logo
ಕನ್ನಡ ಸುದ್ದಿ  /  ಕರ್ನಾಟಕ  /  Bwssb News: ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ

BWSSB News: ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ

HT Kannada Desk HT Kannada

Apr 30, 2024 04:25 PM IST

google News

ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ

    • ಕಳೆದ ಒಂದು ವಾರದಿಂದ ಜಲಮಂಡಳಿ ಅಧಿಕಾರಿಗಳು 528 ಕಟ್ಟಡಗಳಲ್ಲಿ ಪರಿಶೀಲನೆ ನಡೆಸಿದ್ದು, 446 ಕಟ್ಟಡಗಳಲ್ಲಿ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವುದು ಪತ್ತೆಯಾಗಿದೆ
ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ
ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ

ಬೆಂಗಳೂರು: ಜಲಮಂಡಳಿಯ ಕಾಯ್ದೆಯನ್ನು ಉಲ್ಲಂಘಿಸಿ, ಅನಧಿಕೃತವಾಗಿ ತ್ಯಾಜ್ಯ ನೀರು ಹಾಗೂ ಮಳೆ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟೀಸ್‌ ಜಾರಿ ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಧರಿಸಿದೆ. ಜಲಮಂಡಳಿಯಿಂದ ಸಂಪರ್ಕ ಪಡೆಯದೆ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸಲಾಗುತ್ತಿದೆ. ಬಹುತೇಕ ಕಡ ಮಳೆ ನೀರನ್ನೂ ಒಳಚರಂಡಿಗೆ ಹರಿಸಲಾಗುತ್ತಿದೆ. ಇದನ್ನು ತಪ್ಪಿಸಲು ಹಾಗೂ ಒಳಚರಂಡಿ ಸಂಪರ್ಕವನ್ನು ಅಧಿಕೃತಗೊಳಿಸಲು ಮೇ 7 ರವರೆಗೆ ಅವಕಾಶ ನೀಡಲಾಗಿದೆ ಎಂದು ಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಜಲಮಂಡಳಿ ಅಧಿಕಾರಿಗಳು 528 ಕಟ್ಟಡಗಳಲ್ಲಿ ಪರಿಶೀಲನೆ ನಡೆಸಿದ್ದು, 446 ಕಟ್ಟಡಗಳಲ್ಲಿ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವುದು ಪತ್ತೆಯಾಗಿದೆ. ಇದರಲ್ಲಿ 221 ಸಂಪರ್ಕಗಳನ್ನು ಅಗತ್ಯ ಶುಲ್ಕ ಪಾವತಿಸಿಕೊಂಡು ಅಧಿಕೃತಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಉಳಿದ 390 ಸಂಪರ್ಕಗಳಿಗೆ ನೋಟೀಸ್‌ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಪರಿಶೀಲನೆಯನ್ನು ಚುರುಕುಗೊಳಿಸಿ ತ್ಯಾಜ್ಯ ನೀರನ್ನು ಅಸಮರ್ಪಕವಾಗಿ ವಿಲೇವಾರಿ ಮಾಡುವ ಮತ್ತು ಮಳೆ ನೀರನ್ನು ಕಲುಷಿತಗೊಳಿಸುವುದನ್ನು ತಪ್ಪಿಸಬಹುದಾಗಿದೆ ಎಂದು ಜಲಮಂಡಳಿ ಅಭಿಪ್ರಾಯಪಟ್ಟಿದೆ. ತಮ್ಮ ವ್ಯಾಪ್ತಿಯಲ್ಲಿರುವ 20 ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ವಸತಿ ಸಮುಚ್ಚಯಗಳು, ಹೋಟೆಲ್‌ಗಳು, ವಾಣಿಜ್ಯ ಕಟ್ಟಡಗಳನ್ನು ಆದ್ಯತೆಯ ಮೇರೆಗೆ ಪರಿಶೀಲನೆ ನಡೆಸಬೇಕು. ಮೇ 7 ರ ನಂತರವೂ ಒಳಚರಂಡಿ ಸಂಪರ್ಕವನ್ನು ಅಧಿಕೃತಗೊಳಿಸಲು ಅರ್ಜಿ ಸಲ್ಲಿಸದೇ ಇರುವವರ ಮೇಲೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚನೆ ನೀಡಿದರು.

ಅನಧಿಕೃತವಾಗಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವುದರಿಂದ ಸಾರ್ವಜನಿಕರಲ್ಲಿ ಆರೋಗ್ಯದ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳು ಹೆಚ್ಚು. ಇದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿ ಇರಿಸುವುದು ನಮ್ಮ ಗುರಿಯಾಗಿದೆ ಎನ್ನುವುದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಮನವಿ ಮಾಡಿ ಕೊಂಡಿದ್ದಾರೆ.

ಮ್ಯಾನ್‌ ಹೋಲ್‌ಗಳ ಕವರ್‌ ತೆರೆಯಬೇಡಿ, ಮಳೆ ನೀರನ್ನು ಒಳಚರಂಡಿಗೆ ಹರಿಸಬೇಡಿ

ಮಳೆ ನೀರು ಹರಿದು ಹೋಗುವಂತೆ ಮಾಡಲು ಸಾರ್ವಜನಿಕರು ಮ್ಯಾನ್‌ಹೋಲ್‌ಗಳ ಕವರ್‌ಗಳನ್ನು ತಗೆದುಬಿಡುತ್ತಾರೆ. ಇದರಿಂದ ಮಳೆ ನೀರು ಒಳಚರಂಡಿ ಕೊಳವೆ ಮಾರ್ಗಕ್ಕೆ ಪ್ರವೇಶ ಪಡೆದು ಹೆಚ್ಚಿಸುತ್ತದೆ. ಅಲ್ಲದೇ, ಕವರ್‌ ಗಳನ್ನು ತೆಗೆಯುವುದರಿಂದ ಮ್ಯಾನ್‌ಹೋಲ್‌ಗಳಲ್ಲಿ ಪಾದಚಾರಿಗಳು ಮತ್ತು ವಾಹನ ಸವಾರರುಬೀಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮಳೆ ನೀರು ಆವರಿಸುವದರಿಂದ ಮ್ಯಾನ್‌ಹೋಲ್‌ಗಳು ಕಾಣಿಸದೆ ವಾಹನಗಳು ಸಿಲುಕುವ ಸಾಧ್ಯತೆ ಇರುತ್ತದೆ ಎನ್ನುತ್ತಾರೆ ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌.

ಮನೆಗಳಲ್ಲಿ ಮಳೆ ನೀರು ಸಂಗ್ರಹಣಾ ವ್ಯವಸ್ಥೆಯ ಮೂಲಕ ಸಂಗ್ರಹವಾಗುವ ನೀರನ್ನು ಇಂಗು ಗುಂಡಿಗಳ ಮೂಲಕವೇ ಇಂಗುವ ವ್ಯವಸ್ಥೆ ಮಾಡಬೇಕೇ ಹೊರತು ನೇರವಾಗಿ ಒಳಚರಂಡಿ ಕೊಳವೆ ಮಾರ್ಗಕ್ಕೆ ಬಿಡಬಾರದು. ಈ ರೀತಿ ಮಾಡುವುದರಿಂದ ಒಳಚರಂಡಿಯ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇನ್ನು ಮುಂದಾದರೂ ಸಾರ್ವಜನಿಕರುಎಚ್ಚರ ವಹಿಸಬೇಕು ಎನ್ನುವುದು ಜಲಮಂಡಳಿ ಅಧ್ಯಕ್ಷರ ಮನವಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ