logo
ಕನ್ನಡ ಸುದ್ದಿ  /  ಕರ್ನಾಟಕ  /  Tippu Nija Kanasugalu Book: 'ಟಿಪ್ಪು ನಿಜ ಕನಸುಗಳು' ಪುಸ್ತಕ ಮಾರಾಟಕ್ಕೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ

Tippu Nija kanasugalu book: 'ಟಿಪ್ಪು ನಿಜ ಕನಸುಗಳು' ಪುಸ್ತಕ ಮಾರಾಟಕ್ಕೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ

HT Kannada Desk HT Kannada

Nov 23, 2022 06:47 PM IST

ಟಿಪ್ಪು ಸುಲ್ತಾನ್

  • 'ಟಿಪ್ಪು ನಿಜ ಕನಸುಗಳು' ಪುಸ್ತಕದ ವಿತರಣೆ ಮತ್ತು ಮಾರಾಟಕ್ಕೆ ಬೆಂಗಳೂರು ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.

ಟಿಪ್ಪು ಸುಲ್ತಾನ್
ಟಿಪ್ಪು ಸುಲ್ತಾನ್

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ಬರೆದಿರುವ 'ಟಿಪ್ಪು ನಿಜ ಕನಸುಗಳು' ಪುಸ್ತಕದ ವಿತರಣೆ ಮತ್ತು ಮಾರಾಟಕ್ಕೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.

ಟ್ರೆಂಡಿಂಗ್​ ಸುದ್ದಿ

Indian Railways: ಬೆಂಗಳೂರು-ಧರ್ಮಪುರಿ, ಹರಿಪ್ರಿಯಾ, ಮೈಸೂರು-ಕಾಚೀಗುಡ, ವಾಸ್ಕೋ ಸಹಿತ 7 ರೈಲುಗಳ ಸಂಚಾರ ಸಮಯ ಬದಲು

ಪ್ರಜ್ವಲ್ ರೇವಣ್ಣ ಕೇಸ್‌; ಜರ್ಮನಿಯಿಂದ ಲಂಡನ್‌ಗೆ ಹೊರಟ್ರಾ ಹಾಸನ ಸಂಸದ, 2 ದಿನಗಳ 10 ವಿದ್ಯಮಾನಗಳು

Raghunandan S Kamath Death: ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ನ್ಯಾಚುರಲ್ ಐಸ್ ಕ್ರೀಂನ ರಘುನಂದನ್ ಕಾಮತ್ ಇನ್ನಿಲ್ಲ

ಪ್ರಜ್ವಲ್‌ ರೇವಣ್ಣ ಕೇಸ್‌; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ

ಪುಸ್ತಕದಲ್ಲಿ ಹಿಂದಿನ ಮೈಸೂರು ಸಾಮ್ರಾಜ್ಯದ ಆಡಳಿತದ ಬಗ್ಗೆ ತಪ್ಪು ಮಾಹಿತಿ ಇದೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಒಳಗೊಂಡಿದೆ ಎಂದು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಡಿಸೆಂಬರ್ 3ರ ವರೆಗೆ ತಡೆಯಾಜ್ಞೆ ನೀಡಿದ್ದು, ಆನ್ಲೈನ್ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡಬಾರದು ಎಂದು ಹೇಳಿದೆ.

ಆದರೆ, ಪ್ರತಿವಾದಿಗಳು ಸದರಿ ಪುಸ್ತಕಗಳನ್ನು ಮುದ್ರಿಸಲು ಮತ್ತು ಈಗಾಗಲೇ ಮುದ್ರಿಸಿರುವ ಪುಸ್ತಕಗಳನ್ನು ಸಂಗ್ರಹಿಸಲು ಈ ತಡೆಯಾಜ್ಞೆಯು ಅಡ್ಡಿಯಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಬೆಂಗಳೂರು ನಿವಾಸಿ ಜಿಲ್ಲಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ರಫಿವುಲ್ಲಾ ಬಿ.ಎಸ್. ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 15ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಜೆ.ಆರ್.ಮೆಂಡೋನ್ಸಾ ಅವರ ನೇತೃತ್ವದ ಪೀಠವು ಈ ಆದೇಶ ನೀಡಿದೆ.

ಪುಸ್ತಕದಲ್ಲಿ ಬಳಸಲಾದ ತುರುಕರು ಎಂಬ ಪದವು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಪುಸ್ತಕದ ಪ್ರಕಟಣೆಯು ಅಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಉಂಟುಮಾಡುತ್ತದೆ, ಸಾರ್ವಜನಿಕ ಶಾಂತಿಗೆ ಭಂಗ ತರುತ್ತದೆ ಎಂದು ರಫೀವುಲ್ಲಾ ಅವರು ಪ್ರತಿಪಾದಿಸಿದ್ದಾರೆ.

ಇವರ ವಾದವನ್ನು ಅಂಗೀಕರಿಸಿದ ನ್ಯಾಯಾಲಯ, ನಾಟಕದ ವಿಷಯಗಳು ಸುಳ್ಳಾಗಿದ್ದು, ಅದರಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ತಪ್ಪು ಮಾಹಿತಿಯಿದ್ದರೆ ಮತ್ತು ಅದನ್ನು ಹಂಚಿದರೆ ಫಿರ್ಯಾದಿದಾರರಿಗೆ ಸರಿಪಡಿಸಲಾಗದ ನಷ್ಟವನ್ನು ಉಂಟುಮಾಡುತ್ತದೆ ಮತ್ತು ಕೋಮು ಶಾಂತಿ ಕದಡುವ ಸಾಧ್ಯತೆಗಳಿವೆ. ಸಾಮರಸ್ಯ ಮತ್ತು ಸಾರ್ವಜನಿಕ ಶಾಂತಿಗೆ ಅಪಾಯವಿದೆ ಎಂದು ಹೇಳಿದೆ.

ಟಿಪ್ಪು ನಿಜ ಕನಸುಗಳು ಪುಸ್ತಕದ ಕರ್ತೃ ಅಡ್ಡಂಡ ಕಾರ್ಯಪ್ಪ, ಪುಸ್ತಕ ಪ್ರಕಟಿಸಿರುವ ಅಯೋಧ್ಯಾ ಪ್ರಕಾಶನ, ಪುಸ್ತಕ ಮುದ್ರಿಸಿರುವ ರಾಷ್ಟ್ರೋತ್ಥಾನ ಮುದ್ರಣಾಲಯವನ್ನು ಪುಸ್ತಕ ಹಂಚಿಕೆ ಮತ್ತು ಮಾರಾಟ ಮಾಡದಂತೆ ನ್ಯಾಯಾಲಯವು ನಿರ್ಬಂಧ ವಿಧಿಸಿದೆ.

ಪ್ರತಿವಾದಿಗಳು ಬಾಕಿಯಿರುವ ಪುಸ್ತಕವನ್ನು ಪ್ರಸಾರ ಮಾಡಿದರೆ, ಅರ್ಜಿಯ ಉದ್ದೇಶವೇ ಸೋಲುತ್ತದೆ. ವಿವಾದಾತ್ಮಕ ಪುಸ್ತಕಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದ್ದರಿಂದ, ಈ ಹಂತದಲ್ಲಿ ಅನುಕೂಲತೆಯ ಸಮತೋಲನವು ಫಿರ್ಯಾದಿದಾರರ ಪರವಾಗಿದೆ ಎಂದು ಹೇಳಿದ ನ್ಯಾಯಾಲಯವು ಮೂವರು ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿತು. ಈ ಹಿಂದೆ ಮುಸ್ಲಿಂ ಗುಂಪುಗಳು ಪುಸ್ತಕದ ವಿರುದ್ಧ ಪ್ರತಿಭಟನೆ ನಡೆಸಿದ್ದವು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ