logo
ಕನ್ನಡ ಸುದ್ದಿ  /  ಕರ್ನಾಟಕ  /  Cm Janata Darshan: ಸಿಎಂಗೆ ಅಹವಾಲು ಸಲ್ಲಿಸಬೇಕೇ, ಇಂದು ಬೆಂಗಳೂರಿನ ಜನತಾದರ್ಶನಕ್ಕೆ ಬನ್ನಿ; ಎಲ್ಲಿ, ಯಾವಾಗ ಇಲ್ಲಿದೆ ವಿವರ

CM Janata Darshan: ಸಿಎಂಗೆ ಅಹವಾಲು ಸಲ್ಲಿಸಬೇಕೇ, ಇಂದು ಬೆಂಗಳೂರಿನ ಜನತಾದರ್ಶನಕ್ಕೆ ಬನ್ನಿ; ಎಲ್ಲಿ, ಯಾವಾಗ ಇಲ್ಲಿದೆ ವಿವರ

Umesha Bhatta P H HT Kannada

Feb 08, 2024 12:58 AM IST

google News

ಬೆಂಗಳೂರಿನಲ್ಲಿ ಗುರುವಾರ ನಡೆಯುವ ಸಿಎಂ ಜನತಾದರ್ಶನಕ್ಕೆ ಸಿದ್ದತೆ ಪೂರ್ಣಗೊಂಡಿದೆ.

    • ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.8ರ ಗುರುವಾರ ರಾಜ್ಯ ಮಟ್ಟದ ಜನತಾದರ್ಶನ ಹಮ್ಮಿಕೊಂಡಿದ್ದು, ಕರ್ನಾಟಕದಾದ್ಯಂತ ನಾನಾ ಭಾಗಗಳಿಂದ ಆಗಮಿಸುವವರಿಗೆ ವ್ಯವಸ್ಥೆ ಮಾಡಲಾಗಿದೆ. 
ಬೆಂಗಳೂರಿನಲ್ಲಿ ಗುರುವಾರ ನಡೆಯುವ ಸಿಎಂ ಜನತಾದರ್ಶನಕ್ಕೆ ಸಿದ್ದತೆ ಪೂರ್ಣಗೊಂಡಿದೆ.
ಬೆಂಗಳೂರಿನಲ್ಲಿ ಗುರುವಾರ ನಡೆಯುವ ಸಿಎಂ ಜನತಾದರ್ಶನಕ್ಕೆ ಸಿದ್ದತೆ ಪೂರ್ಣಗೊಂಡಿದೆ.

ಬೆಂಗಳೂರು: ನೀವು ನೀಡಿದ ಅಹವಾಲಿಗೆ ಸ್ಥಳೀಯವಾಗಿ ಸ್ಪಂದನೆ ಸಿಕ್ಕಿಲ್ಲವೇ. ನಿಮಗೆ ಉದ್ಯೋಗ ಸಹಿತ ಹಲವಾರು ವಿಷಯಗಳಲ್ಲಿ ಸಿಎಂ ಅವರಿಗೆ ಮನವಿ ಸಲ್ಲಿಸುವುದಿತ್ತೇ, ಯಾವುದೇ ಇಲಾಖೆಯ ಕುರಿತಾಗಿ ಏನಾದರೂ ದೂರು ಸಲ್ಲಿಸುವುದಿತ್ತೇ, ಇದಕ್ಕಾಗಿ ಕರ್ನಾಟಕ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜ್ಯ ಮಟ್ಟದ ಜನತಾದರ್ಶನವನ್ನು ಹಮ್ಮಿಕೊಂಡಿದೆ. ಬೆಂಗಳೂರಿನ ವಿಧಾನಸೌಧದ ಎದುರು ಫೆ.8ರ ಗುರುವಾರ ದಿನವಿಡೀ ರಾಜ್ಯಮಟ್ಟದ ಜನತಾದರ್ಶನ ನಡೆಯಲಿದೆ. ಇಲ್ಲಿ ಅಹವಾಲು ಸಲ್ಲಿಸಿದರೆ ಅದಕ್ಕೆ ತ್ವರಿತವಾಗಿ ಸ್ಪಂದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಮೊದಲ ಬಾರಿಗೆ ರಾಜ್ಯ ಮಟ್ಟದ ಜನತಾದರ್ಶನ ಆಯೋಜಿಸಿದ್ದ ಸಿದ್ದರಾಮಯ್ಯ ಎರಡನೇ ಜನತಾದರ್ಶನ ನಡೆಸುತ್ತಿದ್ದಾರೆ.

ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

ಇಲಾಖಾವಾರು ಕೌಂಟರ್ ಗಳು

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ , ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ - ಸಿಬ್ಬಂದಿಗಳ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರು / ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವಾಹಮ ವೀಲ್‌ ಚೇರ್‌ ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

ಶೌಚಾಲಯ ವ್ಯವಸ್ಥೆ

ಜನತಾದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ