ಕನ್ನಡ ಸುದ್ದಿ  /  ಕರ್ನಾಟಕ  /  Bangalore Weather: ಬೆಂಗಳೂರಿನಲ್ಲಿ ದಾಖಲೆ ಬಿಸಿಲು, ಇತಿಹಾಸದಲ್ಲೇ ಅತಿ ಹೆಚ್ಚು 3ನೇ ಬಿಸಿ ದಿನ !

Bangalore Weather: ಬೆಂಗಳೂರಿನಲ್ಲಿ ದಾಖಲೆ ಬಿಸಿಲು, ಇತಿಹಾಸದಲ್ಲೇ ಅತಿ ಹೆಚ್ಚು 3ನೇ ಬಿಸಿ ದಿನ !

Umesha Bhatta P H HT Kannada

Apr 29, 2024 05:14 PM IST

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಸಿಲ ವಾತಾವರಣ ಹೀಗಿದೆ.

  • ಬಿಸಿಲ ಕಾವು ಬೆಂಗಳೂರಿಗೂ ನಿಧಾನವಾಗಿ ತಟ್ಟುತ್ತಿದೆ. ಉತ್ತರ ಕರ್ನಾಟಕದಂತೆಯೇ ಬೆಂಗಳೂರಿನಲ್ಲೂ ಉಷ್ಣಾಂಶದ ಪ್ರಮಾಣ ಹೆಚ್ಚಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಸಿಲ ವಾತಾವರಣ ಹೀಗಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಸಿಲ ವಾತಾವರಣ ಹೀಗಿದೆ.

ಬೆಂಗಳೂರು: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಮೊದಲ ಬಾರಿಗೆ ಸೋಮವಾರ 43 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವನ್ನು ದಾಖಲಿಸಿದರೆ, ಉದ್ಯಾನನಗರಿ ಬೆಂಗಳೂರಿನಲ್ಲೂ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೇ ಏರಿಕೆಯಾಗುತ್ತಲೇ ಇದೆ. ಮೂರು ದಿನದಿಂದ ಗರಿಷ್ಠ ಉಷ್ಣಾಂಶದ ಪ್ರಮಾಣ 38.5 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. ಸೋಮವಾರವೂ ಇದೇ ಪ್ರಮಾಣದಲ್ಲಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳ ಅತಿ ಹೆಚ್ಚಿನ ಉಷ್ಣಾಂಶ ಇದಾಗಿದೆ. ಅಲ್ಲದೇ ಇತಿಹಾಸದಲ್ಲಿಯೇ ಮೂರನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ ಎಂದೂ ಹೇಳಲಾಗುತ್ತಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಬಂದಿಲ್ಲ; ಲೋಕಸಭಾ ಚುನಾವಣೆ ಫಲಿತಾಂಶ ತನಕ ಬರುವ ನಿರೀಕ್ಷೆಯೂ ಇಲ್ಲ, ಎಸ್‌ಐಟಿ ಮೂಲ ಹೇಳಿಕೆ

ವಿಜಯಪುರದಿಂದ ಅಯೋಧ್ಯೆಗೆ ಬೈಕ್ ಸವಾರಿ; ಪ್ರಯಾಣಕ್ಕೆಷ್ಟು ದಿನ, ರೂಟ್ ಯಾವುದು ಶಿವಾನಂದ ಪರೀಟ ಅನುಭವ ಕಥನ

ಬಿಬಿಎಂಪಿಗೆ 10 ವರ್ಷದ ಹಿಂದೆ ಸೇರ್ಪಡೆಯಾದ 110 ಗ್ರಾಮಗಳಿಗೆ ಕಾವೇರಿ 5 ನೇ ಹಂತದಲ್ಲಿ ನೀರಿನ ಸಂಪರ್ಕ, ಅಧಿಕಾರಿಗಳಿಗೆ ಜಲಮಂಡಳಿ ಸೂಚನೆ

Anjali Murder Case; ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ನೆನಪು ಮಾಸುವ ಮೊದಲೇ 20 ವರ್ಷದ ಅಂಜಲಿಯ ಭೀಕರ ಹತ್ಯೆ, 10 ಅಂಶಗಳ ವಿವರ ವರದಿ

ಭಾರತೀಯ ಹವಾಮಾನ ಇಲಾಖೆ( IMD) ಬೆಂಗಳೂರು ಪ್ರಾದೇಶಿಕ ಕೇಂದ್ರವು ನಿತ್ಯ ಕರ್ನಾಟಕದ ಹಲವು ಭಾಗಗಳ ಉಷ್ಣಾಂಶದ ನಿಖರ ಮಾಹಿತಿ ನೀಡುತ್ತಿದೆ. ಇದರಲ್ಲಿ ಬೆಂಗಳೂರು ನಗರದ ಮಾಹಿತಿಯೂ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಆಧರಿಸಿ ಇರಲಿದೆ. ಶನಿವಾರದಂದು ಬೆಂಗಳೂರು ನಗರದಲ್ಲಿ 38 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾದರೆ ಭಾನುವಾರ ಹಾಗೂ ಸೋಮವಾರಗಳಂದು 38.5 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಬೆಂಗಳೂರು ಇದು ಸಾಮಾನ್ಯ ಉಷ್ಣಾಂಶಕ್ಕಿಂತ 4.4 ಡಿಗ್ರಿ ಸೆಲ್ಸಿಯಸ್‌ನಷ್ಟು ಅಧಿಕ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲಿ ಎಷ್ಟು

ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣ ಪ್ರದೇಶದಲ್ಲಿ ಉಷ್ಣಾಂಶ ಪ್ರಮಾಣ 37.6 ಡಿಗ್ರಿ ಸೆಲ್ಸಿಯಸ್‌, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿ 38.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಕಂಡು ಬಂದಿದೆ. ಜಿಕೆವಿಕೆ ಆವರಣದಲ್ಲಿ 37 ಡಿಗ್ರಿ ಸೆಲ್ಸಿಯಸ್‌ ನಷ್ಟಿತ್ತು.

ಬೆಂಗಳೂರಿನಲ್ಲಿ ಒಂದು ದಶಕದ ಆವರಣದಲ್ಲಿ ಈ ಉಷ್ಣಾಂಶ ಎರಡನೇ ಅತಿಯಾದ ಗರಿಷ್ಠ ಪ್ರಮಾಣದ್ದು. ಈಗ ಇದನ್ನೂ ದಾಟಿ ಹೆಚ್ಚಿನ ಪ್ರಮಾಣದ ಉಷ್ಣಾಂಶ ಬೆಂಗಳೂರಿನಲ್ಲಿ ಕಂಡು ಬರುತ್ತಿದೆ. ಇದು ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿದೆ ಎನ್ನುವುದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ನೀಡುವ ಹೇಳಿಕೆ.

ನಾಲ್ಕೈದು ದಿನ ಇದೇ ಹವಾಮಾನ

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನದಲ್ಲಿ ಗರಿಷ್ಠ ಉಷ್ಣಾಂಶ ಪ್ರಮಾಣವೂ ಅಧಿಕವಾಗಿಯೇ ಇರಲಿದೆ. ಮಂಗಳವಾರದಂದು ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶಗಳು ಇರಲಿವೆ. ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ. ಬುಧವಾರವೂ ಇದೇ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ವಾರ ಮಳೆ

ಆದರೆ ಬೆಂಗಳೂರಿನಲ್ಲಿ ಇನ್ನು ಒಂದು ವಾರ ಕಾಲ ಮಳೆ ಇರುವುದಿಲ್ಲ. ಆದರೆ ಮೇ 06ರ ಸೋಮವಾರಂದು ಹಗುರ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ