ಕನ್ನಡ ಸುದ್ದಿ  /  ಕರ್ನಾಟಕ  /  Hassan Sex Scandal: ಈ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂದ ಪ್ರಜ್ವಲ್ ರೇವಣ್ಣ ಚಿಕ್ಕಪ್ಪ ಕುಮಾರಸ್ವಾಮಿ, ಪ್ರಜ್ವಲ್ ಜರ್ಮನಿಗೆ ಪರಾರಿ ಶಂಕೆ

Hassan Sex Scandal: ಈ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂದ ಪ್ರಜ್ವಲ್ ರೇವಣ್ಣ ಚಿಕ್ಕಪ್ಪ ಕುಮಾರಸ್ವಾಮಿ, ಪ್ರಜ್ವಲ್ ಜರ್ಮನಿಗೆ ಪರಾರಿ ಶಂಕೆ

Umesh Kumar S HT Kannada

Apr 29, 2024 01:05 PM IST

ಅಶ್ಲೀಲ ವಿಡಿಯೋ ಹಗರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ (ಎಡಚಿತ್ರ) ಜರ್ಮನಿಗೆ ಪರಾರಿ ಶಂಕೆ ವ್ಯಕ್ತವಾಗಿದೆ. ವಿವಾದದಿಂದ ಜೆಡಿಎಸ್‌ ದೂರ ಉಳಿದಿದ್ದು, ಕಾನೂನಿನಂತೆ ಕ್ರಮ ಜರುಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (ಬಲಚಿತ್ರ) ಹೇಳಿದ್ದಾರೆ.

  • ಅಶ್ಲೀಲ ವಿಡಿಯೋ ಹಗರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ, ವಿವಾದದಿಂದ ಜೆಡಿಎಸ್‌ ದೂರ ಉಳಿದಿದ್ದು, ಕಾನೂನಿನಂತೆ ಎಲ್ಲವೂ ನಡೆಯಲಿದೆ ಎಂದು ಹೇಳಿದೆ. ಈ ಪ್ರಕರಣದಲ್ಲಿ ಇದುವರೆಗಿನ 10 ಅಂಶಗಳು ಹೀಗಿವೆ.

ಅಶ್ಲೀಲ ವಿಡಿಯೋ ಹಗರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ (ಎಡಚಿತ್ರ) ಜರ್ಮನಿಗೆ ಪರಾರಿ ಶಂಕೆ ವ್ಯಕ್ತವಾಗಿದೆ. ವಿವಾದದಿಂದ ಜೆಡಿಎಸ್‌ ದೂರ ಉಳಿದಿದ್ದು, ಕಾನೂನಿನಂತೆ ಕ್ರಮ ಜರುಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (ಬಲಚಿತ್ರ) ಹೇಳಿದ್ದಾರೆ.
ಅಶ್ಲೀಲ ವಿಡಿಯೋ ಹಗರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ (ಎಡಚಿತ್ರ) ಜರ್ಮನಿಗೆ ಪರಾರಿ ಶಂಕೆ ವ್ಯಕ್ತವಾಗಿದೆ. ವಿವಾದದಿಂದ ಜೆಡಿಎಸ್‌ ದೂರ ಉಳಿದಿದ್ದು, ಕಾನೂನಿನಂತೆ ಕ್ರಮ ಜರುಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (ಬಲಚಿತ್ರ) ಹೇಳಿದ್ದಾರೆ.

ಬೆಂಗಳೂರು: ಹಾಸನದ ಹಾಲಿ ಸಂಸದ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ, ಈ ವಿವಾದದಿಂದ ಪಕ್ಷವು ದೂರ ಉಳಿದಿದೆ. ಪ್ರಜ್ವಲ್ ವಿದೇಶಕ್ಕೆ ಹೋಗಿದ್ದರೆ, ವಿಡಿಯೋ ತನಿಖೆಗಾಗಿ ಎಸ್ಐಟಿ ರಚಿಸಿರುವ ಸರ್ಕಾರ ಅವರನ್ನು ವಾಪಸ್ ಕರೆತರುತ್ತದೆ. ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಮತ್ತು ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪನೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಕಮಲಾನಗರದ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ, ಒಂದು ವರ್ಷದ ಬಳಿಕ ಸೆರೆ ಸಿಕ್ಕ ಕಳ್ಳ; ಇನ್ನೆರಡು ಅಪರಾಧ ಸುದ್ದಿಗಳು

ಬೆಂಗಳೂರು ಅಪರಾಧ ಸುದ್ದಿ; 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಯಶಸ್ವಿ ಕಾರ್ಯಾಚರಣೆ, 2.74 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶ

ಕರ್ನಾಟಕ ಅಣೆಕಟ್ಟೆ ನೀರಿನ ಮಟ್ಟ ಮೇ 15; ರಾಜ್ಯದ 22 ಜಲಾಶಯಗಳ ಪೈಕಿ ಬರಿದಾಗಿವೆ 8 ಡ್ಯಾಮ್‌ಗಳು, ಬಳಕೆಗೆ ಸಿಗುವ ನೀರು ಶೇಕಡ 8.81 ಮಾತ್ರ

ಹಾಸನ ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಕೇಸ್ ಏನಾಯಿತು, ಇದುವರೆಗಿನ 10 ವಿದ್ಯಮಾನ

"ನಾನು ಅಥವಾ ಎಚ್.ಡಿ.ದೇವೇಗೌಡ ಅವರೇ ಆಗಿರಲಿ, ನಾವು ಯಾವಾಗಲೂ ಮಹಿಳೆಯರನ್ನು ಗೌರವಿಸುತ್ತೇವೆ. ಅವರು ದೂರುಗಳೊಂದಿಗೆ ಬಂದಾಗಲೆಲ್ಲಾ ನಾವು ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ. ಸಿಎಂ ಈಗಾಗಲೇ ಎಸ್ಐಟಿ ತನಿಖೆಗೆ ಆದೇಶಿಸಿದ್ದಾರೆ ಮತ್ತು ಎಸ್ಐಟಿ ತನಿಖೆ ಪ್ರಾರಂಭವಾಗಿದೆ... ಎಸ್ಐಟಿ ತಂಡವು ಅವರು ವಿದೇಶಕ್ಕೆ ಹೋಗಿದ್ದರೆ ಅವರನ್ನು ಅಲ್ಲಿಂದ ಕರೆತರಲಿದೆ. ಅದು ನನ್ನ ಕಾಳಜಿಯಲ್ಲ" ಎಂದು ಕುಮಾರಸ್ವಾಮಿ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದರು.

ಪ್ರಜ್ವಲ್‌ ರೇವಣ್ಣ ಯಾರು? ಅಶ್ಲೀಲ ವೀಡಿಯೊಗಳ ಹಗರಣವೇನು? - 10 ಅಂಶಗಳ ವಿವರ

1) ಹಾಸನದಲ್ಲಿ ಏಪ್ರಿಲ್ 26 ರಂದು ನಡೆದ ಲೋಕಸಭಾ ಚುನಾವಣೆಯ ಮತದಾನಕ್ಕೆ ಎರಡು ದಿನಗಳ ಮೊದಲು ಈ ವಿಡಿಯೋಗಳು ಬೆಳಕಿಗೆ ಬಂದವು. ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕ್ಷೇಪಾರ್ಹ ವಿಡಿಯೋಗಳ ಬಗ್ಗೆ ಎಸ್ಐಟಿ ತನಿಖೆಗೆ ಆದೇಶಿಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಏಪ್ರಿಲ್ 25 ರಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದರು. ಆದರೆ, ಈ ವಿಡಿಯೋ 'ಮಾರ್ಫಿಂಗ್' ಎಂದು ಕರೆದಿರುವ ಜೆಡಿಎಸ್‌ ಹೇಳಿತ್ತು.

2) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 27 ರಂದು ಈ ಪ್ರಕರಣದ ತನಿಖೆಗಾಗಿ ಎಸ್ಐಟಿಯನ್ನು ರಚಿಸುವುದಾಗಿ ಘೋಷಿಸಿದರು. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿದೆ. ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿವೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

3) ಎಸ್ಐಟಿ ಘೋಷಣೆಗೂ ಮುನ್ನ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಫ್ರಾಂಕ್‌ಫರ್ಟ್‌ಗೆ ತೆರಳಿದ್ದರು ಎಂದು ವರದಿಯಾಗಿದೆ. ಆದರೆ ಅವರ ಪಕ್ಷವು ಈ ಹೇಳಿಕೆಯನ್ನು ದೃಢಪಡಿಸಿಲ್ಲ ಅಥವಾ ತಳ್ಳಿಹಾಕಿಲ್ಲ.

4) ಮಿತ್ರಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರ ವಿವಾದಕ್ಕೆ ಸಂಬಂಧಿಸಿದ ಬಿಜೆಪಿ ಅಂತರವನ್ನು ಕಾಯ್ದುಕೊಂಡಿದೆ. ಅಶ್ಲೀಲ ಟೇಪ್ ಅಥವಾ ಎಸ್ಐಟಿ ರಚನೆಯ ಬಗ್ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

5) ಪ್ರಜ್ವಲ್ ರೇವಣ್ಣ ದೇಶದಿಂದ ಹೊರಗಿದ್ದಾರೆ ಎಂದು ನಂಬಲಾಗಿದ್ದರೂ, ಅವರ ಮತಗಟ್ಟೆ ಏಜೆಂಟ್ ವಿಡಿಯೋಗಳಿಗೆ ಸಂಬಂಧಿಸಿ ಪೊಲೀಸ್ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಮಾರ್ಫಿಂಗ್ ಮಾಡಿದ ವೀಡಿಯೊಗಳು ಎಂದು ಪ್ರಜ್ವಲ್ ರೇವಣ್ಣ ಅವರ ಮತಗಟ್ಟೆ ಏಜೆಂಟ್ ದೂರಿನಲ್ಲಿ ತಿಳಿಸಿದ್ದಾರೆ.

6) ಪ್ರಜ್ವಲ್ ರೇವಣ್ಣ (33) 2019 ರಲ್ಲಿ ಮೊದಲ ಬಾರಿಗೆ ಹಾಸನ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 2004 ರಿಂದ 2019 ರವರೆಗೆ ಎಚ್.ಡಿ.ದೇವೇಗೌಡ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಕ್ಷಿಪ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಸೂಚನೆ

7) ಈ ನಡುವೆ, ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಕ್ಷಿಪ್ರವಾಗಿ ನಡೆಸಿ ವರದಿ ಸಲ್ಲಿಸಬೇಕು ಎಂದು ಎಸ್‌ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು‌.

8) ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಿದ್ದು, ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡಿದೆ. ಅವುಗಳನ್ನು ವೈಜ್ಞಾನಿಕ ವರದಿಗಾಗಿ ಎಫ್‌ಎಸ್‌ಎಲ್‌ಗೆ ರವಾನಿಸಿ ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಿದೆ. ಎಸ್‌ಐಟಿ ತನಿಖಾ ವರದಿ ಸಲ್ಲಿಕೆಗೆ ಸಮಯದ ಚೌಕಟ್ಟು ನಿಗದಿಮಾಡಿಲ್ಲ.

9) ಮಹಿಳಾ ಆಯೋಗವು ಬರೆದ ಪತ್ರದ ಆಧಾರದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದೂರುಗಳನ್ನು ಎಸ್‌ಐಟಿ ಪಡೆಯಲಿದೆ. ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಸ್‌ಐಟಿ ಕೆಲಸ ಮಾಡಲಿದೆ. ಸಂತ್ರಸ್ತರಿಗೆ ಜೀವ ಭಯವಿದ್ದರೆ ಪೊಲೀಸ್ ಭದ್ರತೆ ಒದಗಿಸಲು ಸರ್ಕಾರ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ.

10) “ಘಟನೆಯ ಸಮಯವನ್ನು ಗಮನಿಸಿದರೆ, ಹಾಸನ ಲೈಂಗಿಕ ಹಗರಣವನ್ನು ಯಾರೋ ಮೊದಲೇ ಯೋಜಿಸಿದ್ದಾರೆ ಎಂದು ತೋರುತ್ತದೆ. ಕೆಲವು ವೀಡಿಯೋಗಳು ನಕಲಿ ಎಂದು ನಾನು ಕೇಳಲ್ಪಟ್ಟಿದ್ದೇನೆ.. ಇದೇ ರೀತಿಯ ಹಲವು ವಿಡಿಯೋಗಳು ಹರಿದಾಡುತ್ತಿವೆ, ಆದರೆ ಈ ಬಗ್ಗೆ ಎಸ್‌ಐಟಿ ತನಿಖೆ ಏಕೆ?" ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ ಪ್ರಶ್ನಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ