ಕನ್ನಡ ಸುದ್ದಿ  /  ಕರ್ನಾಟಕ  /  ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ರಾಕ್‌ಲೈನ್ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ; 11.51 ಕೋಟಿ ರೂ ತೆರಿಗೆ ಪಾವತಿ ಬಾಕಿ

ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ರಾಕ್‌ಲೈನ್ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ; 11.51 ಕೋಟಿ ರೂ ತೆರಿಗೆ ಪಾವತಿ ಬಾಕಿ

Praveen Chandra B HT Kannada

Feb 14, 2024 07:21 PM IST

ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ರಾಕ್‌ಲೈನ್ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

    • ಕಾಟೇರ ಸಿನಿಮಾ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ರಾಕ್‌ಲೈನ್‌ ಮಾಲ್‌ಗೆ ಬೃಹತ್‌ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬುಧವಾರ ಬೀಗ ಜಡಿದಿದ್ದಾರೆ. ರಾಕ್‌ಲೈನ್ ಮಾಲ್ 2011 ರಿಂದ ಆಸ್ತಿ ತೆರಿಗೆ ಪಾವತಿಸಿಲ್ಲ ಮತ್ತು 11.50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಬಿಬಿಎಂಪಿ ತಿಳಿಸಿದೆ.
ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ರಾಕ್‌ಲೈನ್ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ
ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ರಾಕ್‌ಲೈನ್ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಕಾರಣ ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಕನ್ನಡ ಚಲನಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಮಾಲೀಕತ್ವದ ಮಾಲ್‌ಗೆ ಬೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬೀಗ ಜಡಿದಿದ್ದಾರೆ. ತುಮಕೂರು ರಸ್ತೆಯಲ್ಲಿ ಈ ಮಾಲ್ ಅನ್ನು ಕಾಣಬಹುದು.

ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಬಂದಿಲ್ಲ; ಲೋಕಸಭಾ ಚುನಾವಣೆ ಫಲಿತಾಂಶ ತನಕ ಬರುವ ನಿರೀಕ್ಷೆಯೂ ಇಲ್ಲ, ಎಸ್‌ಐಟಿ ಮೂಲ ಹೇಳಿಕೆ

ವಿಜಯಪುರದಿಂದ ಅಯೋಧ್ಯೆಗೆ ಬೈಕ್ ಸವಾರಿ; ಪ್ರಯಾಣಕ್ಕೆಷ್ಟು ದಿನ, ರೂಟ್ ಯಾವುದು ಶಿವಾನಂದ ಪರೀಟ ಅನುಭವ ಕಥನ

ಬಿಬಿಎಂಪಿಗೆ 10 ವರ್ಷದ ಹಿಂದೆ ಸೇರ್ಪಡೆಯಾದ 110 ಗ್ರಾಮಗಳಿಗೆ ಕಾವೇರಿ 5 ನೇ ಹಂತದಲ್ಲಿ ನೀರಿನ ಸಂಪರ್ಕ, ಅಧಿಕಾರಿಗಳಿಗೆ ಜಲಮಂಡಳಿ ಸೂಚನೆ

Anjali Murder Case; ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ನೆನಪು ಮಾಸುವ ಮೊದಲೇ 20 ವರ್ಷದ ಅಂಜಲಿಯ ಭೀಕರ ಹತ್ಯೆ, 10 ಅಂಶಗಳ ವಿವರ ವರದಿ

ರಾಕ್‌ಲೈನ್ ಮಾಲ್‌ ವಿರುದ್ದ ಕೋಟ್ಯಂತರ ರೂಪಾಯಿ ಆಸ್ತಿ ತೆರಿಗೆ ವಂಚನೆ ಆರೋಪ ಕೇಳಿಬಂದಿತ್ತು. ತೆರಿಗೆ ಪಾವತಿಸುವಂತೆ ಬಿಬಿಎಂಪಿ ಅಧಿಕಾರಿಗಳು ಹಲವು ಬಾರಿ ನೋಟಿಸ್ ನೀಡಿದ್ದರೂ ರಾಕ್‌ಲೈನ್ ಮಾಲ್‌ ತೆರಿಗೆ ಪಾವತಿಸಿರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2021ರಲ್ಲಿ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಗೆ ರೂಪಾಯಿ 11.51 ಕೋಟಿ ಮೊತ್ತದ ತೆರಿಗೆ ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಮಾಜಿ ಪಾಲಿಕೆ ಸದಸ್ಯ ಎನ್.ಆರ್. ರಮೇಶ್ ಗಂಭೀರ ಆರೋಪ ಮಾಡಿದ್ದರು.

ಬಿಬಿಎಂಪಿಯ ದಾಸರಹಳ್ಳಿ ವಲಯದ ವ್ಯಾಪ್ತಿಯಲ್ಲಿ 1,22,743 ಚದರ ಅಡಿ ವಿಸ್ತಾರದಲ್ಲಿ ಈ ಮಾಲ್ ನಿರ್ಮಾಣಗೊಂಡಿದೆ. ಆದರೂ ಕೇವಲ 48,500 ಚದರ ಅಡಿ ವಿಸ್ತೀರ್ಣದಲ್ಲಿ ಮಾಲ್ ನಿರ್ಮಾಣ ಮಾಡಲಾಗಿದೆ ಎಂದು ಬಿಬಿಎಂಪಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಆರು ಮಹಡಿ ಸೇರಿದಂತೆ 1,22,743 ಚದರ ಅಡಿ ವಿಸ್ತಾರದಲ್ಲಿ ಈ ಮಾಲ್ ನಿರ್ಮಾಣಗೊಂಡಿದೆ ಎಂದು ರಮೇಶ್ ಆಪಾದಿಸಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ಮಹಾಲೆಕ್ಕ ಪರಿಶೋಧಕರ ಕಚೇರಿಯ ಅಧಿಕಾರಿಗಳು ಮತ್ತು ದಾಸರಹಳ್ಳಿ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು ನಡೆಸಿದ ಜಂಟಿ ಸಮೀಕ್ಷೆ ನಡೆಸಿದ್ದರು. ಈ ಸಮೀಕ್ಷೆ ಕಾರ್ಯದಲ್ಲಿ ಪಾಲಿಕೆಗೆ ಬೃಹತ್‌ ಮೊತ್ತದ ತೆರಿಗೆ ವಂಚಿಸಿರುವುದು ಪತ್ತೆಯಾಗಿತ್ತು. ರಾಕ್ ಲೈನ್ ಮಾಲ್ ನಲ್ಲಿ 74,243 ಚದರ ಅಡಿ ವಿಸ್ತೀರ್ಣವನ್ನು ಮುಚ್ಚಿಟ್ಟು, ಪಾಲಿಕೆಗೆ ತೆರಿಗೆ ವಂಚಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಮಾಲ್ ನವರು 2012ರ ಅ.25ರಂದು ರೂಪಾಯಿ 3.78 ಲಕ್ಷ ಮಾತ್ರ ತೆರಿಗೆ ಪಾವತಿಸಿದ್ದಾರೆ. ಬಡ್ಡಿ ಸೇರಿದಂತೆ ರೂ. 2.63 ಕೋಟಿ ಪಾವತಿಸುವಂತೆ 2015ರಲ್ಲಿಯೇ ಬಿಬಿಎಂಪಿಯು ರಾಕ್‌ಲೈನ್‌ ವೆಂಕಟೇಶ್‌ ಅವರಿಗೆ ನೋಟಿಸ್ ನೀಡಿತ್ತು. ಆದರೆ ಅವರು ಪಾಲಿಕೆ ನೀಡಿದ್ದ ನೋಟಿಸ್‌ಗಳನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದರು. ಇದೀಗ ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

2011–12ರಿಂದ 2020–21ರವರೆಗಿನ ಅವಧಿಯವರೆಗೆ ಒಟ್ಟು ರೂ. 3.8 ಕೋಟಿ ಆಸ್ತಿ ತೆರಿಗೆ, ವಾರ್ಷಿಕ ಬಡ್ಡಿದರ, ದಂಡ ಸೇರಿ, ರೂ. 8.51 ಕೋಟಿ ತೆರಿಗೆ ಪಾವತಿಸಬೇಕಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಮಾಲ್ ಗಳು, ಐಟಿ ಕಂಪನಿಗಳು ಮತ್ತು ಬೃಹತ್ ವಾಣಿಜ್ಯ ಮಳಿಗೆಗಳು ತೆರಿಗೆ ಬಾಕಿ ಉಳಿಸಿಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ. ಇಂತಹ ಕಟ್ಟಡಗಳ ಮಾಲೀಕರು ಪ್ರಭಾವಿಗಳೇ ಆಗಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳಲು ಹಿಂದೇಟು ಹಾಕಲಾಗುತ್ತಿದೆ.

ವರದಿ: ಎಚ್. ಮಾರುತಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ