logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Covid Cases: ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ: ಬೆಂಗಳೂರಲ್ಲೇ 85 , ಮೈಸೂರು, ತುಮಕೂರು, ದಕ್ಷಿಣಕನ್ನಡದಲ್ಲೂ ಪ್ರಕರಣ

Karnataka Covid Cases: ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ: ಬೆಂಗಳೂರಲ್ಲೇ 85 , ಮೈಸೂರು, ತುಮಕೂರು, ದಕ್ಷಿಣಕನ್ನಡದಲ್ಲೂ ಪ್ರಕರಣ

HT Kannada Desk HT Kannada

Dec 24, 2023 05:05 PM IST

ಕರ್ನಾಟಕದಲ್ಲಿ ನಿಧಾನವಾಗಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದ್ದು. ತಪಾಸಣೆಯನ್ನೂ ಹೆಚ್ಚಿಸಲಾಗುತ್ತಿದೆ.

    • Covid Karnataka ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದಿದೆ. ಬೆಂಗಳೂರಿನಲ್ಲಿಯೇ( Bangalore) ಪ್ರಕರಣಗಳು ಹೆಚ್ಚಿದ್ದರೆ, ಇತರೆಡೆಯೂ ಪ್ರಕರಣ ದಾಖಲಾಗಿವೆ. ಎಷ್ಟಿವೆ ಕೋವಿಡ್‌ ಪ್ರಕರಣ ಇಲ್ಲಿದೆ ವರದಿ…
ಕರ್ನಾಟಕದಲ್ಲಿ ನಿಧಾನವಾಗಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದ್ದು. ತಪಾಸಣೆಯನ್ನೂ ಹೆಚ್ಚಿಸಲಾಗುತ್ತಿದೆ.
ಕರ್ನಾಟಕದಲ್ಲಿ ನಿಧಾನವಾಗಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದ್ದು. ತಪಾಸಣೆಯನ್ನೂ ಹೆಚ್ಚಿಸಲಾಗುತ್ತಿದೆ.

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣದಲ್ಲಿ ಕೊಂಚ ಹೆಚ್ಚಳವಾಗಿದೆ.

ಟ್ರೆಂಡಿಂಗ್​ ಸುದ್ದಿ

Bangalore News?:ಆಸ್ತಿ ತೆರಿಗೆ ಸಂಗ್ರಹ; ಗುರಿ ತಲುಪದ ಬಿಬಿಎಂಪಿ; ತಲುಪಬೇಕಿದ್ದ ಗುರಿ ಏನು? ಸಂಗ್ರಹವಾಗಿದ್ದು ಎಷ್ಟು?

BMTC News: ಬಿಎಂಟಿಸಿ ಬಸ್‌ಗಳ ಮಾರ್ಗ ಫಲಕಗಳಿಗೆ ಹೊಸ ಆಯಾಮ ನೀಡಿದ ಬೆಂಗಳೂರು ವಿದ್ಯಾರ್ಥಿ ಅಮೋಘ್‌ ಸಾಧನೆ!

Mangalore News: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ ದಕ್ಷಿಣ ಕನ್ನಡದ ತಾಯಿ, ಮಗ ದುರ್ಮರಣ

Mysuru News: ಮೈಸೂರು ಕಾಂಗ್ರೆಸ್‌ ಮುಖಂಡೆಯ ಭೀಕರ ಹತ್ಯೆ, ಕಾರಣವೇನು?

ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 104 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು, ಮೈಸೂರು, ಮಂಡ್ಯ ಭಾಗದಲ್ಲಿಯೇ ಕೋವಿಡ್‌ ಪ್ರಕರಣ ಕಾಣಿಸಿಕೊಂಡಿವೆ.

ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 104 ಪ್ರಕರಣಗಳು ಕೋವಿಡ್‌ನ ಹೊಸ ಪ್ರಕರಣ ದಾಖಲಾಗಿವೆ. ಇದರೊಂದಿಗೆ ಕರ್ನಾಟಕದಲ್ಲಿ ದಾಖಲಾಗಿರುವ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 271.ಕರ್ನಾಟಕದಲ್ಲಿ ಪಾಸಿಟಿವ್‌ ದರ ಶೇ 5.93ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿಯೇ 85 ಮಂದಿಗೆ ಕೋವಿಡ್‌ ಇರುವುದು ಪತ್ತೆಯಾಗಿದೆ. ಮೈಸೂರಿನಲ್ಲಿ 7, ಶಿವಮೊಗ್ಗ 6, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಯಲ್ಲಿ ತಲಾ 2 ಹಾಗೂ ದಕ್ಷಿಣ ಕನ್ನಡ ಮತ್ತು ಮಂಡ್ಯದಲ್ಲಿ ತಲಾ ಒಂದು ಪ್ರಕರಣ ಕಂಡು ಬಂದಿವೆ.

ಈವರೆಗೂ ಕೋವಿಡ್‌ ಪಾಸಿಟಿವ್‌ ಬಂದಿರುವವಲ್ಲಿ 258 ಮನೆಯಲ್ಲಿಯೇ ಕ್ವಾರಂಟೈನ್‌ ಆಗಿದ್ದಾರೆ. ಇನ್ನು 13 ಜನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಆರು ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶನಿವಾರದಂದು ಒಟ್ಟು 1,752 ಮಂದಿಗೆ ತಪಾಸಣೆ ಮಾಡಲಾಗಿದೆ. ತಪಾಸಣೆ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಏರಿಸಲಾಗುತ್ತದೆ. ಪ್ರಕರಣ ಅಲ್ಲಲ್ಲಿ ಏರಿಕೆಯಾಗಿದ್ದರೂ ಆತಂಕ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಮುಖ್ಯ ಎಂದು ಇಲಾಖೆ ಸೂಚನೆ ನೀಡಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ