logo
ಕನ್ನಡ ಸುದ್ದಿ  /  ಕರ್ನಾಟಕ  /  108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಒಂದು ದಿನ ಮುಂದೂಡಿಕೆ; ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವರು

108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಒಂದು ದಿನ ಮುಂದೂಡಿಕೆ; ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವರು

Umesha Bhatta P H HT Kannada

May 06, 2024 11:44 PM IST

ವೇತನ ಬಿಡುಗಡೆ ಸೇರಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿದ್ದ ಅಂಬುಲೆನ್ಸ್‌ ನೌಕರರು ಒಂದು ದಿನದ ಮಟ್ಟಿಗೆ ಮುಂದೆ ಹಾಕಿದ್ದಾರೆ.

    • ಕರ್ನಾಟಕದಲ್ಲಿ ಆಂಬುಲೆನ್ಸ್‌ ನೌಕರರು ಕರೆ ನೀಡಿದ್ದ ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಮುಂದೂಡಿದ್ದಾರೆ.
    • ವರದಿ: ಎಚ್‌.ಮಾರುತಿ, ಬೆಂಗಳೂರು
ವೇತನ ಬಿಡುಗಡೆ ಸೇರಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿದ್ದ ಅಂಬುಲೆನ್ಸ್‌ ನೌಕರರು ಒಂದು ದಿನದ ಮಟ್ಟಿಗೆ ಮುಂದೆ ಹಾಕಿದ್ದಾರೆ.
ವೇತನ ಬಿಡುಗಡೆ ಸೇರಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿದ್ದ ಅಂಬುಲೆನ್ಸ್‌ ನೌಕರರು ಒಂದು ದಿನದ ಮಟ್ಟಿಗೆ ಮುಂದೆ ಹಾಕಿದ್ದಾರೆ.

ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಸುವಂತೆ ಒತ್ತಾಯಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರು ಇಂದು ರಾತ್ರಿಯಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರದವರೆಗೆ ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ಬಾಕಿ ವೇತನ ಪಾವತಿಗೆ ಸೋಮವಾರ ರಾತ್ರಿ 8 ಗಂಟೆಯವರೆಗೆ ಆಂಬುಲೆನ್ಸ್ ಚಾಲಕರು ಮತ್ತು ಸಿಬ್ಬಂದಿಗಳ ಸಂಘ ಗಡುವು ನೀಡಿತ್ತು. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತಾವು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಂಬುಲೆನ್ಸ್ ಚಾಲಕರು ಮತ್ತು ಸಿಬ್ಬಂದಿಯ ಸಂಘದ ಮುಖಂಡರಿಗೆ ತಿಳಿಸಿದ್ದರು. ಈ ಕಾರಣದಿಂದ ಮುಷ್ಕರ ನಡೆಸುವುದನ್ನು ಮಂಗಳವಾರ ಸಂಜೆಯವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು 108 ಆಂಬುಲೆನ್ಸ್ ನೌಕರರ ಸಂಘದ ರಾಜ್ಯ ಪದಾಧಿಕಾರಗಳು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಕರಾವಳಿಯಲ್ಲಿ ಹೃದಯಾಘಾತದಿಂದಾಗಿ ಇಬ್ಬರ ಸಾವು; ಖೋಟಾ ನೋಟು ಪ್ರಕರಣ ಆರೋಪಿಗಳಿಂದ ಮಹತ್ವದ ಮಾಹಿತಿ

ಕೊಚ್ಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಬೆಂಗಳೂರು ವಿಮಾನನಿಲ್ದಾಣದಲ್ಲಿ ತುರ್ತುಭೂಸ್ಪರ್ಶ, 150 ಪ್ರಯಾಣಿಕರು ಸೇಫ್

ಆರೋಗ್ಯ ಕವಚ ನೌಕರರನ್ನು ಪ್ರತಿನಿಧಿಸುವ ಸುವರ್ಣ ಕರ್ನಾಟಕ, ಅಖಲ ಕರ್ನಾಟಕ ಮತ್ತು ಆರೋಗ್ಯ ಕವಚ ನೌಕರರ ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರು ಚುನಾವಣಾ ಕೆಲಸದ ನಿಮಿತ್ತ ಹೊರ ರಾಜ್ಯಕ್ಕೆ ತೆರಳಿದ್ದಾರೆ. ಮಂಗಳವಾರ ಇಬ್ಬರೂ ಬೆಂಗಳೂರಿಗೆ ಮರಳುವ ಸಾಧ್ಯತೆಗಳಿವೆ. ಅವರು ಬಂದ ನಂತರ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಸಚಿವರು ಭರವಸೆ ನೀಡಿರುವ ಕಾರಣ ಮುಷ್ಕರ ಆರಂಭಿಸುವುದನ್ನು ಮಂಗಳವಾರ ಸಂಜೆಯವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು 108 ಆರೋಗ್ಯ ಕವಚ ನೌಕರರ ಸಂಘ ತಿಳಿಸಿದೆ. ಒಂದು ವೇಳೆ ನಾಳೆಯೊಳಗೆ ಸಮಸ್ಯೆ ಬಗೆಹರಿಯದಿದ್ದರೆ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ.

ಈ ಆರೋಗ್ಯ ಕವಚ ಯೋಜನೆಯನ್ನು ಜಿವಿಕೆ-ಇಎಂಆರ್‌ಐ ಸಂಸ್ಥೆ ನಿರ್ವಹಿಸುತ್ತಿದ್ದು ಸುಮಾರು 2,500 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಮತ್ತು ಜಿವಿಕೆ ಸಂಸ್ಥೆ ವಿರುದ್ಧ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ನಿಗದಿಪಡಿಸಿದ ವೇತನದಲ್ಲಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಅರ್ಧದಷ್ಟು ವೇತನ ಮಾತ್ರ ನೀಡಲಾಗಿದ್ದು, ಕಳೆದ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ. ಮತ್ತೊಂದು ಕಡೆ ವೇತನವನ್ನು ಕಡಿತಗೊಳಿಸಲಾಗಿದೆ ಎಂದು ನೌಕರರು ಆರೋಪಿಸಿದ್ದಾರೆ. ಕಾಲ ಕಾಲಕ್ಕೆ ಸಂಬಳ ನೀಡದಿರುವುದರಿಂದ ನೌಕರರು ಮತ್ತು ಅವರ ಕುಟುಂಬ ಜೀವನ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಸರ್ಕಾರವನ್ನು ಎಚ್ಚರಿಸಲು ಮುಷ್ಕರ ಅನಿವಾರ್ಯ ಎಂದು ಅವರು ಹೇಳಿದ್ದಾರೆ.

(ವರದಿ: ಎಚ್. ಮಾರುತಿ.ಬೆಂಗಳೂರು)

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ