸ್‌ ಆಯುಕ್ತರ ತಲೆದಂಡ ಸಾಧ್ಯತೆ

ಬೆಂಗಳೂರಿನಲ್ಲಿ, ಒಟ್ಟು 8148989 ಮತದಾರರಿದ್ದಾರೆ. ಅದರಲ್ಲಿ 4226701 ಪುರುಷರು, 3920793 ಮಹಿಳೆಯರು ಹಾಗೂ 1495 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

BBMP Voter list: ಬೆಂಗಳೂರಿನ ಅಂತಿಮ ಮತದಾರರ ಪಟ್ಟಿ ಪ್ರಕಟ, ಉದ್ಯಾನನಗರಿಯಲ್ಲಿ 81.5 ಲಕ್ಷ ಮತದಾರರು

ಅಂತಿಮ ಮತದಾರರ ಪಟ್ಟಿಯನ್ನು ಸಿಇಒ ವೆಬ್‌ಸೈಟ್ ಮತ್ತು ಬಿಬಿಎಂಪಿ ವೆಬ್‌ಸೈಟ್ ನಲ್ಲಿ ಪ್ರಚುರ ಪಡಿಸಲಾಗುವುದು. ಮತದಾರರು ತಮ್ಮ ಮತದಾರರ ಮಾಹಿತಿಯನ್ನು ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯಲ್ಲಿ, ಸೇರ್ಪಡೆ ತಿದ್ದುಪಡಿ, ಸ್ಥಳಾಂತರ ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕುವಿಕೆ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಈ ಪೈಕಿ ಮೊಬೈಲ್ ತಂತ್ರಾಂಶವಾದ Voter Helpline App, NVSP Portal(www.nvsp.in), 1950 ವೋಟರ್ ಹೆಲ್ಪ್ ಲೈನ್, ವೋಟರ್ ಪೋರ್ಟಲ್ (www.voterportal.eci.gov.in) ಮುಖೇನ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕರು/ಮತದಾರರು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಉಜ್ವಲ್ ಕುಮಾರ್ ಗೋಷ್, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಾದ, ದಯಾನಂದ್, ಡಾ. ಹರೀಶ್ ಕುಮಾರ್, ಜಗದೀಶ್ ನಾಯ್ಕ್, ವೆಂಕಟಾ ಚಲಪತಿ, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಉಮೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮತದಾರರ ಕರಡು ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

ವಿಧಾನಸಭೆ ಚುನಾವಣೆಗೆ ಪೂರಕವಾಗಿ ಮತದಾರರ ಅಂತಿಮ ಕರಡು ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ಗುರುವಾರ ಪ್ರಕಟಿಸಿದೆ. ಈ ಬಾರಿ ಪುರುಷರು, ಮಹಿಳೆಯರು ಹಾಗೂ ಇತರ ಸೇರಿ ಒಟ್ಟು 5,05,48,553 ಜನ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾ ಆಯುಕ್ತ ಮನೋಜ್‍ಕುಮಾರ್ ಮೀನಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಈ ಪೈಕಿ ಪುರುಷರು 2,54,49,775, ಮಹಿಳೆಯರು 2,50,94,326 ಮತ್ತು ಇತರ 4,502 ಸೇರಿ ಒಟ್ಟು 5,05,48,553 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಇದು 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪರಿಷ್ಕೃತ ಕರಡು ಪಟ್ಟಿ. ಉಳಿದಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರ ವರದಿ ಸ್ವೀಕರಿಸಿ ಜನವರಿ 15ರ ನಂತರ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.

ರಾಜ್ಯದ 221 ಕ್ಷೇತ್ರಗಳ ಪೈಕಿ ಹೆಚ್ಚುವರಿಯಾಗಿ 5,80,531 ಪುರುಷರ ಮತಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಪೈಕಿ 3,07,174 ಹೆಸರುಗಳನ್ನು ತೆಗೆದು ಹಾಕಲಾಗಿದೆ. ಮಹಿಳಾ ಮತದಾರರ ಪೈಕಿ 6,50,667 ಹೆಸರು ಸೇರ್ಪಡೆಯಾಗಿದ್ದವು. ಈ ಪೈಕಿ 3,11,748 ಮತಗಳನ್ನು ತೆಗೆದುಹಾಕಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ