ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಬಜೆಟ್‌ 2024: ನಿಮ್ಮ ಜಿಲ್ಲೆಗೆ ಸಿದ್ದರಾಮಯ್ಯ ಏನೇನು ಕೊಟ್ಟಿದ್ದಾರೆ, ಇಲ್ಲಿದೆ ವಿವರ

ಕರ್ನಾಟಕ ಬಜೆಟ್‌ 2024: ನಿಮ್ಮ ಜಿಲ್ಲೆಗೆ ಸಿದ್ದರಾಮಯ್ಯ ಏನೇನು ಕೊಟ್ಟಿದ್ದಾರೆ, ಇಲ್ಲಿದೆ ವಿವರ

Umesha Bhatta P H HT Kannada

Feb 16, 2024 01:54 PM IST

ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್‌ 2024ನಲ್ಲಿ ಜಿಲ್ಲೆಗಳಿಗೆ ಕೊಟ್ಟಿರುವ ಕಾರ್ಯಕ್ರಮ ಅಧಿಕ

    • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಹಲವು ಜಿಲ್ಲೆಗಳಿಗೆ ಕಾರ್ಯಕ್ರಮವನ್ನುಕರ್ನಾಟಕ ಬಜೆಟ್‌ 2024 ಮೂಲಕ ನೀಡಿದ್ದಾರೆ. 
ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್‌ 2024ನಲ್ಲಿ ಜಿಲ್ಲೆಗಳಿಗೆ ಕೊಟ್ಟಿರುವ ಕಾರ್ಯಕ್ರಮ ಅಧಿಕ
ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್‌ 2024ನಲ್ಲಿ ಜಿಲ್ಲೆಗಳಿಗೆ ಕೊಟ್ಟಿರುವ ಕಾರ್ಯಕ್ರಮ ಅಧಿಕ

ಬೆಂಗಳೂರು: ಯಾವುದೇ ಬಜೆಟ್‌ನಲ್ಲಿ ನಮ್ಮೂರಿಗೆ ಏನು ಸಿಕ್ಕಿತು ಎಂದು ಆಯಾ ಜಿಲ್ಲೆಯವರು ವೀಕ್ಷಿಸುವುದು ಸಹಜ. ಈ ಬಾರಿಯ ಕರ್ನಾಟಕ ಬಜೆಟ್‌ 2024ರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಬೆಂಗಳೂರು, ಮೈಸೂರು ಮಾತ್ರವಲ್ಲದೇ ಬೀದರ್‌, ಕೊಡಗು, ಬಳ್ಳಾರಿ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಕೆರೆಗಳ ಅಭಿವೃದ್ದಿಗೆ ಬಿಬಿಎಂಪಿಯಿಂದ ಹೊಸ ನೀತಿ; ಖಾಸಗಿ ಸಂಸ್ಥೆಗಳಿಗೆ ಅವಕಾಶ; ಹೈಕೋರ್ಟ್ ಅನುಮತಿ ನಿರೀಕ್ಷೆಯಲ್ಲಿ ಪಾಲಿಕೆ

Bengaluru News: ಬೆಂಗಳೂರಿನ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇಮೇಲ್; ಪರಿಶೀಲನೆ ಬಳಿಕ ಹುಸಿ ಬಾಂಬ್ ಎಂದ ಪೊಲೀಸರು

ಕರ್ನಾಟಕ ಹವಾಮಾನ ಮೇ 13: ಬೆಂಗಳೂರಿನಲ್ಲಿ ರಾತ್ರಿ ಗುಡುಗು ಮಿಂಚು ಸಹಿತ ಭಾರಿ ಮಳೆ; ಕರಾವಳಿ ಸೇರಿ ಈ ಜಿಲ್ಲೆಗಳಿಗೆ ಇಂದು ವರುಣನ ಕೃಪೆ ಸಾಧ್ಯತೆ

Chikkamagaluru News: ಆಹಾರ ಅರಸಿ ಬಂದ ಭಾರೀ ಗಾತ್ರದ ಸಲಗ ಚಿಕ್ಕಮಗಳೂರು ಬಳಿ ವಿದ್ಯುತ್‌ ಶಾಕ್‌ ಗೆ ಬಲಿ

ಯಾವ ಜಿಲ್ಲೆಗೆ ಏನು ಕಾರ್ಯಕ್ರಮ ಸಿಕ್ಕಿದೆ.

  1. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್‌, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ಅಭಿವೃದ್ದಿಗೆ ಒತ್ತು.
  2. ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿ.
  3. ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
  4. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪನೆ.
  5. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ
  6. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ 10 ಕೋಟಿ ರೂ. ಮೀಸಲು
  7. ಬೀದರ್ ನಾನಕ್ ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ದಿಗೆ 1ಕೋಟಿ ರೂ., ಔರಾದ್ ನೀರಾವರಿ ಯೋಜನೆ, ಬೀದರ್- ಬೆಂಗಳೂರು ನಡುವಿನ ಆರ್ಥಿಕ ಕಾರಿಡಾರ್ ರಚನೆ.
  8. ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ.
  9. ಮಂಡ್ಯದ ಮೈಶುಗರ್‌ ಕಾರ್ಖಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ
  10. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಪ್ರಾರಂಭ
  11. ಬಳ್ಳಾರಿ ಜಿಲ್ಲೆಯಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ, ಜಿಟಿಟಿಸಿ ಬಹು ಕೌಶಲ್ಯಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತುಮೈಸೂರಿನ ವರುಣಾದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ
  12. ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 ಎಂಟಿಪಿಎ ಸಾಮರ್ಥ್ಯದ ಮತ್ತು ೪,೨೦೦ ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರು ನಿರ್ಮಾಣ
  13. ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲು ಹಾಗೂ ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂ.
  14. ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ.
  15. ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಾಣ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ