logo
ಕನ್ನಡ ಸುದ್ದಿ  /  ಕರ್ನಾಟಕ  /  Acs To Karnataka Cm: ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಅತೀಕ್‌ ನೇಮಕ

ACS to Karnataka CM: ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಅತೀಕ್‌ ನೇಮಕ

HT Kannada Desk HT Kannada

Nov 27, 2023 12:38 PM IST

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌ ಕೆ ಅತೀಕ್‌ ಅವರನ್ನು ನೇಮಿಸಲಾಗಿದೆ.

    • IAS Transfer ಕರ್ನಾಟಕದ ಮುಖ್ಯಮಂತ್ರಿಗಳ( Karnataka Cm) ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌ಕೆ ಅತೀಕ್(‌ LK Atheeq) ಅವರನ್ನು ನೇಮಿಸಲಾಗಿದೆ. 
ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌ ಕೆ ಅತೀಕ್‌ ಅವರನ್ನು ನೇಮಿಸಲಾಗಿದೆ.
ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌ ಕೆ ಅತೀಕ್‌ ಅವರನ್ನು ನೇಮಿಸಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ.

ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ನವೆಂಬರ್‌ 30ರಂದು ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ಧಾರೆ.

ಲುತಾಫುಲ್ಲಾ ಖಾನ್‌ ಅವರು ತುಮಕೂರು ಜಿಲ್ಲೆ ಪಾವಗಡದವರು. 1991ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಮಂಗಳೂರು ಎಸಿಯಾಗಿ ನಂತರ ಮಂಡ್ಯ, ಹಾಸನ ಡಿಸಿಯಾಗಿದ್ದವರು. ಸರ್ವ ಶಿಕ್ಷಾ ಅಭಿಯಾನದ ಯೋಜನಾ ನಿರ್ದೇಶಕರೂ ಆಗಿದ್ದರು. ಕೇಂದ್ರ ಸರ್ಕಾರದ ಸೇವೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿಯೂ ಸೇವೆ ಸಲ್ಲಿಸಿದರು. ವಿಶ್ವ ಬ್ಯಾಂಕ್‌ ಕಾರ್ಯ ನಿರ್ವಾಹಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ ಅನುಭವವಿದೆ. ಕರ್ನಾಟಕದಲ್ಲಿ ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಸೇರಿ ಹಲವು ಇಲಾಖೆಗಳಲ್ಲಿ ಕೆಲಸ ಮಾಡಿದ್ದಾರೆ. 2025ರ ಜನವರಿಯಲ್ಲಿ ನಿವೃತ್ತರಾಗಲಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ