logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ನನ್ನ ಹೆಸರು ಕೈಬಿಡಿ; ಸರ್ಕಾರಕ್ಕೆ ಅಕ್ಕಯ್ ಪದ್ಮಶಾಲಿ ಪತ್ರ

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ನನ್ನ ಹೆಸರು ಕೈಬಿಡಿ; ಸರ್ಕಾರಕ್ಕೆ ಅಕ್ಕಯ್ ಪದ್ಮಶಾಲಿ ಪತ್ರ

Raghavendra M Y HT Kannada

Mar 18, 2024 10:22 AM IST

ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ತಮ್ಮ ಹೆಸರನ್ನು ಕೈಬಿಡಬೇಕೆಂದು ಮನವಿ ಮಾಡಿದ್ದಾರೆ.

    • Akkai Padmashali: ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ತಮ್ಮ ಹೆಸರನ್ನು ಕೈಬಿಡಬೇಕೆಂದು ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ತಮ್ಮ ಹೆಸರನ್ನು ಕೈಬಿಡಬೇಕೆಂದು ಮನವಿ ಮಾಡಿದ್ದಾರೆ.
ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ತಮ್ಮ ಹೆಸರನ್ನು ಕೈಬಿಡಬೇಕೆಂದು ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿರುವ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವ ತಮಗೆ ಬೇಡವೆಂದು ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಹೇಳಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ತಮ್ಮ ನಿಲುವನ್ನು ತಿಳಿಸಿದ್ದಾರೆ. 

ಟ್ರೆಂಡಿಂಗ್​ ಸುದ್ದಿ

Environment day: ವಿಶ್ವ ಪರಿಸರ ದಿನಕ್ಕೆ ಜಾಗತಿಕ ತಾಪಮಾನದ ಮೇಲೆ ಪ್ರಬಂಧ ಬರೆಯಿರಿ, 5000 ರೂ. ಬಹುಮಾನ ಪಡೆಯಿರಿ

Vijayapura News: ವಿಜಯಪುರ ಬಿಎಲ್‌ಡಿಇಯಲ್ಲಿ ಕೌಶಲ್ಯಗಳ ಸಂಗಮ, ತಾಂತ್ರಿಕ ಹಬ್ಬದ ಸಡಗರ

Museums Day 2024: ಬೆಂಗಳೂರು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ಮೈಸೂರು ಮ್ಯೂಸಿಯಂಗಳಿಗೆ ಹೊಸ ರೂಪ, ಏನಿದರ ವಿಶೇಷ

Bangalore Mysore Expressway: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಮೊಬೈಲ್ ನಲ್ಲಿ ಮಾತಾಡಿಕೊಂಡು ಡ್ರೈವ್ ಮಾಡಿದರೆ ದಂಡ ಗ್ಯಾರಂಟಿ

“ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನಾಗಿ ನನ್ನನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ತಮಗೆ ಹಾಗೂ ತಮ್ಮ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ. ಆದರೆ ಇದನ್ನು ತಾವುಗಳು ನನ್ನ ಸದಸ್ಯತ್ವವನ್ನು ಕೈಬಿಡಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

“ನನ್ನನ್ನು ಮುಂಬರುವ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಅಥವಾ ರಾಜ್ಯಸಭೆಯ ಸದಸ್ಯರನ್ನಾಗಿ ಶಾಸನಸಭೆಯ ಭಾಗವಾಗಿ ನಮ್ಮ ಸಮುದಾಯದ ರಾಜಕೀಯ ಪ್ರಾತಿನಿಧ್ಯತೆಯನ್ನು ಸರ್ವ ಜನಾಂಗದ ಶಾಂತಿಯ ತೋಟದ ನಾಡಿನಲ್ಲಿ ಸಾಕ್ಷಿಯಾಗಬೇಕಾಗಿರುವ ವಾತಾವರಣ ನಿರ್ಮಾಣವಾಗಿದೆ. ಇದರ ಬಗ್ಗೆ ತಾವುಗಳು ವಿಶೇಷ ಕಾಳಜಿವಹಿಸಿ ಕ್ರಮವಹಿಸಬೇಕಾಗಿ ವಿನಂತಿಸುತ್ತಿದ್ದೇನೆ” ಎಂದಿದ್ದಾರೆ. ತಮ್ಮ ಹೆಸರನ್ನು ಕೈಬಿಡುವ ಬಗ್ಗೆ ಅಕ್ಕಯ್ ಅವರು ಬರೆದಿರುವ ಪತ್ರವನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ