logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Assembly: ಪುಲ್ವಾಮ ದಾಳಿ ಪ್ರಕರಣ, ವಿಧಾನಸಭೆಯಲ್ಲಿ ಕಾಂಗ್ರೆಸ್‌ ಬಿಜೆಪಿ ಸಚಿವ ಶಾಸಕರ ಜಟಾಪಟಿ

Karnataka Assembly: ಪುಲ್ವಾಮ ದಾಳಿ ಪ್ರಕರಣ, ವಿಧಾನಸಭೆಯಲ್ಲಿ ಕಾಂಗ್ರೆಸ್‌ ಬಿಜೆಪಿ ಸಚಿವ ಶಾಸಕರ ಜಟಾಪಟಿ

Umesha Bhatta P H HT Kannada

Feb 28, 2024 02:49 PM IST

ಕರ್ನಾಟಕ ವಿಧಾನಸಭೆಯಲ್ಲಿ ಶಾಸಕ ಸುನೀಲ್‌ ಕುಮಾರ್‌, ಸಚಿವ ಕೃಷ್ಣಬೈರೇಗೌಡ ಮಾತಿನ ಜಟಾಪಟಿ.

    • ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ದಿನವಿಡೀ ಗದ್ದಲದ ಸನ್ನಿವೇಶ. ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ವಿಚಾರವಾಗಿ ಬಿಜೆಪಿ ಆಕ್ರೋಶ ಹೊರ ಹಾಕಿದರೆ, ಬಿಜೆಪಿ ವಿರುದ್ದ ಕಾಂಗ್ರೆಸ್‌ ಪುಲ್ವಾಮ ದಾಳಿಯನ್ನು ಪ್ರಯೋಗಿಸಿತು.
ಕರ್ನಾಟಕ ವಿಧಾನಸಭೆಯಲ್ಲಿ ಶಾಸಕ ಸುನೀಲ್‌ ಕುಮಾರ್‌, ಸಚಿವ ಕೃಷ್ಣಬೈರೇಗೌಡ ಮಾತಿನ ಜಟಾಪಟಿ.
ಕರ್ನಾಟಕ ವಿಧಾನಸಭೆಯಲ್ಲಿ ಶಾಸಕ ಸುನೀಲ್‌ ಕುಮಾರ್‌, ಸಚಿವ ಕೃಷ್ಣಬೈರೇಗೌಡ ಮಾತಿನ ಜಟಾಪಟಿ.

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಪುಲ್ವಾಮ ದಾಳಿ ಪ್ರಕರಣದ ಜಟಾಪಟಿ. ಅದರಲ್ಲೂ ರಾಜ್ಯಸಭೆ ಚುನಾವಣೆ ವೇಳೆ ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದರು ಎನ್ನುವ ಬಿಜೆಪಿ ಆರೋಪವು ಪುಲ್ವಾಮ ದಾಳಿ ವಿಚಾರಕ್ಕೆ ತಿರುಗಿತು.ಬಿಜೆಪಿಯ ಹೇಳಿಕೆಗೆ ಕಾಂಗ್ರೆಸ್‌ ಸಚಿವರ ತಿರುಗೇಟು, ಇದರಿಂದ ಗದ್ದಲ, ಆರೋಪ ಪ್ರತಿರೋಪಗಳ ಸುರಿಮಳೆ ಜೋರಾಗಿಯೆ ಇತ್ತು. ಇದರಿಂದ ಕೆಲ ಹೊತ್ತು ಬಿಜೆಪಿ ಹಾಗೂ ಕಾಂಗ್ರೆಸ್‌ ಸದಸ್ಯರ ನಡುವೆ ಮಾತಿನ ಗದ್ದಲ ಏರ್ಪಟ್ಟು ಸದನ ಅಯೋಮವಾಗಿತ್ತು.

ಟ್ರೆಂಡಿಂಗ್​ ಸುದ್ದಿ

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಮಾತನಾಡುತ್ತಾ ಕಾಂಗ್ರೆಸ್‌ ವಿರುದ್ಧ ಕಿಡಿಕಾರುವ ಭರದಲ್ಲಿ,ಕೇಂದ್ರ ಸರ್ಕಾರ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಯಾವ ಪಕ್ಷ? ದೇಶ ಒಡೆದದ್ದು ಯಾರು? ಎಂದು ಕಾಂಗ್ರೆಸ್‌ ನವರನ್ನು ಪ್ರಶ್ನಿಸಿದರು.

ಈ ವೇಳೆ ಶಾಸಕರ ಭಾಷಣದ ನಡುವೆ ಮಧ್ಯ ಪ್ರವೇಶಿಸಿ ಏರು ದನಿಯಲ್ಲೇ ಪುಲ್ವಾಮಾ ಹತ್ಯಾಕಾಂಡ ಘಟನೆಯನ್ನು ಉಲ್ಲೇಖಿಸಿ ಬಿಜೆಪಿಗರ ವಿರುದ್ಧ ಕಿಡಿಕಾರಿದ ಸಚಿವ ಕೃಷ್ಣ ಬೈರೇಗೌಡ ಅವರು,ನಮ್ಮ ದೇಶದ 40 ಜನ ಸೈನಿಕರ ಸಾವಿಗೆ ಕಾರಣ ಯಾರು ಎಂಬುದನ್ನು ಜನರ ಮುಂದೆ ಹೇಳಲಾಗದ, ಪ್ರಕರಣದ ತನಿಖೆ ನಡೆಸುವ ಯೋಗ್ಯತೆಯೂ ಇಲ್ಲದ ಅಯೋಗ್ಯರು ಬಿಜೆಪಿಗರು. ಇವರಿಗೆ ದೇಶಕ್ಕೆ ಬೆಂಕಿ ಇಟ್ಟು ಓಟು ಹಾಕಿಸಿಕೊಳ್ಳುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ? ಎಂದು ಆಕ್ರೋಶ ಹೊರಹಾಕಿದರು.

ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದರು.

ಬಿಜೆಪಿಗರು ಸದನದಲ್ಲಿ ವಾಸ್ತವಕ್ಕೆ ಹತ್ತಿರವಾದ ವಿಚಾರದ ಬಗ್ಗೆ ಮಾತನಾಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಬರೀ ಸುಳ್ಳು ಮತ್ತು ಕಟ್ಟುಕಥೆಗಳಿಂದ ಕೂಡಿದ ಅವರ ಮಾತಿಗೆ ಸದನದಲ್ಲಿ ಅವಕಾಶ ನೀಡಬೇಡಿ. ಬಿಜೆಪಿ ನಾಯಕರು ಸದನದ ಒಳಗೆ ಮತ್ತು ಹೊರಗೆ ಬೆಂಕಿ ಹಚ್ಚುವ ಕೆಲಸದಲ್ಲಿ ನಿಷ್ಣಾತರು. ಅದರಲ್ಲೂ, ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಪ್ರಚೋದನಾತ್ಮಕ ಮಾತುಗಳನ್ನಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ನಾವು ತಾಳ್ಮೆಯಿಂದ ಇದ್ದೇವೆ ಎಂಬ ಕಾರಣಕ್ಕೆ ಅವರು ದುರ್ಲಾಬ ಪಡೆದುಕೊಂಡು ವಾಸ್ತವ ಬಿಟ್ಟು ಪ್ರಚೋದನೆಯ ಮಾತುಗಳನ್ನಾಡುತ್ತಿದ್ದಾರೆ. ನಮ್ಮ ತಾಳ್ಮೆ ಪರೀಕ್ಷೆ ಮಾಡುವುದೇ ಅವರ ಉದ್ದೇಶವಾಗಿದೆ. ದೇಶದ ಬಿಭಜನೆಗೆ ಯಾರು ಕಾರಣ? ಎಂಬ ಬಗ್ಗೆ ಚರ್ಚಿಸಲು ನಾವು ಸಿದ್ದರಿದ್ದೇವೆ. ಆದರೆ, ಇಂದು ಅವರು ಅಸಲಿ ವಿಚಾರದ ಬಗ್ಗೆ ಮಾತನಾಡಲಿ. ವಿಷಯಾಂತರ ಬೇಡ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

ಕೃಷ್ಣಬೈರೇಗೌಡ ಅವರ ಮಾತಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ದನಿಗೂಡಿಸಿದರು.

ಬಿಜೆಪಿಯನ್ನು ಅಯೋಗ್ಯ ಎಂದಿದ್ದಕ್ಕೆ ಕೆರಳಿದ ಶಾಸಕ ವಿ. ಸುನೀಲ್‌ ಕುಮಾರ್‌ ಅವರು ಉಡುಪಿಯ ಪ್ರಕರಣವನ್ನು ಉಲ್ಲೇಖಿಸಿ ಕಾಂಗ್ರೆಸ್‌ ನಿಲುವನ್ನು ಕುಟುಕಿದರು. ಈ ವೇಳೆ ಕಾಂಗ್ರೆಸ್‌ ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ಜೋರಾಗಿ ಸಭಾಧ್ಯಕ್ಷರು ಸುಮ್ಮನಾಗಿಸಬೇಕಾಯಿತು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ