logo
ಕನ್ನಡ ಸುದ್ದಿ  /  ಕರ್ನಾಟಕ  /  Police Recruitment: ಕರ್ನಾಟಕ ಪೊಲೀಸ್‌ ಇಲಾಖೆ ಖಾಲಿ ಹುದ್ದೆಗಳಿಗೆ ಶೀಘ್ರ ನೇಮಕ: ಸಿಎಂ ಸಿದ್ದರಾಮಯ್ಯ ಘೋಷಣೆ

police recruitment: ಕರ್ನಾಟಕ ಪೊಲೀಸ್‌ ಇಲಾಖೆ ಖಾಲಿ ಹುದ್ದೆಗಳಿಗೆ ಶೀಘ್ರ ನೇಮಕ: ಸಿಎಂ ಸಿದ್ದರಾಮಯ್ಯ ಘೋಷಣೆ

Umesha Bhatta P H HT Kannada

Jan 16, 2024 02:19 PM IST

google News

ಬೆಂಗಳೂರಿನಲ್ಲಿ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ,ಪರಮೇಶ್ವರ್‌ ಪಾಲ್ಗೊಂಡರು.

    • Karnataka police meet ಕರ್ನಾಟಕದಲ್ಲಿ ಪೊಲೀಸರು ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕೆಲವು ಸೂಚನೆಗಳನ್ನು ಹಿರಿಯ ಅಧಿಕಾರಿಗಳಿಗೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ,ಪರಮೇಶ್ವರ್‌ ಪಾಲ್ಗೊಂಡರು.
ಬೆಂಗಳೂರಿನಲ್ಲಿ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ,ಪರಮೇಶ್ವರ್‌ ಪಾಲ್ಗೊಂಡರು.

ಬೆಂಗಳೂರು:ಕರ್ನಾಟಕದ ಪೊಲೀಸ್‌ ಇಲಾಖೆಯನ್ನು ಇನ್ನಷ್ಟು ಬಲಪಡಿಸಿ ನಾಗರೀಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ನೆರವನ್ನು ನೀಡಲಿದೆ. ಇದಲ್ಲದೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡಲಾಗುವುದು. ಇದರಿಂದ ಇಲಾಖೆಯಲ್ಲಿರುವವರ ಮೇಲೆ ಒತ್ತಡ ತಗ್ಗಿ ದಕ್ಷತೆಯಿಂದ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ಆರಂಭವಾದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು.

ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು ಎಂದು ತಿಳಿಸಿದರು.

ಸಿದ್ದರಾಮಯ್ಯ ನೀಡಿದ ಹತ್ತು ಸೂಚನೆಗಳು

  1. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು
  2. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ
  3. ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು
  4. ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೊಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ.
  5. ಇದೇ ಸ್ಥಿತಿ ಮುಂದುವರೆದರೆ ಎಸ್ಪಿ ಹಾಗೂ ಡಿಸಿಪಿಗಳನ್ನೇ ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು
  6. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು ಜಿಡಿಪಿ ಹೆಚ್ಚಾಗುತ್ತದೆ. ಹೂಡಿಕೆದಾರರು ಬರುತ್ತಾರೆ. ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿ .
  7. ಅಧಿಕಾರಿಗಳು ಪ್ರಸ್ತುತ ಪಡಿಸಿದ ಅಂಕಿ ಅಂಶ ತೃಪ್ತಿಕರವಾಗಿಲ್ಲ.
  8. ಮುಂದಿನ ವರ್ಷದ ವೇಳೆಗೆ ಕಾರ್ಯಕ್ಷಮತೆ ಉತ್ತಮವಾಗಿರಲಿ
  9. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ.
  10. ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ

ಇದನ್ನೂ ಓದಿರಿ: 100 ಟೆಸ್ಟ್ ಪಂದ್ಯಗಳನ್ನು ಆಡುವುದೇ ನನ್ನ ದೊಡ್ಡ ಗುರಿ: ಅಜಿಂಕ್ಯ ರಹಾನೆ

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ