logo
ಕನ್ನಡ ಸುದ್ದಿ  /  ಕರ್ನಾಟಕ  /  Schools Fees Hike: 2 ವರ್ಷದಲ್ಲಿ ಕರ್ನಾಟಕ ಶಾಲೆಗಳ ಶುಲ್ಕ ಶೇ 30 ಕ್ಕಿಂತಲೂ ಹೆಚ್ಚಳ; ವರದಿ

Schools Fees Hike: 2 ವರ್ಷದಲ್ಲಿ ಕರ್ನಾಟಕ ಶಾಲೆಗಳ ಶುಲ್ಕ ಶೇ 30 ಕ್ಕಿಂತಲೂ ಹೆಚ್ಚಳ; ವರದಿ

Raghavendra M Y HT Kannada

Mar 24, 2024 12:15 AM IST

google News

ಕರ್ನಾಟಕದ ಶಾಲೆಗಳಲ್ಲಿ ಕಳೆದ 2 ವರ್ಷಗಳಲ್ಲಿ ಶೇಕಡಾ 30 ಮತ್ತು ಅದಕ್ಕಿಂತ ಹೆಚ್ಚು ಶಾಲಾ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದು ಸರ್ವೇಯೊಂದು ಹೇಳಿದೆ.

    • ಕರ್ನಾಟಕದಲ್ಲಿ ಖಾಸಗಿ ಶಾಲೆಗಳಲ್ಲಿನ ಶುಲ್ಕ ವರ್ಷದಿಂದ ವರ್ಷಕ್ಕೆ ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡುತ್ತಿರುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಈ ಬಗ್ಗೆ ಪೋಷಕರೇ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಶಾಲೆಗಳಲ್ಲಿ ಕಳೆದ 2 ವರ್ಷಗಳಲ್ಲಿ ಶೇಕಡಾ 30 ಮತ್ತು ಅದಕ್ಕಿಂತ ಹೆಚ್ಚು ಶಾಲಾ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದು ಸರ್ವೇಯೊಂದು ಹೇಳಿದೆ.
ಕರ್ನಾಟಕದ ಶಾಲೆಗಳಲ್ಲಿ ಕಳೆದ 2 ವರ್ಷಗಳಲ್ಲಿ ಶೇಕಡಾ 30 ಮತ್ತು ಅದಕ್ಕಿಂತ ಹೆಚ್ಚು ಶಾಲಾ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದು ಸರ್ವೇಯೊಂದು ಹೇಳಿದೆ.

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಬೇಕೆಂದು ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಇದರ ವಿರುದ್ಧ ಖಾಸಗಿ ಶಾಲೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದಾದ ಬಳಿಕ ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಹಾಗೂ ಕುಡಿಯುವ ನೀರಿನ ಶುಲ್ಕವನ್ನ ಶಾಲೆಗಳೇ ಭರಿಸಬೇಕೆಂದು ಸರ್ಕಾರ ಕಳೆದ ತಿಂಗಳಲಷ್ಟೇ ಹೇಳಿತ್ತು. ಇದರ ನಡುವೆ ಇದೀಗ ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ಶಾಲೆಗಳ ಶುಲ್ಕವನ್ನು ಶೇಕಡಾ 30 ಮತ್ತು ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳ ಫೋಷಕರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ನಿಮ್ಮ ಮಕ್ಕಳ ಶಾಲಾ ಶುಲ್ಕವನ್ನು ಹೆಚ್ಚಿಸಲಾಗಿದೆಯೇ ಎಂಬ ಪ್ರಶ್ನೆಗೆ ಬೆಂಗಳೂರಿನ ಶೇಕಡಾ 58 ರಷ್ಟು ಜನರು ಹೌದು ಎಂದಿದ್ದಾರೆ. ಅಲ್ಲದೆ, ಕಳೆದ 2 ವರ್ಷಗಳಲ್ಲಿ ಶೇಕಡಾ 30ಕ್ಕಿಂತ ಅಧಿಕ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ. ಇದೇ ಅವಧಿಯಲ್ಲಿ ಸ್ಕೂಲ್ ಫೀಸ್ ಶೇಕಡಾ 50 ರಷ್ಟು ಹೆಚ್ಚಳವಾಗಿದೆ ಎಂದು 1,619 ಪೋಷಕರು ಹೇಳಿದ್ದಾರೆ. ಇದೇ ವೇಳೆ ಸರ್ಕಾರದ ವಿರುದ್ಧ ದೂರಿರುವ ಶೇಕಡಾ 72 ರಷ್ಟು ಜನರು, ಅತಿಯಾದ ಶುಲ್ಕ ಹೆಚ್ಚಳವನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ.

ಬೆಂಗಳೂರಿನ ಸುಬ್ರಹ್ಮಣ್ಯಪುರದ ನಿವಾಸಿ ಸವಿತಾ ಎನ್ ಎಂಬುವವವರು, ನನ್ನ ಆರು ವರ್ಷದ ಮಗನನ್ನು ಬೆಂಗಳೂರಿನ ಶಾಸಗಿ ಶಾಲೆಗೆ ಸೇರಿಸಿದ್ದೇನೆ. ಶಾಲಾ ಶುಲ್ಕವು ಕಳೆದ ವರ್ಷಕ್ಕಿಂತ ಶೇಕಡಾ 10 ರಷ್ಟು ಹೆಚ್ಚಳವಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹೀಗೆ ಪ್ರತಿ ವರ್ಷ ಶುಲ್ಕ ಹೆಚ್ಚಳ ಮಾಡುತ್ತಾ ಹೋಗುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಕರ್ನಾಟಕ ಶಾಸಕಿ ಶಾಲೆಗಳು, ಕಾಲೇಜುಗಳ ಪೋಷಕರ ಸಮನ್ವಯ ಸಮಿತಿ ಅಧ್ಯಕ್ಷ ಬಿಎನ್ ಯೋಗಾನಂದ ಹೇಳಿದ್ದಾರೆ.

ಶುಲ್ಕ ಹೆಚ್ಚಳವನ್ನು ಸಮರ್ಥಿಸಿಕೊಳ್ಳುತ್ತಿರುವ ಖಾಸಗಿ ಶಾಲೆಗಳು

ಆದರೆ ಖಾಸಗಿ ಶಾಲೆಗಳ ಸಂಘಟನೆಗಳು ಹೇಳೋದೇ ಬೇರೆ. ಖಾಸಗಿ ಶಾಲೆಗಳು ಶುಲ್ಕವನ್ನು ಹೆಚ್ಚಿಸಲು ಸ್ವಾತಂತ್ರ್ಯವನ್ನು ಹೊಂದಿವೆ. ಇದರಲ್ಲಿ ಸರ್ಕಾರ ಮಧ್ಯಪ್ರವೇಶಿ ಅಸಮಂಜಸವಾದ ಶುಲ್ಕವನ್ನು ರಚನೆ ಮಾಡುವುದನ್ನು ಜಾರಿಗೊಳಿಸುವುದು ಸಾಧ್ಯವಿಲ್ಲ ಎಂದು ಕರ್ನಾಟಕ ಖಾಸಗಿ ಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್‌ನ ಡಿ ಶಶಿ ಕುಮಾರ್ ತಿಳಿಸಿದ್ದಾರೆ.

ಶುಲ್ಕ ಹೆಚ್ಚಳದ ಬಗ್ಗೆ ದೇಶಾದ್ಯಂತ ಸಮೀಕ್ಷೆಯನ್ನು ನಡೆಸಲಾಗಿದ್ದು, 312 ಜಿಲ್ಲೆಗಳಿಂದ ಸುಮಾರು 27,000 ಮಂದಿ ಈ ಸರ್ವೇಯಲ್ಲಿ ಭಾಗವಹಿಸಿದ್ದಾರೆ. ಟೈರ್ 1 ಮತ್ತು ಟೈರ್ 2 ನಗರಗಳಲ್ಲಿ ಖಾಸಗಿ ಶಾಲೆಗಳಲ್ಲಿ 1 ಲಕ್ಷ ರೂಪಾಯಿಂದ 4 ಲಕ್ಷ ರೂಪಾಯಿವರೆಗೆ ಶುಲ್ಕ ಹೆಚ್ಚಳವಾಗಿರುವ ಬಗ್ಗೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಒಟ್ಟಿನಲ್ಲಿ ಪೋಷಕರು ಜಿದ್ದಿಗೆ ಬಿದ್ದವರಂತೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಾರೆ. ಇದನ್ನು ಬಂಡವಾಳವನ್ನಾಗಿ ಮಾಡಿಕೊಂಡಿರುವ ಖಾಸಗಿ ಶಾಲೆಗಳು ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ಶುಲ್ಕದ ಹೆಸರಿನಲ್ಲಿ ಲಕ್ಷ ಲಕ್ಷ ವಸೂಲಿ ಮಾಡುತ್ತಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ