logo
ಕನ್ನಡ ಸುದ್ದಿ  /  ಕರ್ನಾಟಕ  /  Ram Mandir: ರಾಮಮಂದಿರ ಉದ್ಘಾಟನೆ, ಕರ್ನಾಟಕದಲ್ಲಿ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ದರಾಮಯ್ಯ

Ram mandir: ರಾಮಮಂದಿರ ಉದ್ಘಾಟನೆ, ಕರ್ನಾಟಕದಲ್ಲಿ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ದರಾಮಯ್ಯ

Umesha Bhatta P H HT Kannada

Jan 21, 2024 08:23 PM IST

google News

ರಾಮಮಂದಿರ ಉದ್ಘಾಟನೆ ದಿನ ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    • No holiday in Karnataka ರಾಮಮಂದಿರ ಉದ್ಘಾಟನೆ ದಿನ ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದಿಲ್ಲ. ಎಂದಿನಂತೆ ಕಚೇರಿ ಇರಲಿವೆ. ದೇಗುಲಗಳಲ್ಲಿ ವಿಶೇಷ ಪೂಜೆ ಇರಲಿದೆ.
ರಾಮಮಂದಿರ ಉದ್ಘಾಟನೆ ದಿನ ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮಮಂದಿರ ಉದ್ಘಾಟನೆ ದಿನ ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತುಮಕೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22 ರ ಸೋಮವಾರ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದ್ದರೆ, ಹಲವು ರಾಜ್ಯಗಳೂ ಸೋಮವಾರದಂದು ರಜೆ ಘೋಷಿಸಿವೆ. ಕರ್ನಾಟಕದಲ್ಲಿ ರಾಮಮಂದಿರ ಉದ್ಘಾಟನೆಗೆ ರಾಜ್ಯ ಸರ್ಕಾರದ ಕಚೇರಿಗಳಿಗೆ ಸರ್ಕಾರಿ ರಜೆ ಇರುವುದಿಲ್ಲ. ಅಂದು ಯಥಾರೀತಿಯಾಗಿ ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಕಾರ್ಯನಿರ್ವಹಿಸಲಿವೆ. ಈಗಾಗಲೇ ಕರ್ನಾಟಕದ ಮುಜರಾಯಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಘೋಷಿಸಿದಂತೆ ಎಲ್ಲಾ ದೇವಸ್ಥಾಗಳಲ್ಲಿ ಪೂಜೆ, ಪ್ರಸಾದ ವಿತರಣೆಗಳು ಇರಲಿವೆ. ಅದಕ್ಕೆ ಅಡ್ಡಿ. ಆತಂಕಗಳು ಇಲ್ಲ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಜನವರಿ 22 ರಂದು ರಜೆ ಘೋಷಿಸುವ ವಿಚಾರದಲ್ಲಿ ಸ್ಪಷ್ಟನೆ ನೀಡಿದರು.

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ.ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾಗುತ್ತಿದ್ದು ಮುಜರಾಯಿ ಇಲಾಖೆ ವತಿಯಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ದೇವಸ್ಥಾನವನ್ನು ನಾಳೆ ಉದ್ಘಾಟಿಸುತ್ತಿರುವುದಾಗಿ ಎಂದು ಸಿದ್ದರಾಮಯ್ಯ ತಿಳಿಸಿದರು.

ತಮಿಳುನಾಡಿನಲ್ಲಿ ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನೆರಪ್ರಸಾರವನ್ನು ನಿಷೇಧ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡಿನ ಬಗ್ಗೆ ನಾನು ಯಾಕೆ ಮಾತನಾಡಲಿ. ಇಲ್ಲಿ ಹಾಗೆ ಮಾಡುವುದಿಲ್ಲ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ಯಾವಾಗ ಮಾಡಿದರು, ಯಾವ ಸಂದರ್ಭದಲ್ಲಿ ಹಾಗೂ ಯಾಕಾಗಿ ಮಾಡಿದರು ಎಂದು ನನಗೆ ತಿಳಿದಿಲ್ಲ. ವಿಚಾರ ಮಾಡಲಾಗುವುದು ಎಂದರು.

ಕುಣಿಗಲ್ ಸ್ಟಡ್ ಫಾರಂ ಸ್ಥಳಾಂತರ ಕ್ಕೆ ಸಲಹೆ

ಟಿಪ್ಪು ಸುಲ್ತಾನರ ಕಾಲದ ಕುಣಿಗಲ್ ಸ್ಟಡ್ ಫಾರಂನ್ನು ಸರ್ಕಾರ ಮುಚ್ಚುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಬೆಂಗಳೂರಿನ ಹೃದಯ ಭಾಗದಲ್ಲಿ ರೇಸ್ ಕೋರ್ಸ್ ಇದ್ದು, ಅಲ್ಲಿಗೆ ಸ್ಥಳಾಂತರ ಮಾಡಿ ಎಂದು ಸಲಹೆ ನೀಡಿದ್ದೇನೆ ಎಂದು ತಿಳಿಸಿದರು. ಕುಣಿಗಲ್ ನಲ್ಲಿ 400 ಏಕರೆಯಷ್ಟು ಜಮೀನು ಇದ್ದು, ಇಲ್ಲಿ 80 ಏಕರೆ ಯಷ್ಟಿದೆ. ಅಲ್ಲಿ ಸ್ಥಳ ನೀಡುವುದಾಗಿ ಹೇಳಿದ್ದೇನೆ ಎಂದರು.

ನಗರಾಭಿವೃದ್ಧಿ ಸಚಿವರಾಗಿದ್ದ ಭೈರತಿ ಬಸವರಾಜ್ ಅವರು ಈ ಹಿಂದೆ ಅಲ್ಲಿ ಇಂಟಿ ಗ್ರೇಟೆಡ್ ಟೌ ನ್ ಶಿಪ್ ಪ್ರಾರಂಭಿಸುವ ಬಗ್ಗೆ ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕೊಬ್ಬರಿ ಬೆಲೆ

ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ