logo
ಕನ್ನಡ ಸುದ್ದಿ  /  ಕರ್ನಾಟಕ  /  Farmers Bangalore Session: ಡಿಸೆಂಬರ್ 23ರ ವಿಶ್ವ ರೈತ ದಿನದಂದು ಬೆಂಗಳೂರಿನಲ್ಲಿ ರೈತರ ಮಹಾ ಅಧಿವೇಶನ: ರೈತರ ಬೇಡಿಕೆಗಳ ಪಟ್ಟಿ ಹೀಗಿದೆ

Farmers bangalore Session: ಡಿಸೆಂಬರ್ 23ರ ವಿಶ್ವ ರೈತ ದಿನದಂದು ಬೆಂಗಳೂರಿನಲ್ಲಿ ರೈತರ ಮಹಾ ಅಧಿವೇಶನ: ರೈತರ ಬೇಡಿಕೆಗಳ ಪಟ್ಟಿ ಹೀಗಿದೆ

HT Kannada Desk HT Kannada

Dec 04, 2023 07:00 AM IST

google News

ಮೈಸೂರಿನಲ್ಲಿ ಕುರಬೂರು ಶಾಂತಕುಮಾರ್‌ ರೈತರ ಸಭೆಯಲ್ಲಿ ಮಾತನಾಡಿದರು.

    • Farmers Demand ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್‌ 23ರಂದು ರೈತರ ದಿನ( Farmers day) ಅಂಗವಾಗಿ ಬೆಂಗಳೂರಿನಲ್ಲಿ ಮಹಾ ಅಧಿವೇಶನ ನಡೆಸುವುದಾಗಿ ಹೇಳಿದ್ದಾರೆ.
ಮೈಸೂರಿನಲ್ಲಿ ಕುರಬೂರು ಶಾಂತಕುಮಾರ್‌ ರೈತರ ಸಭೆಯಲ್ಲಿ ಮಾತನಾಡಿದರು.
ಮೈಸೂರಿನಲ್ಲಿ ಕುರಬೂರು ಶಾಂತಕುಮಾರ್‌ ರೈತರ ಸಭೆಯಲ್ಲಿ ಮಾತನಾಡಿದರು.

ಬೆಂಗಳೂರು: ರಾಷ್ಟ್ರೀಯ ರೈತರ ಮಹಾ ಅಧಿವೇಶನ ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡರ ಸಮ್ಮುಖದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಂಭೀರ ಎಚ್ಚರಿಕೆ ನೀಡಲು ನಿರ್ಧರಿಸಲಾಗಿದೆ.

ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ನಡೆದ ರೈತರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ದೇಶದ ನಾನಾ ಭಾಗಗಳಿಂದ ರೈತ ಪ್ರತಿನಿಧಿಗಳು ಅಧಿವೇಶನದಲ್ಲಿ ಭಾಗಿಯಾಗುವರು.

ರೈತರ ಬೇಡಿಕೆ ಪಟ್ಟಿ ಹೀಗಿದೆ.

  1. ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಪ್ರವಾಹ ಹಾನಿ ಮಳೆಹಾನಿ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದಾರೆ ಬೆಳೆ ನಾಶವಾಗಿದೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ, ಕೈಗಾರಿಕೆ ಉದ್ಯಮಿಗಳಿಗೆ ಸಂಕಷ್ಟದ ನೆರವುಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ರೀತಿ ರೈತರ ಸಾಲ ಮನ್ನಾ ಆಗಬೇಕು
  2. ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ, ಕಾನೂನು ಜಾರಿ ಆಗಬೇಕು ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ಕೂಡಲೇ ಜಾರಿ ಮಾಡಬೇಕು
  3. ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ಯಾವುದೇ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ನೆರವಿಗೆ ಬಾರದೆ ರಾಜಕೀಯ ಚೆಲ್ಲಾಟ ಮಾಡುತ್ತಿದ್ದಾರೆ ,2000 ರೂಪಾಯಿ ಬರ ಪರಿಹಾರದ ಭಿಕ್ಷೆ ಬೇಡ ಸಂಪೂರ್ಣ ಬರ ನಷ್ಟ ಎಕರೆಗೆ ಕನಿಷ್ಠ 25,000 ಬಿಡುಗಡೆ ಮಾಡಬೇಕು
  4. ಮೈಸೂರು ಜಿಲ್ಲೆ ಬಣ್ಣಾರಿ ಸಕ್ಕರೆ ಕಾರ್ಖಾನೆ ಕಳೆದ ವರ್ಷ 2953ರೂ ಪಾವತಿ ಮಾಡಿದ್ದೇವೆ ಎಂದು ವರದಿ ನೀಡಿ ಕಬ್ಬು ಬೆಳೆಗಾರ ರೈತರನ್ನು ವಂಚಿಸುತ್ತಿದೆ. ರಾಜ್ಯದ ಬಹುತೇಕ ಸಕ್ಕರೆ ಕಾರ್ಖಾನೆಗಳು ಸ್ವಯಂ ಪ್ರೇರಿತವಾಗಿ ಎಫ್ ಆರ್‌ಪಿ ದರಕ್ಕಿಂತ ಹೆಚ್ಚುವರಿಯಾಗಿ 300 ರೂ ನೀಡುತ್ತಿದ್ದಾರೆ ಸಕ್ಕರೆ ಬೆಲೆ ಗಗನಕ್ಕೆ ಏರುತ್ತಿದೆ ಮೂರು ನಾಲ್ಕು ಸಭೆಗಳಾದರೂ ಕಾರ್ಖಾನೆಯವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
  5. ರಾಜ್ಯ ಸರ್ಕಾರ ಕಬ್ಬು ಬೇಸಾಯ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ ಆರ್ ಇ ಜಿ ಯೋಜನೆಯನ್ನು ಲಿಂಕ್ ಮಾಡಬೇಕು, ಬಾಳೆ ಬೇಸಾಯಕ್ಕೆ ನೀಡಿರುವ ರೀತಿ ಎಲ್ಲಾ ಕೃಷಿ ಬೆಳೆಗಳಿಗೂ ಕಡ್ಡಾಯವಾಗಿ ಬೆಳೆ ವಿಮೆಯನ್ನು ಜಾರಿಗೊಳಿಸಬೇಕು. ಬೆಳೆ ವಿಮೆ ಸರಳೀಕರಣಗೊಳಿಸಬೇಕು ಅತಿವೃಷ್ಟಿ ಬರ ನಷ್ಟ ಪರಿಹಾರ ಬೆಳೆ ವಿಮೆ ವ್ಯಾಪ್ತಿಯಲ್ಲಿ ನಷ್ಟ ಪರಿಹಾರ ನೀಡಬೇಕು. 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5000 ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು
  6. ಕೃಷಿ ಪಂಪ್‌ ಸೆಟ್‌ ಗಳಿಗೆ ನೀಡುವ ಉಚಿತ ವಿದ್ಯುತ್ ತಪ್ಪಿಸಲು ವಿದ್ಯುತ್ ಖಾಸಗೀಕರಣ ನೀತಿಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆ ನಿರಂತರ 10 ಗಂಟೆಗಳ ವಿದ್ಯುತ್ ನೀಡಬೇಕು
  7. ರೈತನ ಮಗನ ಮದುವೆಯಾಗುವ ವಧುವಿಗೆ ಸರ್ಕಾರಿ ಕೆಲಸದಲ್ಲಿ ಶೇಕಡ 10 ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು. ರೈತರ ಮಕ್ಕಳನ್ನು ಅಪಾಯದಿಂದ ಪಾರು ಮಾಡಬೇಕು
  8. ದೆಹಲಿಯಲ್ಲಿ ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರ ಮೇಲೆ ಹಾಕಿರುವ ಪೊಲೀಸ್ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು. ದೇಶದ ರೈತರನ್ನು ಸಂರಕ್ಷಿಸಲು ವಿಶ್ವ ವ್ಯಾಪಾರದ ಒಪ್ಪಂದದಿಂದ ಭಾರತ ಸರ್ಕಾರ ಹೊರ ಬರಬೇಕು

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ