logo
ಕನ್ನಡ ಸುದ್ದಿ  /  ಕರ್ನಾಟಕ  /  ಸರ್ಕಾರದ ಪ್ರಕಟಣೆ: ಅಲೆಮಾರಿ, ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಸಿಗಲಿದೆ ವಿವಿಧ ಸಾಲ ಸೌಲಭ್ಯ, ಅರ್ಜಿ ಸಲ್ಲಿಕೆಗೆ ಆಗಸ್ಟ್‌ 31 ಕಡೆ ದಿನ

ಸರ್ಕಾರದ ಪ್ರಕಟಣೆ: ಅಲೆಮಾರಿ, ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಸಿಗಲಿದೆ ವಿವಿಧ ಸಾಲ ಸೌಲಭ್ಯ, ಅರ್ಜಿ ಸಲ್ಲಿಕೆಗೆ ಆಗಸ್ಟ್‌ 31 ಕಡೆ ದಿನ

Umesha Bhatta P H HT Kannada

Aug 14, 2024 07:58 AM IST

google News

ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಸವಿತಾ ಸಮಾಜ ಅಭಿವೃದ್ಧಿ ನಿಗಮವು ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ.

    • ಕರ್ನಾಟಕದ ವಿವಿಧ ನಿಗಮಗಳಿಂದ ಸಾಲಸೌಲಭ್ಯವೂ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಸವಿತಾ ಸಮಾಜ ಅಭಿವೃದ್ಧಿ ನಿಗಮವು ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ.
ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಸವಿತಾ ಸಮಾಜ ಅಭಿವೃದ್ಧಿ ನಿಗಮವು ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು: 2024-25 ನೇ ಸಾಲಿಗೆ ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಈ ಯೋಜನೆಗಳಿಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶವರಿಗೆ ರೂ.98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಈ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಿಗಮದ ವೆಬ್‍ಸೈಟ್ www.kaad.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‍ಸೈಟ್‍ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು.

ಆನ್‍ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಆಯಾ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರು ಸಂಪರ್ಕಿಸಲು ಕೋರಲಾಗಿದೆ.

ಸವಿತಾ ಸಮಾಜ ನಿಗಮ

2024-25ನೇ ಸಾಲಿಗೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ರೂ.1.20 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಿಗಮದ ವೆಬ್‍ಸೈಟ್ www.kssd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‍ಸೈಟ್‍ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು.

ಆನ್‍ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು ತಿಳಿಸಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ