logo
ಕನ್ನಡ ಸುದ್ದಿ  /  ಕರ್ನಾಟಕ  /  Ksrtc Updates: ದೀಪಾವಳಿ ನಿಮಿತ್ತ ಕರ್ನಾಟಕದ ವಿವಿಧೆಡೆಗೆ ಬೆಂಗಳೂರಿಂದ 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ ಕೆಎಸ್‌ಆರ್‌ಟಿಸಿ

KSRTC Updates: ದೀಪಾವಳಿ ನಿಮಿತ್ತ ಕರ್ನಾಟಕದ ವಿವಿಧೆಡೆಗೆ ಬೆಂಗಳೂರಿಂದ 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ ಕೆಎಸ್‌ಆರ್‌ಟಿಸಿ

HT Kannada Desk HT Kannada

Nov 04, 2023 06:04 PM IST

google News

ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಕರ್ನಾಟಕದ ವಿವಿಧಡೆಗೆ 2000 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

  • Diwali festival: ದೀಪಾವಳಿ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ ನವೆಂಬರ್ 10 ರಿಂದ ನವೆಂಬರ್ 12 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ. 

ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಕರ್ನಾಟಕದ ವಿವಿಧಡೆಗೆ 2000 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಕರ್ನಾಟಕದ ವಿವಿಧಡೆಗೆ 2000 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ಬೆಂಗಳೂರು: ದೀಪಾವಳಿ ಸಮೀಪದಲ್ಲಿದೆ. ನವೆಂಬರ್ 12 ರಂದು ನರಕ ಚತುರ್ದಶಿ ಹಾಗೂ ನವೆಂಬರ್ 14 ರಂದು ಬಲಿಪಾಡ್ಯ / ದೀಪಾವಳಿ ಹಬ್ಬ. ಹೀಗಾಗಿ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಹೋಗುವ ಸಾರ್ವಜನಿಕರ ಅನುಕೂಲಕ್ಕಾಗಿ ನವೆಂಬರ್ 10ರಿಂದ 12ರ ತನಕ 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಮಾಡಿರುವುದಾಗಿ ಕೆಎಸ್‌ಆರ್‌ಟಿಸಿ ಶನಿವಾರ ಹೇಳಿದೆ.

ದೀಪಾವಳಿ ಪ್ರಯುಕ್ತ ಕರ್ನಾಟಕದ ವಿವಿಧೆಡೆಗೆ ವಿಶೇಷ ಬಸ್‌ ವ್ಯವಸ್ಥೆ

ದೀಪಾವಳಿ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ ನವೆಂಬರ್ 10 ರಿಂದ ನವೆಂಬರ್ 12 ರವರೆಗೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ.

ಈ ಸಂಬಂಧ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಇದಲ್ಲದೆ, ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 14 ಹಾಗೂ 15 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಹೇಳಿದೆ.

ಇದೇ ರೀತಿ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹಾಗೂ ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿದೆ.

ದೀಪಾವಳಿಗೆ ಬೆಂಗಳೂರಿನಿಂದ ಊರಿಗೆ ತೆರಳುವ ಪ್ರಯಾಣಿಕರ ಗಮನಕ್ಕೆ

  1. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಸಹ ಕಲ್ಪಿಸಲಾಗಿದೆ.
  2. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸಬೇಕು.
  3. ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
  4. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ಸಿಗಲಿದೆ.
  5. ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಸಿಗಲಿದೆ.

ಹೊರ ರಾಜ್ಯಗಳಲ್ಲೂ ಕೆಎಸ್‌ಆರ್‌ಟಿಸಿ ಬಸ್‌ಗಳ ಆಸನ ಮುಂಗಡ ಕಾಯ್ದಿರಿಸಲು ಕೌಂಟರ್‌

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ನಡೆಸಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ