logo
ಕನ್ನಡ ಸುದ್ದಿ  /  ಕರ್ನಾಟಕ  /  Bangalore Crime: ಬೆಂಗಳೂರು ನಿವೃತ್ತ ಐಪಿಎಸ್‌ ಅಧಿಕಾರಿ ಫೇಸ್‌ಬುಕ್‌ ನಕಲಿ ಖಾತೆಯಿಂದ ವಂಚನೆ

Bangalore Crime: ಬೆಂಗಳೂರು ನಿವೃತ್ತ ಐಪಿಎಸ್‌ ಅಧಿಕಾರಿ ಫೇಸ್‌ಬುಕ್‌ ನಕಲಿ ಖಾತೆಯಿಂದ ವಂಚನೆ

HT Kannada Desk HT Kannada

Dec 01, 2023 07:30 AM IST

google News

ಬೆಂಗಳೂರು ನಗರ ನಿವೃತ್ತ ಪೊಲೀಸ್‌ ಆಯುಕ್ತ ಜ್ಯೋತಿ ಪ್ರಕಾಶ್‌ ಮಿರ್ಜಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ತೆರೆದು ವಂಚಿಸುವ ದೂರು ದಾಖಲಾಗಿದೆ.

    • Bangalore Cyber crime ನಿವೃತ್ತ ಐಪಿಎಸ್‌ ಅಧಿಕಾರಿ ಜ್ಯೋತಿ ಪ್ರಕಾಶ್‌ ಮಿರ್ಜಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ ಮೂಲಕ ವಂಚನೆ ಮಾಡುತಿದ್ದ ಕುರಿತು ಬೆಂಗಳೂರಲ್ಲಿ( Bangalore) ಸೈಬರ್ ಪ್ರಕರಣ( Cyber crime) ದಾಖಲಾಗಿದೆ.
ಬೆಂಗಳೂರು ನಗರ ನಿವೃತ್ತ ಪೊಲೀಸ್‌ ಆಯುಕ್ತ ಜ್ಯೋತಿ ಪ್ರಕಾಶ್‌ ಮಿರ್ಜಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ತೆರೆದು ವಂಚಿಸುವ ದೂರು ದಾಖಲಾಗಿದೆ.
ಬೆಂಗಳೂರು ನಗರ ನಿವೃತ್ತ ಪೊಲೀಸ್‌ ಆಯುಕ್ತ ಜ್ಯೋತಿ ಪ್ರಕಾಶ್‌ ಮಿರ್ಜಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ತೆರೆದು ವಂಚಿಸುವ ದೂರು ದಾಖಲಾಗಿದೆ.

ಬೆಂಗಳೂರು: ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ, ಹಲವಾರು ಜನರಿಂದ ಹಣ ಪಡೆದು ವಂಚನೆ ಮಾಡಲಾಗುತ್ತಿತ್ತು.

ಈ ಬಗ್ಗೆ ಬೆಂಗಳೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇವರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಡೌನ್ ಲೋಡ್ ಮಾಡಿಕೊಂಡು ಇವರ ಹೆಸರಿನಲ್ಲಿ ಹಣ ಪಡೆಯಲಾಗುತ್ತಿತ್ತು.

ಆರೋಪಿಗಳು ಸಾರ್ವಜನಿಕರಿಗೆ ಹಣ ನೀಡುವಂತೆ ಸಂದೇಶಗಳನ್ನು ಕಳುಹಿಸಿ, ಹಣ ಪಡೆದುಕೊಳ್ಳುತ್ತಿದ್ದರು ಹಾಗೂ ಅವರ ಘನತೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದರು. ಇಂತಹ ನಕಲಿ ಸಾಮಾಜಿಕ ಜಾಲ ತಾಣಗಳ ಮುಖಾಂತರ ವಂಚಿಸುವ ಸೈಬರ್ ವಂಚಕರ ಬಗ್ಗೆ ಸಾರ್ವಜನಿಕರು ಎಚ್ಚರವಹಿಸುವಂತೆ ಹಾಗೂ ಇಂತಹ ಸಾಮಾಜಿಕ ಜಾಲತಾಣಗಳಲ್ಲಿನ ನಕಲಿ ಸಂದೇಶ ನಂಬಿ ಸಾರ್ವಜನಿಕರು ಹಣ ನೀಡಿ ಮೋಸ ಹೋಗಬಾರದು ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಟೀ ಪುಡಿ ಜಾಲ ಬಯಲು

ಪ್ರತಿಷ್ಠಿತ ಟಾಟಾ ಕಂಪನಿಯ ಅಗ್ನಿ ಟೀ ಪುಡಿಯನ್ನು ನಕಲು ಮಾಡಿ ಅಸಲಿ ಎಂದು ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ದಾಳಿಮಾಡಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ನಗರದ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿ. ಸ್ಟ್ರೀಟ್, ಲಾಲ್ ಮಸೀದಿ ರಸ್ತೆಯ ಮನೆಯೊಂದರಲ್ಲಿ ಪ್ರತಿಷ್ಠಿತ ಟಾಟಾ ಕಂಪನಿಯ

ಅಗ್ನಿ ಟೀ ಪುಡಿಯನ್ನು ನಕಲು ಮಾಡಿ ಸಾರ್ವಜನಿಕರಿಗೆ ಅಸಲಿ ಎಂದು ನಂಬಿಸಿ ಮಾರಾಟ ಮಾಡಿ ಹೆಚ್ಚಿನ ಹಣ ಸಂಪಾದನೆಯಲ್ಲಿ ತೊಡಗಿಸಿ ಕೊಂಡಿದ್ದ.

ಈ ಮೂಲಕ ಸರ್ಕಾರ ಮತ್ತು ಟಾಟಾ ಕಂಪನಿಗೆ ನಷ್ಟವುಂಟು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ಈ ಮನೆಯ ಮೇಲೆ ದಾಳಿಮಾಡಿ, ನಕಲಿ ಟೀ ಪುಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಈತನ ವಶದಿಂದ ಟಾಟಾ ಕಂಪನಿ ಹೆಸರಿನ ನಕಲಿ ಅಗ್ನಿ ಟೀ ಪುಡಿಯ ಒಂದು ಕೆ.ಜಿ ಮತ್ತು 250 ಗ್ರಾಂ ಪ್ಯಾಕೆಟ್‌ಗಳಿರುವ ಒಟ್ಟು 450 ಕೆ.ಜಿ ಟೀ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ.

ಇದರ ಮೌಲ್ಯ ರೂಪಾಯಿ 1,26,000 ಎಂದು ಅಂದಾಜು ಮಾಡಲಾಗಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಕಾಪಿರೈಟ್ಸ್ ಆಕ್ಟ್ ಪ್ರಕರಣ

ದಾಖಲಾಗಿದೆ. ಈ ಕಾರ್ಯಾಚರಣೆಯನ್ನು ಸಿ.ಸಿ.ಬಿ. ಘಟಕದ ಆರ್ಥಿಕ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

50 ಲಕ್ಷ ಮೌಲ್ಯದ ಮಾದಕ ವಸ್ತುಗಳ ವಶ

ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಒಬ್ಬ ವಿದೇಶಿ ಮತ್ತು ಒರಿಸ್ಸಾ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾದಕ ವಸ್ತುಗಳ ವಶ ಪಡಿಸಿಕೊಳ್ಳುವಲ್ಲಿ ಬೆಂಗಳೂರು ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ.

ನಿಖರ ಮಾಹಿತಿಯ ಆಧಾರದ ಮೇಲೆ ಮಾರತ್‌ಹಳ್ಳಿ ಮತ್ತು ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆಯನ್ನು ನಡೆಸಿ ವಿದೇಶಿ ಮೂಲದ ಓರ್ವ ಪ್ರಜೆ ಮತ್ತು ಒರಿಸ್ಸಾ ರಾಜ್ಯದ ಇಬ್ಬರು ವ್ಯಕ್ತಿಗಳು ಸೇರಿದಂತೆ ಒಟ್ಟು 3 ಜನ ಡ್ರಗ್‌ ಪೆಡ್ಲರ್‌ಗಳನ್ನು ವಶಕ್ಕೆ ಪಡೆದು ಅವರಿಂದ ರೂ. 50 ಲಕ್ಷ ಮೌಲ್ಯದ 180 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, 58 ಗ್ರಾಂನ 150 ಎಕ್ಸ್‌ಟಿಸಿ ಪಿಲ್ಸ್‌ಗಳು ಮತ್ತು 15 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಒರಿಸ್ಸಾ ಮೂಲದ ಇಬ್ಬರು ಆರೋಪಿಗಳು ಸುಮಾರು 6 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಫುಟ್‌ಪಾತ್ ಮೇಲೆ ತಳ್ಳುವ ಗಾಡಿಯಲ್ಲಿ ತಿಂಡಿ-ತಿನಿಸುಗಳ ವ್ಯಾಪಾರ ಮಾಡಿಕೊಂಡಿದ್ದರು. ಇವರು ಸುಲಭವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ಒರಿಸ್ಸಾದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿ ಮಾಡಿ ಸ್ಥಳೀಯ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು. ಇವರಿಂದ 15 ಕೆಜಿ ಗಾಂಜಾ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿದೇಶಿ ಮೂಲದ ವ್ಯಕ್ತಿಯು 2005ರಲ್ಲಿ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ತನ್ನ ಪಾಸ್‌ಪೋರ್ಟ್ ಮತ್ತು ವೀಸಾ ಅವಧಿ ಮುಕ್ತಾಯವಾಗಿದ್ದರೂ ಕೂಡ ನವೀಕರಣ ಮಾಡಿಸಿಕೊಳ್ಳದೆ ಬೆಂಗಳೂರಿನಲ್ಲಿ ಅನಧಿಕೃತವಾಗಿ ನೆಲೆಸಿ ಡ್ರಗ್‌ಪೆಡ್ಲಿಂಗ್‌ನಲ್ಲಿ ತೊಡಗಿಸಿ ಕೊಂಡಿದ್ದ. ಈತನ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ ಜೊತೆಗೆ

ವಿದೇಶಿಯರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಈತನ ವಶದಿಂದ ನಿಷೇಧಿತ ಮಾದಕ ವಸ್ತುವಾದ 180 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, 58 ಗ್ರಾಂನ 150 ಎಕ್ಸ್‌ಟಿಸಿ ಪಿಲ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

( ವರದಿ: ಮಾರುತಿ, ಬೆಂಗಳೂರು)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ