logo
ಕನ್ನಡ ಸುದ್ದಿ  /  ಕರ್ನಾಟಕ  /  New Year Celebrations: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಸದ್ಯವೇ ಬಿಡುಗಡೆ: ಏನೆಲ್ಲಾ ಇದೆ ಪೊಲೀಸ್‌ ಸೂಚನೆ

New year celebrations: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಸದ್ಯವೇ ಬಿಡುಗಡೆ: ಏನೆಲ್ಲಾ ಇದೆ ಪೊಲೀಸ್‌ ಸೂಚನೆ

HT Kannada Desk HT Kannada

Dec 20, 2023 08:50 AM IST

google News

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕೆಲವು ಮಾರ್ಗಸೂಚಿಗಳನ್ನು ಪೊಲೀಸರು ನೀಡಲಿದ್ದಾರೆ.

    • New year celebrations in Bangalore ಬೆಂಗಳೂರಿನಲ್ಲಿ ಈ ಬಾರಿಯೂ ಹೊಸ ವರ್ಷ ಸ್ವಾಗತಿಸುವ( New year welcome) ಸಡಗರ ಇರಲಿದೆ. ಇದಕ್ಕೆ ಬೆಂಗಳೂರು ಪೊಲೀಸರು( Bengaluru Police) ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಅಣಿಯಾಗುತ್ತಿದ್ದಾರೆ.
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕೆಲವು ಮಾರ್ಗಸೂಚಿಗಳನ್ನು ಪೊಲೀಸರು ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕೆಲವು ಮಾರ್ಗಸೂಚಿಗಳನ್ನು ಪೊಲೀಸರು ನೀಡಲಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆ ಉತ್ಸಾಹದಲ್ಲಿ ಬಹುತೇಕರಿದ್ದಾರೆ. ಹೊಸ ವರ್ಷವನ್ನು ಬರ ಮಾಡಿಕೊಳ್ಳುವ ಸಂಭ್ರಮಕ್ಕೆ ಬೆಂಗಳೂರಿನಲ್ಲಿ ಯಾವುದೇ ಅಡ್ಡಿಯಿಲ್ಲ. ಆದರೆ ಕೆಲವು ಸೂಚನೆಗಳನ್ನಂತೂ ಪಾಲಿಸಲೇಬೇಕಾಗುತ್ತದೆ.

ಬೆಂಗಳೂರು ನಗರ ಪೊಲೀಸರು ಸದ್ಯವೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಇದಕ್ಕೂ ಮುಂಚೆಯೇ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ನೀಡಿರುವ ಕೆಲವು ಸೂಚನೆಗಳನ್ನು ಒಮ್ಮೆ ಗಮನಿಸಿಬಿಡಿ.

ಪಟಾಕಿ ಹಚ್ಚುವಂತಿಲ್ಲ, ಧ್ವನಿವರ್ಧಕ ಬಳಸುವಂತಿಲ್ಲ; ಮೇಲ್ಸೇತುವೆ ಮೇಲೆ ವಾಹನ ಸಂಚಾರ ಇಲ್ಲ ಎನ್ನುವುದೂ ಸೇರಿ ಹಲವಾರು ಸೂಚನೆಗಳು ಇರಲಿವೆ.

ಕಟ್ಟುನಿಟ್ಟಿನ ಕ್ರಮ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.

ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರು, ಹೆಚ್ಚುವರಿ ಆಯುಕ್ತರು, ಜಂಟಿ ಪೊಲೀಸ್ ಆಯುಕ್ತರು, ಸಂಚಾರಿ ವಿಭಾಗದ ಅಧಿಕಾರಿಗಳು, ಅಗ್ನಿಶಾಮಕ ದಳ, ಬಿಬಿಎಂಪಿ,

ಬೆಸ್ಕಾಂ ಇಲಾಖೆಗಳ ಅಧಿಕಾರಿಗಳ ಜಂಟಿ ಸಭೆ ನಡೆದಿದೆ. ಮತ್ತೊಂದು ಸುತ್ತಿನ ಚರ್ಚೆ ನಡೆಸಿದ ಬಳಿಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಪಟಾಕಿ ಹಚ್ಚುವುದು, ಧ್ವನಿವರ್ಧಕಗಳನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗುತ್ತದೆ. ಬಾರ್ ಮತ್ತು ರೆಸ್ಟೋರೆಂಟ್ ಮತ್ತು ಹೋಟೆಲ್ ಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಎಚ್ಚರಿಕೆ ನೀಡಲಾಗಿದೆ. ಕುಟುಂಬದ ಸದಸ್ಯರೊಂದಿಗೆ ಆಗಮಿಸುವವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಾಗಿದೆ.

ಹಾಗೆಯೇ ಡಿಸೆಂಬರ್ 31ರ ರಾತ್ರಿಯಿಡೀ ವಿದ್ಯುತ್ ಸರಬರಾಜಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಬೆಸ್ಕಾಂಗೆ ಸೂಚನೆ ನೀಡಲಾಗಿದೆ.

ಸಿಸಿ ಕ್ಯಾಮೆರಾಗಳ ಅಳವಡಿಕೆ

ಡಿಸೆಂಬರ್ 31ರಂದು ರಾತ್ರಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತದೆ. ಹೊಸ ವರ್ಷಾಚರಣೆಗೆ ಹೆಚ್ಚು ಜನ ಸೇರುವ ಪ್ರದೇಶಗಳಾದ, ಎಂಜಿ ರಸ್ತೆ, ಕಮರ್ಷಿಯಲ್ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾ ನಗರ ಮೊದಲಾದ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿದೆ.

ಎಂಜಿ ರಸ್ತೆಯೊಂದರಲ್ಲೇ 200 ಸಿಸಿಟಿವಿಗಳನ್ನು ಅಳವಡಿಸಲಾಗುತ್ತದೆ. ಅಂದು ರಾತ್ರಿ 1 ಗಂಟೆಯ ವೇಳೆಗೆ ಸಂಭ್ರಮಾಚರಣೆ ಮುಗಿಸುವಂತೆ ನಿರ್ದೇಶನ ನೀಡಲಾಗಿದೆ. ರಾತ್ರಿ 10 ಗಂಟೆಯಿಂದಲೇ ಎಲ್ಲ ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತದೆ. ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಮಹಿಳಾ ಪೊಲೀಸರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ಮುಂದಿನ ವಾರ ಮಾರ್ಗಸೂಚಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ನಂತರ ಮುಂದಿನ ವಾರ ಹೊಸ ವರ್ಷಾಚರಣೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಈ ಹಿಂದೆ ಕೈಗೊಂಡ ಕ್ರಮಗಳನ್ನು ಅವಲೋಕಿಸಿ ಈ ವರ್ಷದಲ್ಲಿ ಕೈಗೊಳ್ಳಬೇಕಾದ ತೀರ್ಮಾನಗಳನ್ನು ಕುರಿತು ತೀರ್ಮಾನ ಮಾಡುತ್ತೇವೆ. ಹೊಸ ವರ್ಷದ ಸಂಭ್ರಮಾಚರಣೆ ಮಾಡುವವರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸುರಕ್ಷತಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿ ನಗರದ ವಿವಿಧ ಭಾಗಗಳಲ್ಲಿ ಪ್ರತಿ ವರ್ಷದಂತೆ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗುತ್ತದೆ. ಆದರೆ, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ನಡೆಸಿ, ಅವರು ನೀಡುವ ಸಲಹೆಗಳ ಪ್ರಕಾರವೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ. ಜತೆಗೆ ಭದ್ರತೆಯನ್ನು ಕೈಗೊಳ್ಳಲಾಗುತ್ತದೆ. ಇಲಾಖೆ ಹಂತದಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದರು.

(ವರದಿ: ಎಚ್. ಮಾರುತಿ, ಬೆಂಗಳೂರು)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ