ಕನ್ನಡ ಸುದ್ದಿ  /  ಕರ್ನಾಟಕ  /  Lok Sabha Election 2024: ಕರ್ನಾಟಕದಲ್ಲಿ ಸೀಟು ಹಂಚಿಕೆ ಸೂತ್ರ, ಜೆಡಿಎಸ್‌ಗೆ ಎಷ್ಟು ಸ್ಥಾನ? ಅಮಿತ್‌ ಶಾ ಭೇಟಿ ನಂತರ ಅಂತಿಮ ಸಾಧ್ಯತೆ

Lok Sabha Election 2024: ಕರ್ನಾಟಕದಲ್ಲಿ ಸೀಟು ಹಂಚಿಕೆ ಸೂತ್ರ, ಜೆಡಿಎಸ್‌ಗೆ ಎಷ್ಟು ಸ್ಥಾನ? ಅಮಿತ್‌ ಶಾ ಭೇಟಿ ನಂತರ ಅಂತಿಮ ಸಾಧ್ಯತೆ

Umesha Bhatta P H HT Kannada

Feb 05, 2024 10:36 AM IST

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಬಿಜೆಪಿ ಮೈತ್ರಿ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬರುತ್ತಿದೆ.

    • Karnataka Politics ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಅಂತಿಮವಾಗಿದ್ದು, ಸೀಟು ಹಂಚಿಕೆ ಬಾಕಿಯಿದೆ. ಇದನ್ನು ಅಮಿತ್‌ ಶಾ ಈ ವಾರಾಂತ್ಯದಲ್ಲಿ ಅಂತಿಮಗೊಳಿಸಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. 
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಬಿಜೆಪಿ ಮೈತ್ರಿ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬರುತ್ತಿದೆ.
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಬಿಜೆಪಿ ಮೈತ್ರಿ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬರುತ್ತಿದೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನೇನು ದಿನಗಣನೆ ಶುರುವಾಗಿದೆ. ಇದರ ನಡುವೆ ರಾಜಕೀಯ ಚಟುವಟಿಕೆಗಳೂ ಗರಿಗೆದರಿವೆ. ಕರ್ನಾಟಕದಲ್ಲಿ ಬಿಜೆಪಿ ತನ್ನ ಮಿತ್ರ ಪಕ್ಷ ಜೆಡಿಎಸ್‌ ಜತೆಗೆ ಹೊಂದಾಣಿಕೆಯನ್ನು ಈಗಾಗಲೇ ಘೋಷಿಸಿದ್ದು, ಸೀಟು ಹಂಚಿಕೆ ಮಾತ್ರ ಬಾಕಿ ಇದೆ. ಈ ಕುರಿತು ಎರಡು ತಿಂಗಳಿನಿಂದಲೂ ಚರ್ಚೆಗಳು ನಡೆದಿವೆ. ಜೆಡಿಎಸ್‌ಗೆ ಯಾವ ಕ್ಷೇತ್ರ ಬಿಟ್ಟು ಕೊಡಬೇಕು. ಯಾವ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಬೇಕು ಎನ್ನುವ ಕುರಿತು ಪ್ರಾಥಮಿಕ ಹಂತದ ಮಾತುಕತೆಗಳು ಆಗಿದ್ದರೂ ಇನ್ನೂ ಅಂತಿಮ ತೀರ್ಮಾನಗಳು ಆಗಿಲ್ಲ. ಈ ವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು. ಈ ವೇಳೆ ಸೀಟು ಹಂಚಿಕೆ ಮಾತುಕತೆ ಅಂತಿಮವಾಗಬಹುದು ಎನ್ನಲಾಗುತ್ತಿದೆ.

ಟ್ರೆಂಡಿಂಗ್​ ಸುದ್ದಿ

Bangalore News: ಬೆಂಗಳೂರಿನ ಪ್ರತಿಷ್ಠಿತ ಜೈನ್ ಹೆರಿಟೇಜ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ; ಆತಂಕದ ವಾತಾವರಣ

Mangalore News: ಮಂಗಳೂರು ನಗರಕ್ಕೆ ಬೇಕಿವೆ ತಂಗುದಾಣಗಳು, ಬಸ್‌ಗೆ ಕಾಯುವವರ ಸಂಕಟ ಕೇಳೋರು ಯಾರು

Indian Railways: ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಬೀದರ್‌ನ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ, ಯಾವ ರೈಲು, ಎಲ್ಲಿಯವರೆಗೆ

Bangalore News: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ ವೇಗವಾಗಿ ವಾಹನ ಚಾಲನೆ ಮಾಡಿದರೆ ದಂಡ ಕಟ್ಟ ಬೇಕಾದೀತು, ಹುಷಾರು

ಜೆಡಿಎಸ್‌ ಬೇಡಿಕೆ

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಾಗ ಜೆಡಿಎಸ್‌ಗೆ ಉತ್ತರ ಕರ್ನಾಟಕದ ವಿಜಯಪುರ, ಕರಾವಳಿಯ ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ ಹಾಗೂ ಹಳೆ ಮೈಸೂರು ಭಾಗದಲ್ಲಿ ಮಂಡ್ಯ, ಹಾಸನ, ತುಮಕೂರು ಕ್ಷೇತ್ರ ಸೇರಿ ಆರು ಕ್ಷೇತ್ರ ಬಿಟ್ಟುಕೊಡಲಾಗಿತ್ತು. ಬರೀ ಒಂದು ಕ್ಷೇತ್ರದಲ್ಲಿ ಗೆದ್ದಿದ್ದ ಜೆಡಿಎಸ್‌ ಐದು ಕ್ಷೇತ್ರ ಕಳೆದುಕೊಂಡಿತ್ತು. ಅದರಲ್ಲೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ನಿಖಿಲ್‌ ಕುಮಾರಸ್ವಾಮಿ ಸೋತರೆ, ಪ್ರಜ್ವಲ್‌ ರೇವಣ್ಣ ಮಾತ್ರ ಗೆದ್ದಿದ್ದರು.

ಈ ಬಾರಿ ಜೆಡಿಎಸ್‌ ಮೈತ್ರಿ ಬದಲಾಗಿದೆ. ಬಿಜೆಪಿಯೊಂದಿಗೆ ಜೆಡಿಎಸ್‌ ಕೈ ಜೋಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ ಐದರಿಂದ ಆರು ಸ್ಥಾನಗಳನ್ನಾದರೂ ತಮಗೆ ನೀಡಬೇಕು ಎನ್ನುವುದು ಜೆಡಿಎಸ್‌ ಬೇಡಿಕೆ. ಹಳೆ ಮೈಸೂರು ಭಾಗದಲ್ಲಿ ನಾಲ್ಕರಿಂದ ಐದು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಒಂದು ಕ್ಷೇತ್ರ ಬಿಟ್ಟುಕೊಟ್ಟರೆ ಒಳ್ಳೆಯದು ಎನ್ನುವ ಪ್ರಸ್ತಾವನೆಯನ್ನು ಜೆಡಿಎಸ್‌ ನಾಯಕರು ಈ ಹಿಂದೆಯೇ ಬಿಜೆಪಿ ನಾಯಕರ ಹಿಂದೆ ಇಟ್ಟಿದ್ದರು. ಇದರಲ್ಲಿ ರಾಯಚೂರು ಇಲ್ಲವೇ ವಿಜಯಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಕ್ಷೇತ್ರಗಳು ಬೇಡಿಕೆ ಪಟ್ಟಿಯಲ್ಲಿದ್ದವು. ಅಂತಿಮ ಮಾತುಕತೆ ವೇಳೆ ಕ್ಷೇತ್ರಗಳಲ್ಲಿ ಬದಲಾವಣೆಯೂ ಆಗಬಹುದು.

ಅಂತಿಮವಾಗಿ ಜೆಡಿಎಸ್‌ಗೆ ಹಾಸನ, ಮಂಡ್ಯ, ತುಮಕೂರು ಇಲ್ಲವೇ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಇಲ್ಲವೇ ಕೋಲಾರ ಕ್ಷೇತ್ರ ಬಿಟ್ಟುಕೊಡಬಹುದು ಎನ್ನುವ ಅಭಿಪ್ರಾಯಗಳು ಕೇಳಿ ಬಂದಿವೆ.

ಅಮಿತ್‌ ಶಾ ಭೇಟಿ

ಈ ವಾರಾಂತ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರ್ನಾಟಕದಲ್ಲಿ ಇರಲಿದ್ದಾರೆ. ಸುತ್ತೂರು ಮಠದ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗುವ ಅವರು ಸುತ್ತೂರಿನಲ್ಲಿ ಕಾಂಗ್ರೆಸ್‌ ನಾಯಕ ಡಾ.ಶಾಮನೂರು ಶಿವಶಂಕರಪ್ಪ ಕುಟುಂಬದವರು ನಿರ್ಮಿಸಿರುವ ಅತಿಥಿಗೃಹವನ್ನು ಉದ್ಘಾಟಿಸುವರು. ಇದೇ ವೇಳೆ ಅವರು ಬೆಂಗಳೂರಿನಲ್ಲಿ ಪಕ್ಷದ ನಾಯಕರೊಂದಿಗೆ ಚುನಾವಣೆ ರಣತಂತ್ರ, ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್‌ಗೆ ಬಿಟ್ಟುಕೊಡುವ ಸ್ಥಾನಗಳ ಕುರಿತು ಚರ್ಚಿಸಬಹುದು. ಇದಾದ ಬಳಿಕ ಸ್ಪಷ್ಟ ಚಿತ್ರಣದೊಂದಿಗೆ ಚುನಾವಣೆ ಚಟುವಟಿಕೆಗಳು ಬಿಜೆಪಿ ಜೆಡಿಎಸ್‌ ಮೈತ್ರಿಯೊಂದಿಗೆ ಚುರುಕುಗೊಳ್ಳಬಹುದು ಎಂದು ಪಕ್ಷದ ಮೂಲಗಳು ಹೇಳುತ್ತವೆ.

ಮಂಡ್ಯ ತಿಕ್ಕಾಟ

ಈ ನಡುವೆ ಕಳೆದ ಬಾರಿ ಚುನಾವಣೆಯಲ್ಲೂ ಮಂಡ್ಯ ತೀವ್ರ ಹಣಾಹಣಿ ಕ್ಷೇತ್ರವಾಗಿ ಮಾರ್ಪಟ್ಟಿತ್ತು. ಇಲ್ಲಿ ಸುಮಲತಾ ಅಂಬರೀಷ್‌ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ನಿಖಿಲ್‌ ಕುಮಾರಸ್ವಾಮಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದರು. ಕೊನೆ ಕ್ಷಣದಲ್ಲಿ ಸುಮಲತಾಗೆ ಅನುಕಂಪದ ಜತೆಗೆ ಒಳರಾಜಕೀಯದ ಲಾಭ ದೊರೆತು ಗೆದ್ದು ಬಂದಿದ್ದರು. ಆನಂತರ ಬಿಜೆಪಿಗೆ ಬೆಂಬಲ ಸೂಚಿಸಿ ನಂತರ ಆ ಪಕ್ಷವನ್ನೂ ಸೇರಿದ್ದರು. ಈ ಬಾರಿ ತಾವು ಇಲ್ಲಿಂದಲೇ ಸ್ಪರ್ಧಿಸುವುದಾಗಿ ಅವರು ಪಟ್ಟು ಹಿಡಿದಿದ್ಧಾರೆ. ಆದರೆ ಜೆಡಿಎಸ್‌ ಮಂಡ್ಯ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು ಖುದ್ದು ಎಚ್‌.ಡಿ.ಕುಮಾರಸ್ವಾಮಿ ಅವರೇ ಇಲ್ಲಿಂದ ಕಣಕ್ಕೆ ಇಳಿಯುವುದು ಖಚಿತ ಎನ್ನಲಾಗುತ್ತಿದೆ. ಮತ್ತೊಂದು ಕಡೆ ಬಿಜೆಪಿ ಕೂಡ ಸಭೆ ನಡೆಸಿ ಮಂಡ್ಯ ಕ್ಷೇತ್ರ ತಮಗೆ ಬಿಟ್ಟುಕೊಡುವ ಬೇಡಿಕೆ ಇಟ್ಟಿದೆ. ಇದರಿಂದ ಮಂಡ್ಯದ ಮೈತ್ರಿ ವಿಚಾರ ಯಾವ ಹಂತಕ್ಕೆ ಹೋಗುತ್ತದೆ. ಹೊಸ ರಾಜಕೀಯ ಬೆಳವಣಿಗೆಗಳು ನಡೆದು ಸುಮಲತಾ ಅವರೇ ಕಾಂಗ್ರೆಸ್‌ ಸೇರಿ ಆ ಪಕ್ಷದ ಅಭ್ಯರ್ಥಿಯಾಗುತ್ತಾರಾ ಎನ್ನುವ ಕುತೂಹಲವೂ ಇದೆ.

ಡಾ.ಮಂಜುನಾಥ್‌ ಹೆಸರು

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎಚ್‌.ಡಿ.ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆಯ ಮಾಜಿ ಮುಖ್ಯಸ್ಥ ಡಾ. ಸಿ.ಎನ್‌.ಮಂಜುನಾಥ್‌ ಅವರ ಹೆಸರು ಕೇಳಿ ಬರುತ್ತಿದೆ.ಅವರನ್ನು ಮೈತ್ರಿ ಅಭ್ಯರ್ಥಿಯಾಗಿಸಿದರೆ ಮೂರು ಬಾರಿ ಇಲ್ಲಿ ಗೆದ್ದಿರುವ ಡಿ.ಕೆ.ಸುರೇಶ್‌ ಅವರನ್ನು ಪ್ರಬಲವಾಗಿ ಎದುರಿಸಬಹುದು ಎನ್ನುವ ಲೆಕ್ಕಾಚಾರಗಳಿವೆ. ಅವರು ಇಲ್ಲಿಂದ ಗೆದ್ದು ಮುಂದೆ ಸರ್ಕಾರವೇನಾದರೂ ಬಂದರೆ ಕೇಂದ್ರದಲ್ಲಿ ಆರೋಗ್ಯ ಸಚಿವರನ್ನಾಗಿ ನಿಯೋಜಿಸಬಹುದು ಎನ್ನುವ ದೂರಗಾಮಿ ಯೋಚನೆಗಳೂ ಇವೆ ಎನ್ನಲಾಗುತ್ತಿದೆ. ಸೀಟು ಹಂಚಿಕೆ ಮಾತುಕತೆ ವೇಳೆ ಇವು ಅಂತಿಮವಾಗಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.\

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ