logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Politics: ಕೈಗೆ ಮರಳಿದ ಹಿರಿಯೂರು ಬಿಜೆಪಿ ಮಾಜಿ ಶಾಸಕಿ: ಪಕ್ಷಾಂತರ ಪರ್ವ ಕರ್ನಾಟಕದಲ್ಲಿ ಜೋರು

Karnataka Politics: ಕೈಗೆ ಮರಳಿದ ಹಿರಿಯೂರು ಬಿಜೆಪಿ ಮಾಜಿ ಶಾಸಕಿ: ಪಕ್ಷಾಂತರ ಪರ್ವ ಕರ್ನಾಟಕದಲ್ಲಿ ಜೋರು

HT Kannada Desk HT Kannada

Oct 20, 2023 04:29 PM IST

google News

ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ಗೆ ಮರಳಿದರು.

    • Congress joining ಕರ್ನಾಟಕದಲ್ಲಿ( Karnataka) ಕಾಂಗ್ರೆಸ್‌ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಿರಿಯೂರು( Hiriyur) ಮಾಜಿ ಶಾಸಕಿ ಹಾಗೂ ಮಾಜಿ ಸಚಿವ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಶ್ರೀನಿವಾಸ್‌ ಬಿಜೆಪಿ (BJP) ತೊರೆದು ಕಾಂಗ್ರೆಸ್‌ಗೆ( Congress) ಮರಳಿದ್ದಾರೆ.
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ಗೆ ಮರಳಿದರು.
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕಾಂಗ್ರೆಸ್‌ಗೆ ಮರಳಿದರು.

ಬೆಂಗಳೂರು: ಕಾಂಗ್ರೆಸ್‌ ಸೇರುವವರ ಸಂಖ್ಯೆ ಅಧಿಕವಾಗುತ್ತಿದ್ದು, ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಕೃಷ್ಣಪ್ಪ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್‌ ಸೇರಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಚಿವ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿಯೂ ಆಗಿರುವ ಪೂರ್ಣಿಮಾ ಹಾಗೂ ಅವರ ಬೆಂಬಲಿಗರನ್ನು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬರ ಮಾಡಿಕೊಂಡರು.

ಅತ್ಯಂತ ಹಿಂದುಳಿದ ವರ್ಗ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ, ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಅಭಯ ನೀಡಿದರು.

ಹತ್ತು ವರ್ಷದ ಹಿಂದೆ ಎ. ಕೃಷ್ಣಪ್ಪ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿತು. ಈಗ ನಮಗೆ ಕೈ ಕೊಟ್ಟು ಹೋಗಿರುವ ಬೈರತಿ ಬಸವರಾಜನಿಗೆ ಅವಕಾಶ ಮಾಡಿಕೊಟ್ಟಿದ್ದರಿಂದ ಕೃಷ್ಣಪ್ಪ ಅವರಿಗೆ ಟಿಕೆಟ್‌ ಸಿಗದೇ ನಂತರ ಅವರು ಪಕ್ಷ ಬಿಡುವ ಸನ್ನಿವೇಶ ನಿರ್ಮಾಣವಾಯಿತು. ಮಗಳು ಪೂರ್ಣಿಮಾ ಬಿಜೆಪಿ ಸೇರಿ ಶಾಸಕರಾದರು ಎಂದು ನೆನಪಿಸಿಕೊಂಡರು.

ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿ ಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ ಎಂದರು. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವ ಡಿ.ಸುಧಾಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿದಂತೆ ಗೊಲ್ಲ ಸಮುದಾಯದ ರಾಜ್ಯ ಮುಖಂಡರೂ , ವಿಧಾನ‌ ಪರಿಷತ್ ಸದಸ್ಯರೂ ಆದ ನಾಗರಾಜ ಯಾದವ್ ಸೇರಿದಂತೆ ಹಲವು ಮಂದಿ ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ