JDS Reshuffle: ಜೆಡಿಎಸ್‌ಗೆ ಹೊಸ ಐವರು ಕಾರ್ಯಾಧ್ಯಕ್ಷರು, ಪದಾಧಿಕಾರಿಗಳ ನೇಮಕ; ಪಕ್ಷ ಸೇರಿದ ಮಾಜಿ ಐಪಿಎಸ್ ಅಧಿಕಾರಿ
Feb 06, 2024 07:30 AM IST
ಜೆಡಿಎಸ್ ಕರ್ನಾಟಕ ಘಟಕದ ಪದಾಧಿಕಾರಿಗಳನ್ನು ನೇಮಿಸಿದೆ.
- ಲೋಕಸಭೆ ಚುನಾವಣೆ ವೇಳೆ ಪಕ್ಷ ಬಲಪಡಿಸಲು ಮುಂದಾಗಿರುವ ಜೆಡಿಎಸ್ ಹಿರಿಯ ನಾಯಕರಿಗೆ ನಾನಾ ಹುದ್ದೆಗಳನ್ನು ನೀಡಿ ಸಂಘಟನೆ ಬಲಪಡಿಸಿದೆ.
ಬೆಂಗಳೂರು: ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ನಂತರ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಡಿಎಸ್ ಹೊಸ ಪದಾಧಿಕಾರಿಗನ್ನು ನೇಮಿಸಿದೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ಅವರು ಐವರು ಕಾರ್ಯಾಧ್ಯಕ್ಷರು, ನಾಲ್ವರು ಹಿರಿಯ ಉಪಾಧ್ಯಕ್ಷರು, ಉಪಾಧ್ಯಕ್ಷರು, ಮಹಾಪ್ರಧಾನ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ಧಾರೆ. ವಿವಿಧ ಘಟಕಗಳಿಗೂ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ನಡೆದ ಜೆಡಿಎಸ್ ಪ್ರಮುಖರ ಸಭೆಯಲ್ಲಿ ಪಕ್ಷ ಸಂಘಟನೆ, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
ಕೋರ್ ಕಮಿಟಿ ಸಭೆಯಲ್ಲಿ ಜಿಟಿ ದೇವೇಗೌಡ ಆಲ್ಕೊಡ್ ಹನುಮಂತಪ್ಪ, ಹೆಚ್.ಕೆ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಡಿ.ನಾಗರಾಜಯ್ಯ, ಡಿಸಿ ತಮ್ಮಣ್ಣ, ಕೆ.ಎಂ.ಕೃಷ್ಣಾರೆಡ್ಡಿ, ಸಿ.ಎಸ್.ಪುಟ್ಟರಾಜು, ಎ.ಮಂಜು, ನೇಮಿರಾಜ್ ನಾಯಕ್, ದೊಡ್ಡಪ್ಪ ಗೌಡ ಪಾಟೀಲ್, ರಾಜಾ ವೆಂಕಟಪ್ಪ ನಾಯಕ ದೊರೆ, ಸುನೀತಾ ಚೌಹಾಣ್, , ಸುರೇಶ್ ಗೌಡ, ಕೆ.ಎ.ತಿಪ್ಪೇಸ್ವಾಮಿ, ಚಂದ್ರಶೇಖರ್, ವೀರಭದ್ರಪ್ಪ ಹಾಲಹರವಿ, ಸೂರಜ್ ನಾಯಕ್ ಸೋನಿ, ಪ್ರಸನ್ನ ಕುಮಾರ್ ಭಾಗಿಯಾಗಿದ್ದರು.
ಪದಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಕೃಷ್ಣಪ್ಪ, ನೇಮಿರಾಜ್, ರಾಜೂಗೌಡ, ಕರೆಮ್ಮನಾಯಕ್, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ನಗರ ಜನತಾದಳ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಎಲ್ಲಾ ಶಾಸಕರು, ಮಾಜಿ ಶಾಸಕರು ಹಾಜರಿದ್ದರು.
ಪದಾಧಿಕಾರಿಗಳ ನೇಮಕ
ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ಸಿಂಧನೂರಿನ ವೆಂಕಟರಾವ್ ನಾಡಗೌಡ ಅವರೇ ಮುಂದುವರಿಯಲಿದ್ದಾರೆ. ಪಕ್ಷದ ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವರಾದ ಅಲ್ಕೋಡ್ ಹನುಮಂತಪ್ಪ, ಸಾ.ರಾ.ಮಹೇಶ್, ಶಾಸಕರಾದ ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್ (ರಾಜೂಗೌಡ), ಮಾಜಿ ಶಾಸಕ ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರೆಬೋಳಿ ಅವರನ್ನು ನೇಮಿಸಲಾಗಿದೆ.
ಹಿರಿಯ ಉಪಾಧ್ಯಕ್ಷರಾಗಿ ಮಾಜಿ ಶಾಸಕರಾದ ಡಾ.ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಮುಖಂಡ ಸೋಮನ ಗೌಡ ಪಾಟೀಲ್, ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ನೇಮಕಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಮಾಜಿ ಶಾಸಕರಾ ಕೆ.ಎಂ.ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕ ದೊರೆ, ಚೌಡರೆಡ್ಡಿ ತೂಪಲ್ಲಿ, ಕೆ.ಬಿ.ಪ್ರಸನ್ನ ಕುಮಾರ್, ಶಾಸಕರಾದ ಕರೆಮ್ಮ ಜಿ..ನಾಯಕ,ಟಿ. ಎ.ಶರವಣ, ಮುಖಂಡರಾದ ಸುನೀತಾ ಚೌಹಾಣ್ ಅವರನ್ನು ನೇಮಿಸಲಾಗಿದೆ.
ಪ್ರಧಾನ ಕಾರ್ಯದರ್ಶಿಗಳಾಗಿ ಮಾಜಿ ಶಾಸಕ ಸುಧಾಕರ್ ಲಾಲ್ ,ಶಾರದಾ ಅಪ್ಪಾಜಿಗೌಡ, ವೀರಭದ್ರಪ್ಪ ಹಾಲಹರವಿ, ಹಿರಿಯ ನ್ಯಾಯವಾದಿ ಎ. ಪಿ.ರಂಗನಾಥ್, ಅರ್ ಪ್ರಕಾಶ್, ಸಯ್ಯದ್ ರೋಷನ್ ಅಬ್ಬಾಸ್, ರೆಹಮತ್ ಉಲ್ಲಾ ಖಾನ್, , ಶಿವಕುಮಾರ ನಾಟೀಕಾರ್, ರೂತ್ ಮನೋರಮಾ, ಮಲ್ಲೇಶ್ ಬಾಬು ಹಾಗೂ ಕಾರ್ಯದರ್ಶಿಗಳಾಗಿ ಡಾ.ಶೀಲಾ ನಾಯಕ್, ಮಹಂತಯ್ಯಮಠ, ಶಂಸಿ ತಬ್ರಾಜ್, ಐಲಿನ್ ಜಾನ್, ಬಿ.ಕಾಂತರಾಜ್, ಸಿದ್ದಬಸಪ್ಪ ಯಾದವ್ , ಡಾ.ವಿಜಯ ಕುಮಾರ್,ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಾಕುಮಾರಿ ಹಾಗೂ ಖಜಾಂಚಿಯಾಗಿ ಬಿ.ಎನ್.ರವಿಕುಮಾರ್ ಅವರನ್ನು ನಿಯೋಜನೆ ಮಾಡಲಾಗಿದೆ.
ಮಳವಳ್ಳಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ. ರಶ್ಮಿ ರಾಮೇಗೌಡ ಅವರನ್ನು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಾಜು ನಾಯಕ ಅವರನ್ನು ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಪಕ್ಷ ಸೇರಿದ ಜ್ಯೋತಿ ಪ್ರಕಾಶ್ ಮಿರ್ಜಿ
ದಶಕದ ಹಿಂದೆಯೇ ನಿವೃತ್ತರಾಗಿರುವ ಐಪಿಎಸ್ ಅಧಿಕಾರಿ ಜೆಡಿಎಸ್ ಸೇರ್ಪಡೆಯಾದರು. ಈ ಹಿಂದೆ ಅವರು ಯಡಿಯೂರಪ್ಪ ಅವರೊಂದಿಗೆ ಗುರುತಿಸಿಕೊಂಡಿದ್ದರು.
ಜೆಡಿಎಸ್ ಪಕ್ಷ ಸೇರಿದ ವಿಶ್ರಾಂತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಮತ್ತಿತರೆ ನಾಯಕರು ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.
ವಿಭಾಗ