logo
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಬಂಧನ, 10 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ; ಹೊಸಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 4 ಸಾವು

ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಬಂಧನ, 10 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ; ಹೊಸಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 4 ಸಾವು

Umesh Kumar S HT Kannada

Published Jun 13, 2025 10:06 PM IST

google News

ಬೆಂಗಳೂರಿನಲ್ಲಿ 10 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಪೊಲೀಸರು ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಹೊಸಕೋಟೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.

  • ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿರುವ ಪೊಲೀಸರು ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಹೊಸಕೋಟೆ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.  (ವರದಿ- ಎಚ್.ಮಾರುತಿ, ಬೆಂಗಳೂರು)
ಬೆಂಗಳೂರಿನಲ್ಲಿ  10 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಪೊಲೀಸರು ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಹೊಸಕೋಟೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 10 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಪೊಲೀಸರು ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಹೊಸಕೋಟೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಬೆಂಗಳೂರು: ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಕೆಯಿಂದ 10 ಕೋಟಿ ರೂ. ಮೌಲ್ಯದ 5 ಕೆಜಿ 325ಗ್ರಾಂ ಎಂಡಿಎಂಎ ಹಾಗೂ ಆ್ಯಪಲ್ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಈ ಮಹಿಳೆ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಅಡಿಯಲ್ಲಿ ಭಾರತಕ್ಕೆ ಬಂದಿದ್ದಳು.

ಆರಂಭದಲ್ಲಿ ನವದೆಹಲಿಯಲ್ಲಿ ವಾಸವಾಗಿದ್ದಳು. ನಂತರ ತೆಲಂಗಾಣ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುವುದಾಗಿ ಶೈಕ್ಷಣಿಕ ವೀಸಾ ಪಡೆದಿದ್ದಳು. ಆದರೆ ಕಾಲೇಜಿಗೆ ದಾಖಲಾಗದೆ ಡ್ರಗ್ಸ್ ಮಾರಾಟಕ್ಕೆ ಇಳಿದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಈಕೆ ದೆಹಲಿಯಿಂದ ಬೆಂಗಳೂರಿಗೆ ಮಹಿಳೆಯರ ಉಡುಪುಗಳ ಮಧ್ಯದಲ್ಲಿ ಡ್ರಗ್ಸ್‌ ಅಡಗಿಸಿಟ್ಟು ಕೊಂಡು ತರುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ಮಾದಕವಸ್ತು ವ್ಯಾಪಾರ ಮಾಡುವಾಗ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪ ಮುಂಜಾನೆ ಬಸ್‌‍ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ಗೊಟ್ಟಿಪುರ ಗೇಟ್‌ ಬಳಿ ಈ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಕೇಶವಲುರೆಡ್ಡಿ (44),ತುಳಸಿ ಅಲಿಯಾಸ್‌‍ ತನು (21), ಹನ್ನೊಂದು ತಿಂಗಳ ಮಗು ಯತಿಕ್‌ ಮತ್ತು ತಿರುಪತಿಯ ಪ್ರಗತಿ (4) ಅಸುನೀಗಿದ್ದಾರೆ.

ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರಪ್ರದೇಶ ಸಾರಿಗೆ ಸಂಸ್ಥೆ ಬಸ್‌‍ ಮುಂಜಾನೆ 2 ಗಂಟೆ ವೇಳೆಗೆ ಹೊಸಕೋಟೆ ಸಮೀಪದ ಗೊಟ್ಟಿಪುರ ಗೇಟ್‌ ಬಳಿ ಬಸ್‌ ಚಾಲಕ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಓವರ್‌ ಟೇಕ್‌ ಮಾಡುವ ಭರದಲ್ಲಿ ಬಸ್‌ ವೇಗವನ್ನು ಹೆಚ್ಚಿಸಿದ್ದರಿಂದ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದರಿಂದ ಈ ಅಪಘಾತ ಸಂಭವಿಸಿದೆ.ಬಸ್‌ ಚಾಲಕ ನಿದ್ದೆಗಣ್ಣಿನಲ್ಲಿ ಬಸ್‌ ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ಲಾರಿಗೆ ಪಕ್ಕದಿಂದ ಬಸ್‌‍ ಡಿಕ್ಕಿ ಹೊಡೆದಿದ್ದು, ಬಸ್‌ನ ಬಲಭಾಗದ 10 ಅಡಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಲಭಾಗದಲ್ಲಿ ಕುಳಿತಿದ್ದವರಲ್ಲಿ ನಾಲ್ವರು ಮರಣ ಹೊಂದಿದ್ದರೆ 16 ಮಂದಿ ಗಾಯಗೊಂಡಿದ್ದಾರೆ.

ಬಸ್‌‍ನಲ್ಲಿದ್ದ ಪ್ರಯಾಣಿಕರಲ್ಲಿ 16 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ನಾಗರಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಂಚಾರಿ ಠಾಣೆ ಪೊಲೀಸರು ಗಾಯಾಳುಗಳನ್ನು ಹೊಸಕೋಟೆಯ ಸಿಲಿಕಾನ್‌ ಸಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಬಸ್‌‍ನೊಳಗೆ ಸಿಕ್ಕಿಕೊಂಡು ಮೃತಪಟ್ಟ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ರಸ್ತೆ ಅಪಘಾತದ ವೇಳೆ ಡಿಕ್ಕಿಯ ರಭಸಕ್ಕೆ ಬಸ್‌‍ನ ಮುಂಭಾಗ ಹಾಗೂ ಒಂದು ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ರೀತಿ ನೋಡಿದರೆ ಚಾಲಕ ನಿದ್ರೆಯ ಮಂಪರಿನಲ್ಲಿ ಓವರ್‌ ಟೇಕ್‌ ಮಾಡಲು ಮುಂದಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

(ವರದಿ- ಎಚ್.ಮಾರುತಿ, ಬೆಂಗಳೂರು)

    ಹಂಚಿಕೊಳ್ಳಲು ಲೇಖನಗಳು