logo
ಕನ್ನಡ ಸುದ್ದಿ  /  ಕರ್ನಾಟಕ  /  Ayushmati Clinics: ಮಹಿಳೆಯರಿಗಾಗಿ 'ಆಯುಷ್ಮತಿ ಕ್ಲಿನಿಕ್' ತೆರೆಯಲು ಬಿಬಿಎಂಪಿ ಸಿದ್ಧತೆ... ಇದರ ವಿಶೇಷತೆ ಹೀಗಿದೆ

Ayushmati Clinics: ಮಹಿಳೆಯರಿಗಾಗಿ 'ಆಯುಷ್ಮತಿ ಕ್ಲಿನಿಕ್' ತೆರೆಯಲು ಬಿಬಿಎಂಪಿ ಸಿದ್ಧತೆ... ಇದರ ವಿಶೇಷತೆ ಹೀಗಿದೆ

HT Kannada Desk HT Kannada

Mar 26, 2023 08:39 PM IST

ಸಾಂದರ್ಭಿಕ ಚಿತ್ರ

  • ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಮಂಜೂರಾದ ಆಯುಷ್ಮತಿ ಕ್ಲಿನಿಕ್​​ಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಮಂಜೂರಾದ ಆಯುಷ್ಮತಿ ಕ್ಲಿನಿಕ್​​ಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ.

ಟ್ರೆಂಡಿಂಗ್​ ಸುದ್ದಿ

Mysuru News: ಬಿಸಿಲಬೇಗೆ ನಾಗರಹೊಳೆಯಿಂದ ಹೊರ ಬಂದು ತೋಟದ ಮನೆಯಲ್ಲಿ ಗಡದ್ದಾಗಿ ಮಲಗಿದ ಹುಲಿರಾಯ

ಬೆಂಗಳೂರು: ಅಲೆನ್ ಕೆರಿಯರ್ ಇನ್‌ಸ್ಟಿಟ್ಯೂಟ್‌ಗೆ 1.4 ಲಕ್ಷ ರೂಪಾಯಿ ದಂಡ, ವಿದ್ಯಾರ್ಥಿ ಕೇಳದ ಕೋರ್ಸ್‌ಗೆ ಸೇರಿಸಿದ ಪ್ರಕರಣ

ಲೋಕಸಭಾ ಚುನಾವಣೆ ನಾಳೆ ಮತದಾನ, ಬೆಂಗಳೂರಲ್ಲಿ ಇಂದು ಸಂಚಾರ ದಟ್ಟಣೆ, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗ ಸಲಹೆ ನೀಡಿದ ಪೊಲೀಸರು

Mangaluru News: ಬಂಟ್ವಾಳ ಸಮೀಪ ನೇತ್ರಾವತಿ ನದಿ ಬದಿ ಆಟವಾಡುತ್ತಿದ್ದ 10 ಮತ್ತು 14 ವರ್ಷದ ಬಾಲಕಿಯರು ನೀರುಪಾಲು

ಕೆಲ ದಿನಗಳ ಹಿಂದಷ್ಟೇ ನಮ್ಮ ಕ್ಲಿನಿಕ್ ಗಳನ್ನು ತೆರೆಯಲಾಗಿತ್ತು. ಅದೇ ರೀತಿ ಆಯುಷ್ಮತಿ ಕ್ಲಿನಿಕ್ ಗಳ ತೆರೆದು, ತಜ್ಞ ವೈದ್ಯರಿಂದ ಮಹಿಳೆಯರಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಎನ್‌ಎಚ್‌ಎಂನ ನಿರ್ದೇಶಕ ಡಾ. ನವೀನ್ ಭಟ್ ಮಾತನಾಡಿ, ರಾಜ್ಯದಲ್ಲಿ 50 ಕ್ಲಿನಿಕ್‌ಗಳು ಕಾರ್ಯಾಚರಣೆ ಮಾಡಲು ಇದೀಗ ಸಿದ್ಧವಾಗಿವೆ. 128 ಕ್ಲಿನಿಕ್‌ಗಳ ಪೈಕಿ 70 ಕ್ಲಿನಿಕ್ ಗಳನ್ನು ಮಾರ್ಚ್ ಅಂತ್ಯದೊಳಗೆ ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಹೇಳಿದ್ದಾರೆ.

ಜುಲೈ 2022 ರಲ್ಲಿ ಯೋಜನೆಯ ಬ್ಲೂ ಪ್ರಿಂಟ್:

ರಾಜ್ಯದ ನಗರ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಲಿನಿಕ್‌ಗಳನ್ನು ತೆರೆಯಲು ಜುಲೈ 2022 ರಲ್ಲಿ ಯೋಜನೆಯನ್ನು ರೂಪಿಸಲಾಗಿತ್ತು. ಆರೋಗ್ಯ ಇಲಾಖೆ ಘೋಷಿಸಿರುವಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ 57 ಕ್ಲಿನಿಕ್ ಗಳು ಮತ್ತು ಉಳಿದ ಕ್ಲಿನಿಕ್ ಗಳನ್ನು ರಾಜ್ಯದ ಇತರ ಭಾಗಗಳಲ್ಲಿ ತೆರೆಯಲು ಸಿದ್ಧತೆ ನಡೆಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವೆ:

ನಗರದ ಜನರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವೆಗಳನ್ನು ಒದಗಿಸುವುದು ಈ ಚಿಕಿತ್ಸಾಲಯಗಳ ಉದ್ದೇಶವಾಗಿದೆ ಎಂದು ಡಾ. ನವೀನ್ ಭಟ್ ಮಾಹಿತಿ ನೀಡಿದ್ದಾರೆ.

ಯುಪಿಎಚ್‌ಸಿಗಳಲ್ಲಿ ಹಲವು ತಜ್ಞರು:

ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಪ್ರಸೂತಿ ತಜ್ಞರು ಮತ್ತು ಮಾನಸಿಕ ಆರೋಗ್ಯ ತಜ್ಞರ ಸೇವೆಗಳನ್ನು ರೋಗಿಗಳಿಗೆ ಲಭ್ಯವಾಗುವಂತೆ ಯುಪಿಎಚ್‌ಸಿಗಳಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಡಾ ಭಟ್ ತಿಳಿಸಿದ್ದಾರೆ.

ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ

ಈ ಚಿಕಿತ್ಸಾಲಯಗಳು ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತವೆ. ಇದನ್ನು ಹೊರತುಪಡಿಸಿ, ವೈದ್ಯರು ಮಧುಮೇಹ ಮತ್ತು ರಕ್ತದೊತ್ತಡ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತಾರೆ. ಚಿಕಿತ್ಸಾಲಯಗಳು ಗರ್ಭಿಣಿಯರಿಗೆ ಆಹಾರ ಮತ್ತು ನೈರ್ಮಲ್ಯದ ಬಗ್ಗೆ ವಿವರಗಳಂತಹ ಸಲಹೆಗಳನ್ನು ನೀಡುತ್ತವೆ. ಅವರು ಪ್ರಸವಪೂರ್ವ ತಪಾಸಣೆಯೊಂದಿಗೆ ಉಚಿತ ಔಷಧಿಗಳನ್ನು ಒದಗಿಸಲಾಗುವುದು. ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಚಿಕಿತ್ಸೆ ಲಭ್ಯವಾಗಲಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿಕಿತ್ಸಾಲಯಗಳು ರೆಫರಲ್ ಮತ್ತು ಕೌನ್ಸೆಲಿಂಗ್ ಸಹ ಸೇವೆಗಳನ್ನು ಹೊಂದಿರುತ್ತವೆ. ಚಿಕಿತ್ಸೆಗಾಗಿ ವಿಶೇಷ ಆಸ್ಪತ್ರೆಗಳಲ್ಲಿ ಸಂಬಂಧಿಸಿದ ವೈದ್ಯರನ್ನು ಭೇಟಿ ಮಾಡಲು ಅವರಿಗೆ ಅಪಾಯಿಂಟ್‌ಮೆಂಟ್ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಪಿಂಕ್​ ಪಿಂಕ್​..

ಆಯುಷ್ಮತಿ ಮಹಿಳಾ ಚಿಕಿತ್ಸಾಲಯಗಳನ್ನು ಸುಲಭವಾಗಿ ಗುರುತಿಸಲು ಕಟ್ಟಡಗಳಿಗೆ ಗುಲಾಬಿ ಬಣ್ಣದ ಪೇಂಟ್​ ಮಾಡಲಾಗುತ್ತದೆ. ಅಷ್ಟೇ ಅಲ್ಲ ಬೆಡ್ ಶೀಟ್‌ಗಳು ಸಹ ಗುಲಾಬಿ ಬಣ್ಣದ್ದಾಗಿರಲಿದೆ.

    ಹಂಚಿಕೊಳ್ಳಲು ಲೇಖನಗಳು