logo
ಕನ್ನಡ ಸುದ್ದಿ  /  ಕರ್ನಾಟಕ  /  Ips Transfer: ಕರ್ನಾಟಕದ 4 ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗ: ನಿಂಬಾಳ್ಕರ್‌ಗೆ ಗುಪ್ತ ಇಲಾಖೆ ಜವಾವ್ದಾರಿ

IPS Transfer: ಕರ್ನಾಟಕದ 4 ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗ: ನಿಂಬಾಳ್ಕರ್‌ಗೆ ಗುಪ್ತ ಇಲಾಖೆ ಜವಾವ್ದಾರಿ

Umesha Bhatta P H HT Kannada

Sep 13, 2024 07:02 PM IST

google News

ಕರ್ನಾಟಕದಲ್ಲಿ ಹೇಮಂತ್‌ ನಿಂಬಾಳ್ಕರ್‌, ಅಲೋಕ್‌ಕುಮಾರ್‌, ಶರತ್‌ಚಂದ್ರ ಸಹಿತ ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗ ಮಾಡಲಾಗಿದೆ.

    • IPS Transfer ಕರ್ನಾಟಕದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿಗಳನ್ನು ವರ್ಗ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ ಹೇಮಂತ್‌ ನಿಂಬಾಳ್ಕರ್‌ ನಿಯೋಜನೆಗೊಂಡಿದ್ದಾರೆ.
ಕರ್ನಾಟಕದಲ್ಲಿ ಹೇಮಂತ್‌ ನಿಂಬಾಳ್ಕರ್‌, ಅಲೋಕ್‌ಕುಮಾರ್‌, ಶರತ್‌ಚಂದ್ರ ಸಹಿತ ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗ ಮಾಡಲಾಗಿದೆ.
ಕರ್ನಾಟಕದಲ್ಲಿ ಹೇಮಂತ್‌ ನಿಂಬಾಳ್ಕರ್‌, ಅಲೋಕ್‌ಕುಮಾರ್‌, ಶರತ್‌ಚಂದ್ರ ಸಹಿತ ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ. ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹುದ್ದೆಯ ನಾಲ್ವರು ಅಧಿಕಾರಿಗಳನ್ನು ವರ್ಗ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿರುವ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್‌ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಜತೆಗೆ ವಾರ್ತಾ ಇಲಾಖೆಯ ಆಯುಕ್ತರ ಜವಾಬ್ದಾರಿಯನ್ನೂ ಹೆಚ್ಚುವರಿಯಾಗಿ ನೀಡಲಾಗಿದೆ.

ಒಂದು ವರ್ಷದಿಂದ ಕರ್ನಾಟಕ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಕೆ.ವಿ.ಶರತ್‌ ಚಂದ್ರ ಅವರನ್ನು ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಸಂಚಾರ ಹಾಗೂ ರಸ್ತೆ ಸುರಕ್ಷತಾ ಮುಖ್ಯಸ್ಥರ ಹುದ್ದೆಯನ್ನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಹೇಮಂತ್‌ ನಿಂಬಾಳ್ಕರ್‌ ಅವರು ಮಾಜಿ ಶಾಸಕಿ, ಕಾಂಗ್ರೆಸ್‌ ನಾಯಕಿ ಡಾ.ಅಂಜಲಿ ನಿಂಬಾಳ್ಕರ್‌ ಪತಿ. ಈ ಕಾರಣದಿಂದಲೇ ಲೋಕಸಭೆ ಚುನಾವಣೆ ವೇಳೆ ಅವರನ್ನು ವರ್ಗ ಮಾಡಲಾಗಿತ್ತು. ಲೋಕಸಭೆ ಚುನಾವಣೆ ಬಳಿಕ ಮತ್ತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಬಂದಿದ್ದರು.

ನಿವೇಶನ ಹಂಚಿಕೆ ಹಾಗೂ ವಾಲ್ಮೀಕಿ ನಿಗಮದ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಬಲ ರಾಜಕೀಯ ಚಟುವಟಿಕೆಗಳೇ ನಡೆದಿವೆ. ಅದರಲ್ಲೂ ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ಈಗ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಸಹಿತ ಹಲವಾರು ಚಟುವಟಿಕೆಗಳು ಸದ್ದಿಲ್ಲದೇ ನಡೆದಿವೆ. ಈ ಕಾರಣದಿಂದಲೇ ನಿಂಬಾಳ್ಕರ್‌ ಅವರನ್ನು ಗುಪ್ತ ಚರ ವಿಭಾಗಕ್ಕೆ ಸಿಎಂ ಸಿದ್ದರಾಮಯ್ಯ ನೇಮಿಸಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ಕುಮಾರ್‌ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ. ಮೂರು ತಿಂಗಳ ಹಿಂದೆಯಷ್ಟೇ ಅಲೋಕ್‌ ಕುಮಾರ್‌ ಅವರನ್ನು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹುದ್ದೆಯಿಂದ ವರ್ಗ ಮಾಡಲಾಗಿತ್ತು. ಸಂಚಾರ ಹಾಗೂ ಸುರಕ್ಷತೆ ಹುದ್ದೆಯಲ್ಲಿ ಈ ಹಿಂದೆಯೂ ಅವರು ಕೆಲಸ ಮಾಡಿದ್ದರು. ಎರಡನೇ ಬಾರಿ ಈ ಹುದ್ದೆಯಿಂದ ಅವರನ್ನು ಬದಲು ಮಾಡಲಾಗಿದೆ.

ಅದೇ ರೀತಿ ಪೊಲೀಸ್‌‍ ನೇಮಕಾತಿ ವಿಭಾಗದಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹುದ್ದೆಯಿಂದ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನೂ ಕೂಡ ಬಿಡುಗಡೆ ಮಾಡಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ