Indian Railways:ಬೆಂಗಳೂರು ದಾನಾಪುರ 10 ವಿಶೇಷ ರೈಲುಗಳ ಸಂಚಾರ ಮುಂದುವರಿಕೆ, ಯಾವ ದಿನ, ಎಷ್ಟು ಟ್ರಿಪ್
Apr 15, 2024 08:56 PM IST
ಬೆಂಗಳೂರು ದಾನಾಪುರ ವಿಶೇಷ ರೈಲುಗಳ ಸೇವೆ ಮುಂದುವರಿಯಲಿದೆ.
ಭಾರತೀಯ ರೈಲ್ವೆಯು ಬೆಂಗಳೂರಿನಿಂದ ಬಿಹಾರದ ದಾನಾಪುರವರೆಗೆ ಸಂಚರಿಸುವ ವಿಶೇಷ ರೈಲುಗಳ ಸೇವೆಯನ್ನು ಜುಲೈವರೆಗೂ ಮುಂದುವರಿಸಿದೆ.
ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬಿಹಾರದ ದಾನಾಪುರ ನಿಲ್ದಾಣಗಳ ನಡುವೆ ಚಲಿಸುವ ಹತ್ತು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಅಸ್ತಿತ್ವದಲ್ಲಿರುವ ಮಾರ್ಗ, ನಿಲುಗಡೆ ಮತ್ತು ಸಮಯದೊಂದಿಗೆ ಜುಲೈ-2024 ರವರೆಗೆ ಮುಂದುವರಿಸಲು ಪೂರ್ವ ಮಧ್ಯ ರೈಲ್ವೆ ವಲಯವು ಸೂಚಿಸಿದೆ. ಈ ಕುರಿತು ನೈರುತ್ಯ ರೈಲ್ವೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು. ವಿಶೇಷ ರೈಲು ಯಾವ ದಿನದವರೆಗೆ ಹಾಗೂ ಎಷ್ಟು ಟ್ರಿಪ್ ಹೊರಡಲಿದೆ ಎನ್ನುವ ವಿವರಗಳನ್ನು ನೀಡಲಾಗಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ. ಇದಲ್ಲದೇ ಕೆಲವು ರೈಲುಗಳ ನಿಲುಗಡೆ ಅವಧಿಯನ್ನೂ ವಿಸ್ತರಣೆ ಮಾಡಲಾಗಿದೆ. ಎಂದು ಹೇಳಿದ್ಧಾರೆ.
ಹತ್ತು ವಿಶೇಷ ರೈಲುಗಳ ಸಂಚಾರ ಮುಂದುವರಿಕೆ
1. ರೈಲು ಸಂಖ್ಯೆ 03245 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 31.07.2024 ರವರೆಗೆ ಸಂಚರಿಸಲಿದೆ (14 ಟ್ರಿಪ್).
2. ರೈಲು ಸಂಖ್ಯೆ 03246 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 02.08.2024 ರವರೆಗೆ ಸಂಚರಿಸಲಿದೆ (14 ಟ್ರಿಪ್).
3. ರೈಲು ಸಂಖ್ಯೆ 03251 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 29.07.2024 ರವರೆಗೆ ಸಂಚರಿಸಲಿದೆ (26 ಟ್ರಿಪ್).
4. ರೈಲು ಸಂಖ್ಯೆ 03252 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 31.07.2024 ರವರೆಗೆ ಸಂಚರಿಸಲಿದೆ (26 ಟ್ರಿಪ್).
5. ರೈಲು ಸಂಖ್ಯೆ 03259 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 30.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
6. ರೈಲು ಸಂಖ್ಯೆ 03260 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 01.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
7. ರೈಲು ಸಂಖ್ಯೆ 03247 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 25.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
8. ರೈಲು ಸಂಖ್ಯೆ 03248 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ 27.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
9. ರೈಲು ಸಂಖ್ಯೆ 03241 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 26.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
10. ರೈಲು ಸಂಖ್ಯೆ 03242 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 28.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಮಾರಿಕುಪ್ಪಂ ನಿಲ್ದಾಣಗಳ ನಡುವೆ ಸಂಚರಿಸುವ ಮೆಮು ಸ್ಪೆಷಲ್ (ರೈಲು ಸಂಖ್ಯೆ 01771/01772) & ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ನಡುವೆ ಪ್ರತಿನಿತ್ಯ ಸಂಚರಿಸುವ ಮೆಮು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16521) ರೈಲುಗಳಿಗೆ ದೇವನಗೊಂದಿ ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಏಪ್ರಿಲ್ 16 ರಿಂದ ಜುಲೈ 16, 2024 ರವರೆಗೆ ಅಂದರೆ ಇನ್ನೂ ಮೂರು ತಿಂಗಳ ಕಾಲ ಮುಂದುವರಿಯಲಿದೆ.
ವಿಜಯಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ (ರೈ.ಸಂಖ್ಯೆ 07377/07378) ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಎರಡು ನಿಮಿಷ ತಾತ್ಕಾಲಿಕ ನಿಲುಗಡೆ ಏಪ್ರಿಲ್ 17 ರಿಂದ ಅಕ್ಟೋಬರ್ 16, 2024 ರವರೆಗೆ ರವರೆಗೆ ಅಂದರೆ ಆರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.
ಯಶವಂತಪುರ-ಸಿಂಧನೂರು ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ (ರೈ.ಸಂಖ್ಯೆ 16545/16546) ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಏಪ್ರಿಲ್ 17 ರಿಂದ ಅಕ್ಟೋಬರ್ 16, 2024 ರವರೆಗೆ ಅಂದರೆ ಆರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.