logo
ಕನ್ನಡ ಸುದ್ದಿ  /  ಕರ್ನಾಟಕ  /  Bbmp Recruitment: ಬಿಬಿಎಂಪಿಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶ, ನೇರ ಸಂದರ್ಶನದ ಮೂಲಕ ಆಯ್ಕೆ

BBMP Recruitment: ಬಿಬಿಎಂಪಿಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶ, ನೇರ ಸಂದರ್ಶನದ ಮೂಲಕ ಆಯ್ಕೆ

HT Kannada Desk HT Kannada

Jul 21, 2022 09:16 PM IST

BBMP Recruitment: ಬಿಬಿಎಂಪಿಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶ, ಇಲ್ಲಿದೆ ಮಾಹಿತಿ

    • ಬೃಹತ್‌ ಬೆಂಗಳೂರು ನಗರ ಪಾಲಿಕೆಯು (ಬಿಬಿಎಂಪಿ) ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಹೆಚ್ಚಿನ ವಿವರನ್ನು ಈ ಮುಂದೆ ನೀಡಲಾಗಿದೆ.
BBMP Recruitment: ಬಿಬಿಎಂಪಿಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶ, ಇಲ್ಲಿದೆ ಮಾಹಿತಿ
BBMP Recruitment: ಬಿಬಿಎಂಪಿಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶ, ಇಲ್ಲಿದೆ ಮಾಹಿತಿ

ಬೆಂಗಳೂರು: ಬೃಹತ್‌ ಬೆಂಗಳೂರು ನಗರ ಪಾಲಿಕೆಯು (ಬಿಬಿಎಂಪಿ) ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಹೆಚ್ಚಿನ ವಿವರವನ್ನು ಈ ಮುಂದೆ ನೀಡಲಾಗಿದೆ.

ಟ್ರೆಂಡಿಂಗ್​ ಸುದ್ದಿ

Prajwal Revanna Scandal: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣ; ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್‌ಡಿ ರೇವಣ್ಣ ಬಂಧನ

ಬೆಂಗಳೂರು ಸುತ್ತ ಮುತ್ತ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಅತ್ತ ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತಷ್ಟು ಬಿಸಿಯ ಎಚ್ಚರಿಕೆ

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಯಾವಾಗ? ಫಲಿತಾಂಶ ನೋಡುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ

Mangalore News: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಏರ್ಪೋರ್ಟ್‌ಗೆ ಬಿಗಿ ಭದ್ರತೆ, ವಾರದ ಹಿಂದಿನ ಪ್ರಕರಣ ತಡವಾಗಿ ಬೆಳಕಿಗೆ

ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಸೂಚನೆಯಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲನೇ ಹಂತದಲ್ಲಿ ಸ್ಥಾಪಿಸಲಾಗುವ “ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ನಾಲ್ಕನೇ ದರ್ಜೆ ನೌಕರರು ಸೇರಿದಂತೆ ತಲಾ 8 ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ತಲಾ ಎಂಟು ಹುದ್ದೆಗಳೆಂದರೆ ಒಟ್ಟು 32 ಹುದ್ದೆಗಳನ್ನು ಭರ್ತಿ ಮಾಡುವ ನಿರೀಕ್ಷೆಯಿದೆ.

ಆಯ್ಕೆ ಹೇಗೆ?

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಗುತ್ತಿಗೆ ಅವಧಿಗೆ ನೇಮಕ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳನ್ನು ವಾಕ್‌ ಇನ್‌ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹತಾ ಮಾನದಂಡಗಳೇನು?

ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ನಾಲ್ಕನೇ ದರ್ಜೆ ನೌಕರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಮುಂದಿನ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಈ ಕೆಳಗೆ ನಮೂದಿಸಿರುವ ವಯೋಮಿತಿಯನ್ನು ಮೀರಿರಬಾರದು.

• ಸಾಮಾನ್ಯ ವರ್ಗ- 35 ವರ್ಷ

• 2ಎ, 2ಬಿ, 3ಎ, 3ಬಿ- 38 ವರ್ಷ

• ಪ.ಜಾತಿ, ಪ.ಪಂಗಡ, ವರ್ಗ-1,- 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಕನ್ನಡ ಭಾಷಾ ಜ್ಞಾನ ಕಡ್ಡಾಯ

ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ನಾಲ್ಕನೇ ದರ್ಜೆ ನೌಕರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಇರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು, ಒಂದು ಸ್ವಯಂ ದೃಢೀಕೃತ ನಕಲು ಪ್ರತಿ ಮತ್ತು 2 ಭಾವಚಿತ್ರದೊಂದಿಗೆ ನಿಗದಿಪಡಿಸಿದ ಸ್ಥಳ ಮತ್ತು ದಿನಾಂಕದಂದು ವಾಕ್ ಇನ್ ಆಯ್ಕೆ ಪ್ರಕ್ರಿಯೆಗೆ ಹಾಜರಾಗಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 080-22975516, Email id: choph515@gmail.com ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವೆಬ್‌ಸೈಟ್ www.bbmp.gov.in ಅನ್ನು ಸಂಪರ್ಕಿಸಲು ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಬಾಲಸುಂದರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು