logo
ಕನ್ನಡ ಸುದ್ದಿ  /  ಕರ್ನಾಟಕ  /  Bangalore News: ಒಂದಲ್ಲ ಎರಡಲ್ಲ ಬರೋಬ್ಬರಿ 808 ನಕಲಿ ಖಾತೆ; ಆರ್‌ಆರ್‌ ನಗರದಲ್ಲಿ ಬಿಬಿಎಂಪಿಗೆ 20 ಕೋಟಿ ರೂ ವಂಚನೆ

Bangalore News: ಒಂದಲ್ಲ ಎರಡಲ್ಲ ಬರೋಬ್ಬರಿ 808 ನಕಲಿ ಖಾತೆ; ಆರ್‌ಆರ್‌ ನಗರದಲ್ಲಿ ಬಿಬಿಎಂಪಿಗೆ 20 ಕೋಟಿ ರೂ ವಂಚನೆ

Raghavendra M Y HT Kannada

Mar 14, 2024 07:56 AM IST

ಬೆಂಗಳೂರಿನ ಕಾರ್ಪೊರೇಷನ್‌ನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಕಚೇರಿ.

    • ಆರ್‌ಆರ್‌ನಗರದ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ನಕಲಿ ಖಾತೆ ಸೃಷ್ಟಿಸಿ 20 ಕೋಟಿ ರೂಪಾಯಿಗೂ ಹೆಚ್ಚು ಹಣ ವಂಚಿಸಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಕಾರ್ಪೊರೇಷನ್‌ನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಕಚೇರಿ.
ಬೆಂಗಳೂರಿನ ಕಾರ್ಪೊರೇಷನ್‌ನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಕಚೇರಿ. (HT)

ಬೆಂಗಳೂರಿನ ರಾಜರಾಜೇಶ್ವರಿನಗರ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ 808 ನಕಲಿ ಖಾತೆಗಳನ್ನು ಮಾಡಲಾಗಿದ್ದು, 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ವಂಚಿಸಿರುವ ಪ್ರಕರಣ ಪತ್ತೆಯಾಗಿದೆ. ಚನ್ನಸಂದ್ರ, ಹಲಗೆವಡೇರಹಳ್ಳಿ ಮತ್ತು ಹೊಸಕೆರೆಹಳ್ಳಿ ಪ್ರದೇಶಗಳಿಗೆ ಸಂಬಂಧಿಸಿದಂತೆ ಒಟ್ಟು 808 ಖಾತೆಗಳನ್ನು ಎ ವರ್ಗದಲ್ಲಿ ಸೃಷ್ಟಿಸಲಾಗಿದೆ. ಈ ಹಗರಣಕ್ಕೆ ಪ್ರಥಮ ದರ್ಜೆ ಸಹಾಯಕ ಓಂಕಾರಮೂರ್ತಿ ಎಂಬುವರೇ ಈ ಅಕ್ರಮದ ರೂವಾರಿಯಾಗಿದ್ದಾರೆ. ಈ ಅನ್ಯಾಯ ಮತ್ತು ವಂಚನೆ ಕುರಿತು ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕ, ಬಿಜೆಪಿ ಮುಖಂಡ ಎನ್‌.ಆರ್‌ ರಮೇಶ್‌, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸುಮಾರು 122 ಪುಟಗಳ ದಾಖಲೆಗಳನ್ನು ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Elephant Census2024: ದಕ್ಷಿಣ ಭಾರತದ ರಾಜ್ಯಗಳಲ್ಲಿ ಮೇ 23ರಿಂದ ಆನೆಗಣತಿಗೆ ಸಿದ್ದತೆ, ಕರ್ನಾಟಕದಲ್ಲೂ ತಯಾರಿ, ಏನಿದರ ವಿಶೇಷ

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಬಂದಿಲ್ಲ; ಲೋಕಸಭಾ ಚುನಾವಣೆ ಫಲಿತಾಂಶ ತನಕ ಬರುವ ನಿರೀಕ್ಷೆಯೂ ಇಲ್ಲ, ಎಸ್‌ಐಟಿ ಮೂಲ ಹೇಳಿಕೆ

ವಿಜಯಪುರದಿಂದ ಅಯೋಧ್ಯೆಗೆ ಬೈಕ್ ಸವಾರಿ; ಪ್ರಯಾಣಕ್ಕೆಷ್ಟು ದಿನ, ರೂಟ್ ಯಾವುದು ಶಿವಾನಂದ ಪರೀಟ ಅನುಭವ ಕಥನ

ಬಿಬಿಎಂಪಿಗೆ 10 ವರ್ಷದ ಹಿಂದೆ ಸೇರ್ಪಡೆಯಾದ 110 ಗ್ರಾಮಗಳಿಗೆ ಕಾವೇರಿ 5 ನೇ ಹಂತದಲ್ಲಿ ನೀರಿನ ಸಂಪರ್ಕ, ಅಧಿಕಾರಿಗಳಿಗೆ ಜಲಮಂಡಳಿ ಸೂಚನೆ

ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿ, ನೌಕರರಿಗಿಂತಲೂ ಮಧ್ಯವರ್ತಿಗಳ ಹಾವಳಿ ವಿಪರೀತವಾಗಿದೆ. ಮಧ್ಯವರ್ತಿಗಳಾದ ಯಶವಂತಕುಮಾರ್‌, ವಿಜಯಕುಮಾರ್, ಮುತ್ತುರಾಜ್‌ ಅವರು ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರ ಆಸನಗಳಲ್ಲಿ ಕುಳಿತು ಮನಸೋ ಇಚ್ಛೆ ದಾಖಲೆಗಳನ್ನು ತಿದ್ದುತ್ತಿದ್ದಾರೆ. ಇವರು ಸೃಷ್ಟಿಸಿದ ದಾಖಲೆಗಳಿಗೆ ಕಂದಾಯ ಪರಿವೀಕ್ಷಕರಾದ ಗಣೇಶ್‌, ಸಹಾಯಕ ಕಂದಾಯ ಅಧಿಕಾರಿ ಅರುಣ್ ಕುಮಾರ್‌ ಸಹಿ ಹಾಕಿದ್ದಾರೆ. ಈ ರೀತಿ 808 ಖಾತೆಗಳನ್ನು ಸೃಷ್ಟಿಸಿರುವ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಮತ್ತು ಉಪ ಆಯುಕ್ತರನ್ನು ಅಮಾನತು ಮಾಡಬೇಕು ಎಂದು ಎನ್‌.ಆರ್‌ ರಮೇಶ್‌ ಒತ್ತಾಯಿಸಿದ್ದಾರೆ.

ಲಂಚ ಪಡೆದ ಆರೋಪ ಸಾಬೀತು, ಇಬ್ಬರಿಗೆ ಜೈಲು ಶಿಕ್ಷೆ

ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಅಪರಾಧಿಗಳಿಗೆ ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್‌ ಹಾಗೂ ಸೆಷನ್ಸ್‌ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಮನೆಗೆ ಹೊಸ ವಿದ್ಯುತ್ ಸಂಪರ್ಕ ಕಲ್ಪಿಸುವ ನಕ್ಷೆಗೆ ಅನುಮೋದನೆ ನೀಡಲು ಲಂಚ ಪಡೆದಿದ್ದ ಆರೋಪ ಸಾಬೀತಾಗಿದ್ದು, ದಕ್ಷಿಣ ವಿಭಾಗದ ಉಪಮುಖ್ಯ ಎಲೆಕ್ಟ್ರಿಕಲ್‌ ಇನ್‌ಸ್ಪೆಕ್ಟರ್‌ ಕೆ.ವಿ ಸದಾನಂದಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.50 ಲಕ್ಷ ದಂಡ ವಿಧಿಸಿ, ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ವಿನಾಯಕನಗರದಲ್ಲಿ ನಿರ್ಮಿಸಿದ್ದ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ನಕ್ಷೆಗೆ ಅನುಮೋದನೆಗಾಗಿ ಮನೆ ಮಾಲೀಕ ಆರ್‌.ಬಿ ದಯಾನಂದ್‌ ಎಂಬುವರಿಂದ 25 ಸಾವಿರ ರೂಪಾಯಿ ಲಂಚಕ್ಕಾಗಿ ಇನ್‌ಸ್ಪೆಕ್ಟರ್‌ ಬೇಡಿಕೆ ಇಟ್ಟಿದ್ದರು. ಅವರು ಎಸಿಬಿಗೆ ದೂರು ನೀಡಿದ್ದರು. 2016ರ ನವೆಂಬರ್‌ 30ರಂದು ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಪರಾಧಿಯನ್ನು ಬಂಧಿಸಿದ್ದರು. ತನಿಖೆ ನಡೆಸಿದ ಅಧಿಕಾರಿಗಳು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಉಪಮುಖ್ಯ ಎಲೆಕ್ಟ್ರಿಕಲ್‌ ಇನ್‌ಸ್ಪೆಕ್ಟರ್‌ ಕೆ.ವಿ ಸದಾನಂದ ಅವರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಅನುಭವಿಸಬೇಕಿದೆ.

ಖಾತಾ ಬದಲಾವಣೆ ಮಾಡಿಕೊಡುವುದಕ್ಕಾಗಿ 6 ಸಾವಿರ ರೂಪಾಯಿ ಲಂಚ ಪಡೆದಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನ ಸೊಣ್ಣಪ್ಪನಹಳ್ಳಿಯ ಗ್ರಾಮ ಪಂಚಾಯಿತಿಯ ಗುತ್ತಿಗೆ ಆಧಾರಿತ ಬಿಲ್‌ ಕಲೆಕ್ಟರ್‌ ಎಚ್‌ ಮೂರ್ತಿಗೆ ಇದೇ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ, ಮತ್ತೆ ಎರಡು ತಿಂಗಳು ಜೈಲು ಶಿಕ್ಷೆ ವಿಧಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. 2017ರ ನ.24ರಂದು ಎಚ್‌.ಮೂರ್ತಿ, ದೂರುದಾರರಿಂದ ಜಮೀನಿನ ಖಾತಾ ವರ್ಗಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಪೊಲೀಸರು ಬಂಧಿಸಿದ್ದರು.

(This copy first appeared in Hindustan Times Kannada website. To read more like this please logon to kannada.hindustantimes.com )

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ