logo
ಕನ್ನಡ ಸುದ್ದಿ  /  ಕರ್ನಾಟಕ  /  Prajwal Revanna: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ನ್ಯಾಯಾಲಯ, ಇನ್ನಷ್ಟು ದಿನ ಜೈಲೇ ಗ್ಯಾರಂಟಿ

Prajwal Revanna: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ನ್ಯಾಯಾಲಯ, ಇನ್ನಷ್ಟು ದಿನ ಜೈಲೇ ಗ್ಯಾರಂಟಿ

Umesha Bhatta P H HT Kannada

Jun 26, 2024 05:03 PM IST

google News

ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

    • Hassan Scandal ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದ್ದು ಜೈಲು ವಾಸವೇ ಮುಂದುವರಿಯಲಿದೆ.
ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

ಬೆಂಗಳೂರು: ಹಾಸನದಲ್ಲಿ ಲೈಂಗಿಕ ದೌರ್ಜನ್ಯ ಎಸಗಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸದ್ಯಕ್ಕಂತೂ ಜೈಲಿನಿಂದ ಬಿಡುಗಡೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಏಕೆಂದರೆ ಜಾಮೀನು ಅರ್ಜಿ ಕೋರಿ ಪ್ರಜ್ವಲ್‌ ರೇವಣ್ಣ ಅವರ ಅರ್ಜಿಯನ್ನು ಬೆಂಗಳೂರು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಅವರು ಈಗಾಗಲೇ ಕೆಲವು ದಿನಗಳಿಂದ ಜೈಲಿನಲ್ಲಿದ್ದು, ಇನ್ನಷ್ಟು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿಯೇ ಮುಂದುವರೆಯಬೇಕಾಗುತ್ತದೆ. ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿರುವುದರಿಂದ ಪ್ರಜ್ವಲ್‌ ಈಗ ಹೈಕೋರ್ಟ್‌ ಮೊರೆ ಹೋಗುವುದು ಅನಿವಾರ್ಯವಾಗಿದೆ.

ಏಪ್ರಿಲ್‌ 28 ರಂದು ಪ್ರಜ್ವಲ್‌ ರೇವಣ್ಣ ವಿರುದ್ದ ಹೊಳೇ ನರಸೀಪುರದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.ಇದಾದ ಬಳಿಕ ಅತ್ಯಾಚಾರ ಎಸಗಿದ ಪ್ರಕರಣವೂ ದಾಖಲಾಗಿದ್ದವು. ಒಂದು ತಿಂಗಳಿಗೂ ಅಧಿಕ ಕಾಲ ವಿದೇಶದಲ್ಲಿಯೇ ಇದ್ದ ಪ್ರಜ್ವಲ್‌ ರೇವಣ್ಣ ಆನಂತರ ವಿಶೇಷ ತನಿಖಾ ತಂಡದ ಎದುರು ಶರಣಾಗಿದ್ದರು. ಅವರನ್ನು ಬಂಧಿಸಲಾಗಿತ್ತು. ಮೊದಲ ಪ್ರಕರಣದಲ್ಲಿಯೇ ಪ್ರಜ್ವಲ್‌ ಅವರ ವಿಚಾರಣೆ ಮುಂದುವರಿದಿದೆ. ಈಗಾಗಲೇ ಸ್ಥಳೀಯ ನ್ಯಾಯಾಲಯದಲ್ಲಿಯೇ ಪ್ರಜ್ವಲ್‌ ರೇವಣ್ಣ ಈ ಹಿಂದೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಆನಂತರ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗತ್ತು. ಈಗಾಗಲೇ ಪೊಲೀಸರು ಎರಡು ಪ್ರಕರಣಗಳನ್ನು ಪ್ರಜ್ವಲ್ ಅವರ ವಿಚಾರಣೆ, ಸ್ಥಳ ಮಹಜರು, ಸಾಕ್ಷಿಗಳ ಸಂಗ್ರಹ, ಹೇಳಿಕೆ ‌ ದಾಖಲಿಸುವ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ನ್ಯಾಯಾಂಗ ಬಂಧನಕ್ಕೂ ಒಪ್ಪಿಸಲಾಗಿದೆ.

ಇದರ ನಡುವೆ ಮೊದಲ ಕೇಸ್ ನಲ್ಲಿ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ದಾಖಲಾದ ಅರ್ಜಿ ವಿಚಾರಣೆ ಇತ್ತು. ಪ್ರಜ್ವಲ್‌ ಅವರ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್‌ ವಾದ ವಾದ ಮಂಡಿಸಿದ್ದರು. ನಮ್ಮ ಕಕ್ಷಿದಾರರು ಈಗಾಗಲೇ ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ಅವರ ವಿಚಾರಣೆಯೂ ಎರಡು ಬಾರಿ ಆಗಿದೆ.ಎಲ್ಲ ಪ್ರಕ್ರಿಯೆಗಳನ್ನು ಪೂರೈಸಿದ್ದಾರೆ. ವಿಚಾರಣೆಗೂ ಸಹಕರಿಸಿದ್ದಾರೆ. ಮುಂದೆಯೂ ಸಹಕರಿಸಲಿದ್ದಾರೆ. ಇದು ಜಾಮೀನು ನೀಡಬಹುದಾದ ಪ್ರಕರಣವಾದ್ದರಿಂದ ಸಹಕರಿಸಬೇಕು ಎಂದು ಕೋರಿದರು. ಸರ್ಕಾರದ ಪರ ಅಭಿಯೋಜಕರು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿ ಪ್ರಭಾವಿ ಆಗಿರುವುದರಿಂದ ಸಾಕ್ಷಿ ನಾಶಪಡಿಸುವ ಎಲ್ಲಾ ಸಾಧ್ಯತೆಯಿರುವುದರಿಂದ ಜಾಮೀನು ಮಂಜೂರು ಮಾಡುವುದು ಬೇಡ ಎಂದು ಕೋರಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎನ್ನಲಾಗುತ್ತಿದೆ.

ಇದೇ ಪ್ರಕರಣದಲ್ಲಿ ಪ್ರಜ್ವಲ್‌ ತಂದೆ ರೇವಣ್ಣ ಅವರು ಎರಡು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಅದೇ ರೀತಿ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಕೂಡ ಬಂಧನ ಭೀತಿ ಎದುರಿಸಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಸಹೋದರ ಡಾ.ಸೂರಜ್‌ ರೇವಣ್ಣ ಕೂಡ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿದ್ದಾರೆ. ಅವರನ್ನೂ ಬಂಧಿಸಲಾಗಿದ್ದು, ಪೊಲೀಸ್‌ ವಿಚಾರಣೆಯಲ್ಲಿದ್ದಾರೆ. ಸಿಐಡಿ ಪೊಲೀಸರು ಡಾ.ಸೂರಜ್‌ ರೇವಣ್ಣ ವಿಚಾರಣೆ ನಡೆಸುತ್ತಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ