logo
ಕನ್ನಡ ಸುದ್ದಿ  /  ಕರ್ನಾಟಕ  /  Bescom News; ಕರೆಂಟ್ ಬಿಲ್ ಪಾವತಿಸಿಲ್ವಾ, ಸೆ 1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

BESCOM News; ಕರೆಂಟ್ ಬಿಲ್ ಪಾವತಿಸಿಲ್ವಾ, ಸೆ 1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

Umesh Kumar S HT Kannada

Aug 31, 2024 05:58 PM IST

google News

ಸೆ 1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

  • Bengaluru News; ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ ಗಳನ್ನು ಈ ಭಾನುವಾರವೂ ತೆರೆಯಲು ಬೆಸ್ಕಾಂ ನಿರ್ಧರಿಸಿದೆ. ಇದರ ಪ್ರಯೋಜನ ಪಡೆಯಬೇಕು ಎಂದು ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡ ಗ್ರಾಹಕರಲ್ಲಿ ಅದು ಮನವಿ ಮಾಡಿದೆ.

ಸೆ 1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್
ಸೆ 1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

ಬೆಂಗಳೂರು: ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗಬಾರದು. ಅವರು ವಿದ್ಯುತ್ ಪಾವತಿಸುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಕಾರಣಕ್ಕೆ ಸೆ.1ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರದಿರಲಿವೆ ಎಂದು ಬೆಸ್ಕಾಂ ಶನಿವಾರ (ಆಗಸ್ಟ್ 31) ತಿಳಿಸಿದೆ.

ಬಿಲ್ ಬಂದ 30 ದಿನಗಳ ಒಳಗೆ ಹಣ ಪಾವತಿಸಿ ರಸೀದಿ ಪಡೆದುಕೊಂಡಿರದಿದ್ದಲ್ಲಿ ಮತ್ತು ಹೆಚ್ಚುವರಿ ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಬೆಸ್ಕಾಂ ಶುಕ್ರವಾರ (ಆಗಸ್ಟ್‌ 30) ಸಾರ್ವಜನಿಕ ಪ್ರಕಟಣೆ ಹೊರಡಿಸಿತ್ತು. ಈ ನಿಯಮ ಸೆಪ್ಟೆಂಬರ್‌ 1ರಿಂದಲೇ ಈ ನಿಯಮ ಜಾರಿಯಾಗಲಿದೆ ಎಂದೂ ಹೇಳಿತ್ತು.

ಆನ್‌ಲೈನ್ ಪಾವತಿಗೂ ಅವಕಾಶ ಇದೆ, ಬಳಸದವರಿಗೆ ಕ್ಯಾಶ್‌ ಕೌಂಟರ್ ತೆರೆದಿರಲಿದೆ

ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ ಗಳನ್ನು ಈ ಭಾನುವಾರವೂ ತೆರೆಯಲು ನಿರ್ಧರಿಸಲಾಗಿದ್ದು, ಆನ್‌ಲೈನ್‌ ಪೇಮೆಂಟ್‌ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಬೆಸ್ಕಾಂ ಶನಿವಾರ ತಿಳಿಸಿದೆ.

ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನವೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಈಗಾಗಲೇ ಮನವಿ ಮಾಡಿಕೊಂಡಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿಯಲ್ಲಿ ಶೂನ್ಯ ಬಿಲ್‌ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಬೆಸ್ಕಾಂ ಸ್ಪಷ್ಟ ಪಡಿಸಿದೆ.

ಆನ್‌ಲೈನ್ ಮೂಲಕವೂ ಗ್ರಾಹಕರು ಬಿಲ್ ಪಾವತಿಸಬಹುದಾಗಿದ್ದು, ಅದರ ವಿವರವನ್ನೂ ಬೆಸ್ಕಾಂ ಈ ಹಿಂದೆಯೇ ಟ್ವೀಟ್ ಮೂಲಕ ಹೇಳಿತ್ತು.

ಬೆಸ್ಕಾಂ ಶುಕ್ರವಾರ ಹೇಳಿರುವುದೇನು?

ವಿದ್ಯುತ್ ಬಿಲ್ ನೀಡಿದ ದಿನದಿಂದ 15 ದಿನಗಳ ಕಾಲಾವಕಾಶ ಬಿಲ್ ಪಾವತಿಗೆ ಇರುತ್ತದೆ. ಇದಾಗಿ 15 ದಿನ ಬಾಕಿ ಮೊತ್ತಕ್ಕೆ ಬಡ್ಡಿ ಸೇರಿಸಿ ಕಟ್ಟುವುದಕ್ಕೆ ಅವಕಾಶ ನೀಡಿದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಮನೆ, ಅಂಗಡಿ ಮುಂಗಟ್ಟು, ಕೈಗಾರಿಕೆ ಅಥವಾ ಯಾವುದೇ ಸ್ಥಾಪನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿತ್ತು.

ಬೆಸ್ಕಾಂ ಈ ನಿಯಮವನ್ನು ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಪಾಲಿಸಲು ನಿರ್ಧರಿಸಿದ್ದು, ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಹೇಳಿದೆ. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸಬೇಕು ಎಂದು ಕೇಳಿಕೊಂಡಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ