logo
ಕನ್ನಡ ಸುದ್ದಿ  /  ಕರ್ನಾಟಕ  /  Breaking News: ಕರ್ನಾಟಕದಲ್ಲಿ ಪಿಎಸ್‌ಐ ಪರೀಕ್ಷೆ ಮುಂದೂಡಿಕೆ ಇಲ್ಲ, ಸೆಪ್ಟಂಬರ್‌ 28ಕ್ಕೆ ನಿಗದಿ

Breaking News: ಕರ್ನಾಟಕದಲ್ಲಿ ಪಿಎಸ್‌ಐ ಪರೀಕ್ಷೆ ಮುಂದೂಡಿಕೆ ಇಲ್ಲ, ಸೆಪ್ಟಂಬರ್‌ 28ಕ್ಕೆ ನಿಗದಿ

Umesha Bhatta P H HT Kannada

Sep 12, 2024 12:44 PM IST

google News

ಕರ್ನಾಟಕದಲ್ಲಿ ಪಿಎಸ್‌ಐ ಪರೀಕ್ಷೆಗಳು ಸೆಪ್ಟಂಬರ್‌ 28 ರಂದು ನಡೆಯಲಿವೆ.

    • Karnataka PSI Exam ಕರ್ನಾಟಕದಲ್ಲಿ ಪಿಎಸ್‌ಐ ಪರೀಕ್ಷೆ ವಿಚಾರವಾಗಿ ಇದ್ದ ಗೊಂದಲ ಬಗೆಹರಿದಿದ್ದು ಈ ತಿಂಗಳ 28ರಂದೇ ಪರೀಕ್ಷೆ ನಿಗದಿಯಾಗಿದೆ. ಇದನ್ನು ಗೃಹ ಸಚಿವ ಡಾ.ಪರಮೇಶ್ವರ್‌ ಅವರೇ ಖುದ್ದು ಘೋಷಣೆ ಮಾಡಿದ್ದಾರೆ. 
ಕರ್ನಾಟಕದಲ್ಲಿ ಪಿಎಸ್‌ಐ ಪರೀಕ್ಷೆಗಳು ಸೆಪ್ಟಂಬರ್‌ 28 ರಂದು ನಡೆಯಲಿವೆ.
ಕರ್ನಾಟಕದಲ್ಲಿ ಪಿಎಸ್‌ಐ ಪರೀಕ್ಷೆಗಳು ಸೆಪ್ಟಂಬರ್‌ 28 ರಂದು ನಡೆಯಲಿವೆ.

ಬೆಂಗಳೂರು: ಕರ್ನಾಟಕದಲ್ಲಿ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಪರೀಕ್ಷೆ ಮುಂದಕ್ಕೆ ಹೋಗುವುದಿಲ್ಲ. ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.28 ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ. ಇತರೆ ಪರೀಕ್ಷೆಗಳು ಇರುವ ಕಾರಣದಿಂದ ಪಿಎಸ್‌ಐ ಪರೀಕ್ಷೆ ಮುಂದೆ ಹಾಕುವ ಕುರಿತು ಚರ್ಚೆಗಳು ನಡೆದಿದ್ದವು. ಈ ಹಿಂದೆ ಎರಡು ಬಾರಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರೇ ಪರೀಕ್ಷೆ ಮುಂದೆ ಹಾಕುವ ಕುರಿತು ಪರಿಶೀಲನೆ ನಡೆಸುವುದಾಗಿ ಹೇಳಿದ್ದರು. ಅಲ್ಲದೇ ಅಭ್ಯರ್ಥಿಗಳು ಇತರೆ ಪರೀಕ್ಷೆಗಳು ಇರುವ ಕಾರಣದಿಂದ ಪಿಎಸ್‌ಐ ಪರೀಕ್ಷೆ ಮುಂದೆ ಹಾಕುವಂತೆ ಮನವಿ ಮಾಡಿದ್ದರು. ಆದರೆ ಅಧಿಕೃತವಾಗಿ ಪರೀಕ್ಷೆ ನಡೆಯುವ ದಿನಾಂಕವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಗುರುವಾರ ಪ್ರಕಟಿಸಿ ಗೊಂದಲಗಳಿಗೆ ತೆರೆ ಎಳೆದರು.

ಕರ್ನಾಟಕ ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು.

ಬಿಜೆಪಿಯ ನಿಯೋಗವು ಮನವಿ ನೀಡಿತ್ತು. ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು.

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದೆ. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರಮೇಶ್ವರ್‌ ಹೇಳಿದರು.

ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ