Baraguru Ramachandrappa: ಹರಿಹರದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಕಾರ್ಯಕ್ರಮದ ಬಳಿಕ ಕುಸಿದ ಬರಗೂರು ರಾಮಚಂದ್ರಪ್ಪ; ಆಸ್ಪತ್ರೆಗೆ ದಾಖಲು
Jan 29, 2023 04:53 PM IST
ಬಂಡಾಯ ಸಾಹಿತ್ಯ ಸಂಘಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬರಗೂರು ರಾಮಚಂದ್ರಪ್ಪ (ಎಡಚಿತ್ರ), ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಬರಗೂರು ರಾಮಚಂದ್ರಪ್ಪ
Baraguru Ramachandrappa: ಬಂಡಾಯ ಸಾಹಿತ್ಯ ಸಂಘಟನೆ ಹರಿಹರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬರಗೂರು ರಾಮಚಂದ್ರಪ್ಪ ಇಂದು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸ್ಥಳೀಯ ಅಕ್ಷಯ್ ಹಾಸ್ಪಿಟಲ್‌ಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ಒದಗಿಸಲಾಗಿದೆ. ಅವರು ಚೇತರಿಸಿಕೊಂಡಿದ್ದಾರೆ
ಬೆಂಗಳೂರು: ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಏರ್ಪಡಿಸಿದ್ದ ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ವೇದಿಕೆಯಲ್ಲಿ ಕುಸಿದು ಬಿದ್ದ ಘಟನೆ ವರದಿಯಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಗದ್ದು, ಚೇತರಿಸಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಬಂಡಾಯ ಸಾಹಿತ್ಯ ಸಂಘಟನೆ ಹರಿಹರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬರಗೂರು ರಾಮಚಂದ್ರಪ್ಪ ಇಂದು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸ್ಥಳೀಯ ಅಕ್ಷಯ್ ಹಾಸ್ಪಿಟಲ್‌ಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ಒದಗಿಸಲಾಗಿದೆ. ಅವರು ಚೇತರಿಸಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.
ರಕ್ತದೊತ್ತಡ ಮತ್ತು ಶುಗರ್ ಟೆಸ್ಟ್ ಎಲ್ಲ ಮಾಡಿದ್ದಾರೆ. ಎಲ್ಲವೂ ನಾರ್ಮಲ್ ಇದೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ. ಇದೇ ಮೊದಲ ಸಲ ಹೀಗಾಗಿದೆ ಎಂದು ರಾಮಚಂದ್ರಪ್ಪ ಅವರು ಹೇಳಿದ್ದಾಗಿ ಪ್ರಜಾವಾಣಿ ವರದಿ ತಿಳಿಸಿದೆ.
ಗಮನಿಸಬಹುದಾದ ಸುದ್ದಿಗಳು
ಚುನಾವಣಾ ರಾಜಕೀಯದಿಂದ ದೂರ ಉಳಿದರೂ ಪಕ್ಷ ಸಂಘಟನೆ ಮಾಡುವುದರಲ್ಲಿ ತೊಡಗಿಸಿಕೊಳ್ಳುತ್ತೇನೆ. ಪಕ್ಷ ಕಟ್ಟುವ ಕೆಲಸವನ್ನು ಮಾಡುತ್ತೇನೆ. ಇದಕ್ಕಾಗಿ ರಾಜ್ಯದ ಉದ್ದಗಲ ಪ್ರವಾಸ ಮಾಡುತ್ತೇನೆ. ಚುನಾವಣಾ ರಾಜಕೀಯದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಇದ್ದಾರೆ. ಅವರು ಶಿವಮೊಗ್ಗ ಸಂಸದರೂ ಇದ್ದು, ಆ ಕೆಲಸ ಅವರು ನೋಡಿಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ
ಹೊಸ ಮೊಬೈಲ್ ಅಪ್ಲಿಕೇಶನ್‌ನಲ್ಲಿ ದೇವರ ದರ್ಶನ ಟಿಕೆಟ್ ಬುಕಿಂಗ್, ವಸತಿ ಬುಕಿಂಗ್, ಇ-ಹುಂಡಿ ಮುಂತಾದ ವಿವಿಧ ಯಾತ್ರಿ ಸೇವೆಗಳು ವೆಂಕಟೇಶ್ವರನ ಭಕ್ತರಿಗೆ ಲಭ್ಯವಾಗುವಂತೆ ಮಾಡಲಾಗಿದೆ. ಜಿಯೋ ಪ್ಲಾಟ್‌ಫಾರ್ಮ್ಸ್ ಪ್ರತಿನಿಧಿಗಳು ಟಿಟಿಡಿಯ ಮೊಬೈಲ್ ಅಪ್ಲಿಕೇಶನ್‌ನ ಅತ್ಯಾಕರ್ಷಕ ಫೀಚರ್ಸ್ ಅನ್ನು ಶುಕ್ರವಾರ ತಿರುಮಲ ತಿರುಪತಿ ದೇವಸ್ಥಾನಮ್ಸ್ ನ ಆಡಳಿತ ಮಂಡಳಿಗೆ ಪ್ರಸ್ತುತಪಡಿಸಿದರು. ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ
ಪಾಕಿಸ್ತಾನ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿ ಆದೇಶ ಹೊರಡಿಸಿದೆ. ಪ್ರತಿಲೀಟರ್ ಪೆಟ್ರೋಲ್ ದರವನ್ನು 35 ಪಾಕಿಸ್ತಾನ ರೂಪಾಯಿ (ಪಿಕೆಆರ್)ಯಷ್ಟು ಹೆಚ್ಚಿಸಿದೆ. ಜನವರಿ 29ರ ಬೆಳಗ್ಗೆ 11 ಗಂಟೆಗೆ ಜಾರಿ ಬರುವಂತೆ ಇಂಧನ ದರವನ್ನು ಹೆಚ್ಚಿಸಿ ಪಾಕಿಸ್ತಾನದ ಹಣಕಾಸು ಸಚಿವ ಇಶಾಕ್ ದಾರ್ ಆದೇಶ ಹೊರಡಿಸಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಅರೆಸೇನಾ ಪಡೆಯ 3,500 ಪುರುಷ ಮತ್ತು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 1700 ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ. ಪೂರ್ಣ ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ