ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಯುವಕನ ಹಿಡಿದಿಟ್ಟು ಪ್ಯಾಂಟ್ ಹೊಲಿದ ಪುಂಡರು, ವಿಡಿಯೋ ವೈರಲ್; ಆತ್ಮಹತ್ಯೆಗೆತ್ನಿಸಿದ ಯುವಕ
Nov 22, 2024 11:20 AM IST
ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಯುವಕನ ಹಿಡಿದಿಟ್ಟು ಪ್ಯಾಂಟ್ ಹೊಲಿದ ಪುಂಡರು ಆ ವಿಡಿಯೋ ವೈರಲ್ ಮಾಡಿದ್ದಾರೆ. ಈ ಘಟನೆಯಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಕಳವಳಕಾರಿ ಘಟನೆ ನಡೆದಿದೆ. (ವಿಡಿಯೋದಿಂದ ತೆಗೆದ ಚಿತ್ರ)
ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಪುಂಡರ ಪುಂಡಾಟಿಕೆ ಹೆಚ್ಚಳವಾಗಿದ್ದು, ಯುವಕನ ಹಿಡಿದಿಟ್ಟು ಪ್ಯಾಂಟ್ ಹೊಲಿದ ಪುಂಡರು ಆ ವಿಡಿಯೋ ವೈರಲ್ ಮಾಡಿದ್ದರು. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಕಳವಳಕಾರಿ ಘಟನೆ ವರದಿಯಾಗಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
ಮಂಗಳೂರು : ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕಜಾಲತಾಣದಲ್ಲಿ ಹಾಕಿದ್ದು.ಬಳಿಕ ಆತ ವಿಡಯೋದಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪುಂಡರ ಪುಂಡಾಟಿಕೆಗೆ ನೊಂದ ಯುವಕ
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ಈವಾಗಿನ ನವೀನ ಮಾದರಿಯ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದು. ಮಾರುಕಟ್ಟೆಯಲ್ಲಿದ್ದ ಪಡ್ಡೆ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜೊತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಪ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್ (ಜೈಭಾರತ್) , ಅನೀಶ್ ಪಣಕಜೆ,ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ s/o ಬಾಬ್ ಜಾನ್ ಸಾಹೇಬ್ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.
ಟ್ರೋಲ್ ಮಾಡಿದ್ದರಿಂದ ಅತಿರೇಕದ ನಿರ್ಧಾರ
ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಯುವಕ ಶಾಹಿಲ್ ಮನೆಯಲ್ಲಿ ಯಾವುದೊ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು.ತಕ್ಷಣ ಚಿಕಿತ್ಸೆಗಾಗಿ ಮನೆಯವರು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ.
ಗಮನಿಸಿ: ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಪೊಲೀಸರ, ಆಪ್ತಸಮಾಲೋಚಕರ, ವೈದ್ಯರ ನೆರವು ಪಡೆಯಿರಿ. ಕರ್ನಾಟಕದಲ್ಲಿ ಆರೋಗ್ಯ ಸಹಾಯವಾಣಿ 104, ವೃದ್ಧರ ಸಹಾಯವಾಣಿ 1090, ಮಕ್ಕಳ ಸಹಾಯವಾಣಿ 1098 ಮತ್ತು ಸ-ಮುದ್ರ ಸಹಾಯವಾಣಿ 98803 96331 ಮೂಲಕ ಟೆಲಿ ಕೌನ್ಸೆಲಿಂಗ್ ನೆರವು ಪಡೆದುಕೊಳ್ಳಿ. ಕೊನೇ ನಿರ್ಧಾರಕ್ಕೆ ಮೊದಲು ನಿಮ್ಮವರ ಬಗ್ಗೆ ಒಂದು ಕ್ಷಣ ಯೋಚಿಸಿ.
(ವರದಿ- ಹರೀಶ್ ಮಾಂಬಾಡಿ, ಮಂಗಳೂರು)