logo
ಕನ್ನಡ ಸುದ್ದಿ  /  ಕರ್ನಾಟಕ  /  Bengaluru News: ಮಂಗಳೂರು ವಿಶ್ವವಿದ್ಯಾಲಯ ಮಾಜಿ ಉಪ ಕುಲಪತಿ ಡಾ.ಕೆ ಭೈರಪ್ಪ ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಹೃದಯಾಘಾತದಿಂದ ನಿಧನ

Bengaluru News: ಮಂಗಳೂರು ವಿಶ್ವವಿದ್ಯಾಲಯ ಮಾಜಿ ಉಪ ಕುಲಪತಿ ಡಾ.ಕೆ ಭೈರಪ್ಪ ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಹೃದಯಾಘಾತದಿಂದ ನಿಧನ

HT Kannada Desk HT Kannada

Jul 31, 2023 03:20 PM IST

google News

ಮಂಗಳೂರು ವಿಶ್ವವಿದ್ಯಾಲಯ ಮಾಜಿ ಉಪ ಕುಲಪತಿ ಡಾ. ಕೆ. ಭೈರಪ್ಪ (69 )

    • ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖ್ಯಾತ ಸಂಶೋಧಕ ಮಂಗಳೂರು ವಿಶ್ವವಿದ್ಯಾಲಯ ಮಾಜಿ ಉಪ ಕುಲಪತಿ ಡಾ. ಕೆ. ಭೈರಪ್ಪ (69 ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯ ಮಾಜಿ ಉಪ ಕುಲಪತಿ ಡಾ. ಕೆ. ಭೈರಪ್ಪ (69 )
ಮಂಗಳೂರು ವಿಶ್ವವಿದ್ಯಾಲಯ ಮಾಜಿ ಉಪ ಕುಲಪತಿ ಡಾ. ಕೆ. ಭೈರಪ್ಪ (69 )

ಬೆಂಗಳೂರು: ಖ್ಯಾತ ಸಂಶೋಧಕ ಮಂಗಳೂರು ವಿಶ್ವವಿದ್ಯಾಲಯ ಮಾಜಿ ಉಪ ಕುಲಪತಿ ಡಾ. ಕೆ. ಭೈರಪ್ಪ (69 ) ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಬೆಳಗಾವಿಗೆ ತೆರಳಲು ಅವರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಮೂಲತಃ ಮೈಸೂರಿನವರಾದ ಅವರು ಮೈಸೂರು ವಿಶ್ವವಿದ್ಯಾಲಯದಿಂದ 1975 ರಲ್ಲಿ ಭೂಗರ್ಭ ಶಾಸ್ತ್ರದಲ್ಲಿ ಎಂ ಎಸ್ಸಿ ಪದವಿ ಪಡೆದಿದ್ದಾರೆ. ನಂತರ 1981 ರಲ್ಲಿ ಮಾಸ್ಕೋ ಸ್ಟೇಟ್ ಯೂನಿವರ್ಸಿಟಿ ಯಿಂದ ಪಿಹೆಚ್ ಡಿ ಪಡೆದಿದ್ದಾರೆ.

ಇವರು ಸ್ಪ್ಯಾನಿಶ್, ಜಪಾನ್ ಮತ್ತು ರಷ್ಯಾ ಭಾಷೆಗಳಲ್ಲಿ ಓದು ಬರಹ ಬಲ್ಲವರಾಗಿದ್ದರು. ಮೆಟೀರಿಯಲ್ ಸೈನ್ಸ್ ವಿಷಯದಲ್ಲಿ ಅಪಾರ ಪಾಂಡಿತ್ಯ ಪಡೆದಿದ್ದರು. 1983 ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ 1998 ರಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರೂ ಹೌದು.

2014-2018 ರ ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ 8 ನೇ ಉಪ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಅವಧಿಯಲ್ಲಿ ಮಂಗಳೂರು ವಿವಿ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿತ್ತು. RUSA ಮತ್ತು PURSE ನಿಧಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಡಾ. ಕೆ. ಭೈರಪ್ಪ ಅವರು ನಿವೃತ್ತಿ ನಂತರ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ವಾಸವಾಗಿದ್ದರು. ಇವರ ಪತ್ನಿ ಸುನೀತಾ ಅವರು ಇಂಗ್ಲಿಷ್ ಭಾಷಾ ಪ್ರಾದ್ಯಾಪಕಿಯಾಗಿ ನಿವೃತ್ತಿ ಹೊಂದಿದ್ದಾರೆ. ಇವರ ಒಬ್ಬ ಪುತ್ರ ಶಯನ್ ಅಮೆರಿಕದಲ್ಲಿ ಉದ್ಯೋಗಿಯಾಗಿದ್ದಾರೆ. ಮತ್ತೊಬ್ಬ ಪುತ್ರ ನಯನ್ ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

(ವರದಿ: ಎಚ್. ಮಾರುತಿ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ