logo
ಕನ್ನಡ ಸುದ್ದಿ  /  ಕರ್ನಾಟಕ  /  Bangalore News:ರೊಬೋಟಿಕ್ ತಂತ್ರಜ್ಞಾನ ಮೂಲಕ ಬೆಂಗಳೂರು ನೀರಿನ ನಿರ್ವಹಣೆಗೆ ಜಲಮಂಡಳಿ ಯೋಜನೆ

Bangalore News:ರೊಬೋಟಿಕ್ ತಂತ್ರಜ್ಞಾನ ಮೂಲಕ ಬೆಂಗಳೂರು ನೀರಿನ ನಿರ್ವಹಣೆಗೆ ಜಲಮಂಡಳಿ ಯೋಜನೆ

Umesha Bhatta P H HT Kannada

Mar 19, 2024 10:08 PM IST

ನೀರು ಶುದ್ದೀಕರಣಕ್ಕೆ ಬಳಸುವ ರೋಬೋಟಿಕ್‌ ತಂತ್ರಜ್ಞಾನದ ಮಾದರಿ.

    • ಬೆಂಗಳೂರಿನಲ್ಲಿ ನೀರಿನ ಶುದ್ದೀಕರಣದ ಜತೆಗೆ ಲಭ್ಯತೆಗಾಗಿ ಬೆಂಗಳೂರು ಜಲಮಂಡಳಿಯು ರೋಬೋಟಿಕ್‌ ತಂತ್ರಜ್ಞಾನಕ್ಕೆ ಮೊರೆ ಹೋಗಲು ಮುಂದಾಗಿದೆ. 
    • ವರದಿ: ಎಚ್‌.ಮಾರುತಿ, ಬೆಂಗಳೂರು
ನೀರು ಶುದ್ದೀಕರಣಕ್ಕೆ ಬಳಸುವ ರೋಬೋಟಿಕ್‌ ತಂತ್ರಜ್ಞಾನದ ಮಾದರಿ.
ನೀರು ಶುದ್ದೀಕರಣಕ್ಕೆ ಬಳಸುವ ರೋಬೋಟಿಕ್‌ ತಂತ್ರಜ್ಞಾನದ ಮಾದರಿ.

ಬೆಂಗಳೂರು: ತನ್ನ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಚಿಂತನೆ ನಡೆಸಿದೆ. ಬೆಂಗಳೂರು ಕೊಳವೆ ಬಾವಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಜಲ ಮಂಡಳಿ ಅಧಿಕಾರಿಗಳು ರೋಬೋಟಿಕ್‌ ತಂತ್ರಜ್ಞಾನ ಅಳವಡಿಕೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಟ್ರೆಂಡಿಂಗ್​ ಸುದ್ದಿ

Hubli News: ಹುಬ್ಬಳ್ಳಿ ಅಂಜಲಿ ಅಂಬಿಗೇರ ಪ್ರಕರಣ, ಎಸಿಪಿ ಸಸ್ಪೆಂಡ್‌, ನೂತನ ಡಿಸಿಪಿ ನೇಮಕ

Mangalore News: ಪದ್ಮಶ್ರೀ ಹರೇಕಳ ಹಾಜಬ್ಬರ ಶಾಲೆಯಲ್ಲಿ ದುರಂತ, ಮಳೆಗೆ ಶಿಥಿಲಗೊಂಡ ಆವರಣಗೋಡೆ, ಗೇಟು ಕುಸಿದು ಬಾಲಕಿ ದುರ್ಮರಣ

Puc Exam-2 Results: ಕರ್ನಾಟಕ ದ್ವಿತೀಯ ಪರೀಕ್ಷೆ- 2 ಫಲಿತಾಂಶ ಮಂಗಳವಾರ ಪ್ರಕಟ, ನೋಡೋದು ಹೇಗೆ

Hubli News: ಹುಬ್ಬಳ್ಳಿ ಅಂಜಲಿ‌ ಅಂಬಿಗೇರ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ, ತಪ್ಪಿತಸ್ಥ ಪೊಲೀಸರ ವಿರುದ್ದ ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ

ಸಭೆಯಲ್ಲಿ ಹಾಜರಿದ್ದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ರೋಬೋಟಿಕ್‌ ತಂತ್ರಜ್ಞಾನ ಅಳವಡಿಸಿಕೊಳ್ಳಲು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಜಲಮಂಡಳಿಯ ವ್ಯಾಪ್ತಿಯಲ್ಲಿ11 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೆಲವನ್ನು ತಾಂತ್ರಿಕ ಕಾರಣಗಳಿಂದಾಗಿ ಬಳಸಲಾಗುತ್ತಿಲ್ಲ. ಅಸಮರ್ಪಕ ನಿರ್ವಹಣೆಯೇ ಇದಕ್ಕೆ ಪ್ರಮುಖ ಕಾರಣ ಎಂಬ ಮಾಹಿತಿಯನ್ನು ತಿಳಿಸಿದ್ದಾರೆ.

ರೋಬೋಟಿಕ್‌ ತಂತ್ರಜ್ಞಾನದ ಪ್ರಯೋಜನಗಳು

ಕೊಳವೆ ಬಾವಿಯ ಪಂಪ್‌ ಸೆಟ್‌ಗಳನ್ನು ಅತಿ ಹೆಚ್ಚು ಸಮಯ ಬಳಸುವುದು. ನೀರು ಇಲ್ಲದೇ ಮೋಟಾರ್‌ ಓಡಿಸುವುದರಿಂದ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಇವುಗಳನ್ನು ಸರಿಯಾದ ಸಮಯದಲ್ಲಿ ರಿಪೇರಿ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಹಲವು ತಾಂತ್ರಿಕ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನ ಬಳಸುವಂತೆ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಆಧುನಿಕ ತಂತ್ರಜ್ಞಾನದ ಅಳವಡಿಕೆಯಿಂದ ಪಂಪ್‌ಸೆಟ್‌ಗಳ ಮಾಹಿತಿ, ನೀರಿನ ಹರಿವಿನ ಮಾಹಿತಿ ಮತ್ತು ದುರಸ್ಥಿಯ ಮಾಹಿತಿ ಲಭ್ಯವಾಗುತ್ತದೆ. ಸ್ವಯಂಚಾಲಿತವಾಗಿ ಸ್ವಿಚ್‌ ಆನ್‌ ಮತ್ತು ಸ್ವಿಚ್‌ ಆಫ್‌ ಮಾಡುವುದು ಸಾಧ್ಯವಾಗುತ್ತದೆ. ಈ ಎಲ್ಲ ಮಾಹಿತಿ ಜಲಮಂಡಳಿಯಲ್ಲಿ ದಾಖಲಾಗುತ್ತದೆ. ಇದರಿಂದ ಮೋಟಾರ್ ಗಳು ದುರಸ್ಥಿಗೆ ಬರುವುದು ತಪ್ಪುವುದಲ್ಲದೇ ಸಾರ್ವಜನಿಕರಿಗೂ ತೊಂದರೆಯಾಗುವುದು ಕಡಿಮೆಯಾಗುತ್ತದೆ.

ಕೊಳವೆ ಬಾವಿಗಳ ರಿಪೇರಿ ಭರವಸೆ

ಅಂತರ್ಜಲ ಮಟ್ಟ ಕುಸಿತವಾಗಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಕುಸಿಯುತ್ತಿದೆ. ಈ ಕೊಳವೆ ಬಾವಿಗಳನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳು, ಅವುಗಳಲ್ಲಿನ ನೀರಿನ ಲಭ್ಯತೆ, ದುರಸ್ತಿ ಕುರಿತು ಮಾಹಿತಿ ಸಂಗ್ರಹಿಸುವುದು ಅತ್ಯಗತ್ಯವಾಗಿದೆ. ಇದಕ್ಕಾಗಿ ನಗರದಲ್ಲಿ ಇರುವಂತಹ ಜಲಮಂಡಳಿಯ ಕೊಳವೆ ಬಾವಿಗಳ ಸಮೀಕ್ಷೆ ಮಾಡಬೇಕಾಗಿದೆ. ಇದಕ್ಕಾಗಿ ಜಲಮಂಡಳಿಯ ಪರವಾನಗಿ ಹೊಂದಿರುವ ಬೆಂಗಳೂರು ಕೊಳವೆ ಬಾವಿ ಗುತ್ತಿಗೆದಾರ ಸಂಘ ಮತ್ತು ಜಲ ಮಂಡಳಿ ಜಂಟಿಯಾಗಿ ತಮ್ಮ ವ್ಯಾಪ್ತಿಯಲ್ಲಿರುವ ಕೊಳವೆ ಬಾವಿಗಳ ಮಾಹಿತಿಯನ್ನು ಕ್ರೋಢೀಕರಿಸಲು ಅಧ್ಯಕ್ಷರು ಸೂಚನೆ ನೀಡಿದ್ದಾರೆ.

ಸಮರೋಪಾದಿಯಲ್ಲಿ ಕೊಳವೆ ಬಾವಿಗಳ ದುರಸ್ತಿ

ರಿವೈಂಡಿಗ್‌ ನಂತಹ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಯಿಂದ ಸ್ಥಬ್ದವಾಗಿರುವ ಕೊಳವೆ ಬಾವಿಗಳನ್ನು ರಿಪೇರಿ ಮಾಡಿ ಅದನ್ನು ಸುಸ್ಥಿತಿಗೆ ತರುವುದು ಮೊದಲ ಆದ್ಯತೆ ಆಗಬೇಕಾಗಿದೆ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದಾಗ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಜಲಮಂಡಳಿ ಅಧ್ಯಕ್ಷರು ಭರವಸೆ ನೀಡಿದ್ದಾರೆ.

ಸಾಮೂಹಿಕ ಮಳೆ ನೀರು ಮರುಪೂರಣಕ್ಕೆ ಬಳಕೆ

ನಗರದಲ್ಲಿ ಬೀಳುವ ಮಳೆಯನ್ನು ಸರಿಯಾದ ರೀತಿಯಲ್ಲಿ ಮರುಪೂರಣವಾಗುವಂತೆ ಮಾಡುವ ನಿಟ್ಟಿನಲ್ಲಿ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಬಳಸಬಹುದಾಗಿದೆ. ಬತ್ತಿ ಹೋಗಿರುವ ಹಾಗೂ ಅವುಗಳನ್ನು ಮತ್ತೆ ಸರಿಪಡಿಸಲು ಸಾಧ್ಯವಾಗದೆ ಇರುವ ಕೊಳವೆ ಬಾವಿಗಳನ್ನು ಮಳೆ ನೀರು ಇಂಗು ಗುಂಡಿಗಳಾಗಿ ಬಳಸಲು, ಅದಕ್ಕೆ ಅಕ್ಕಪಕ್ಕದ ಮನೆಗಳಿಂದ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಲು ಅಗತ್ಯ ಯೋಜನೆ ರೂಪಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

(ವರದಿ: ಎಚ್‌.ಮಾರುತಿ, ಬೆಂಗಳೂರು)

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ