Valmiki Corporation Scam: ಸಚಿವ ನಾಗೇಂದ್ರ ರಾಜೀನಾಮೆ ಸದ್ಯಕ್ಕಿಲ್ಲ, ತನಿಖಾ ಪ್ರಾಥಮಿಕ ವರದಿ ಬರಲಿ, ಸಿಎಂ ಸಿದ್ದರಾಮಯ್ಯ
Jun 03, 2024 07:40 PM IST
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
- CM Siddaramaiah: ಕರ್ನಾಟಕದ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ಕುರಿತು ತನಿಖೆ ನಡೆಯುತ್ತಿದ್ದು, ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸ್ವರೂಪ ಪಡೆಯುತ್ತಿದೆ. ಅಧಿಕಾರಿ ಡೆತ್‌ನೋಟ್ ನಲ್ಲಿ ಪರಿಶಿಷ್ಟ ಪಂಗಡಗಳ ಖಾತೆ ಸಚಿವ ಬಿ.ನಾಗೇಂದ್ರ ಅವರ ಹೆಸರಿದ್ದು ಅವರನ್ನು ಸಂಪುಟದಿಂದ ಕೈ ಬಿಡಬೇಕು ಎನ್ನುವ ಒತ್ತಡ ಹೆಚ್ಚಿದೆ. ಬಿಜೆಪಿಯಂತೂ ಗಡುವು ನೀಡಿ ಹೋರಾಟ ನಡೆಸಿದೆ. ಇದರ ನಡುವೆ ಇದೇ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಸೋಮವಾರ ವಿಧಾನಸೌಧದ ಆವರಣದಲ್ಲಿ ಮುಂದಿನ ವಾರ ನಡೆಯಲಿರುವ ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾಗೇಂದ್ರ ಅವರ ರಾಜೀನಾಮೆ ವಿಚಾರ ಸದ್ಯಕ್ಕಿಲ್ಲ. ಈಗಾಗಲೇ ಪ್ರಕರಣವನ್ನು ಎಸ್‌ಐಟಿಗೆ ವಹಿಸಲಾಗಿದೆ. ತನಿಖೆಯೂ ನಡೆಯುತ್ತಿದೆ. ತನಿಖಾ ವರದಿ ಬರುವವರೆಗೂ ಕಾಯಬೇಕಾಗುತ್ತದೆ. ಪ್ರಾಥಮಿಕ ವರದಿ ಪಡೆದು ನಂತರ ನಾಗೇಂದ್ರ ಅವರ ರಾಜೀನಾಮೆ ಕುರಿತು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಜೂನ್ ಆರರವರೆಗೆ ಗಡುವು ನೀಡಿರುವುದನ್ನು ಗಮನಿಸಿರುವೆ. ಈ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರವಾಗಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕೆಲವು ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ. ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಹೇಳಿದರು.
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದ್ದು, ಬಿಜೆಪಿಯವರು, ಜೆಡಿಎಸ್ ಅವರು ಒಬ್ಬರಿಗೆ ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ ನಡೆಯಬೇಕು. ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಉತ್ತಮ ಮಳೆ
ಬೆಂಗಳೂರಿನಲ್ಲಿ ಒಳ್ಳೆಯ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.
ಎಕ್ಸಿಟ್ ಪೋಲ್ ತಳ್ಳಿ ಹಾಕುವೆ
ಈಗಷ್ಟೇ ಮುಗಿದಿರುವ ಲೋಕಸಭೇ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನಾದರೂ ಕರ್ನಾಟಕದಲ್ಲಿ ಗೆಲ್ಲುತ್ತೇವೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ತಿಳಿಸಿದರು.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ವಿಭಾಗ